ಬೆಂಗಳೂರು, (ಫೆ.23): ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಸಭಾಪತಿಯಾಗಿ ಅಧಿಕಾರ ವಹಿಸಿಕೊಂಡಿರುವ ಕಾರಣ ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ ದೇವೇಗೌಡರಿಗೆ ಇಂದು (ಮಂಗಳವಾರ) ರಾಜೀನಾಮೆ ಪತ್ರ ಕಳುಹಿಸಿದ್ದಾರೆ.

ಚುನಾವಣೆ ಕಣದಿಂದ ಕೈ ಹಿಂದಕ್ಕೆ: ಬಸವರಾಜ ಹೊರಟ್ಟಿ ಅವಿರೋಧ ಆಯ್ಕೆ

ಫೆಬ್ರವರಿ 9ರಂದು ನಡೆದ ಪರಿಷತ್ ಸಭಾಪತಿ ಚುನಾವಣಾ ಪ್ರಕ್ರಿಯೆಯಲ್ಲಿ ಕಾಂಗ್ರೆಸ್​ ಭಾಗಿಯಾಗಿರಲಿಲ್ಲ.  ಹಿನ್ನೆಲೆಯಲ್ಲಿ ಬಸವರಾಜ ಹೊರಟ್ಟಿ ಅವರು ಬಿಜೆಪಿ ಬೆಂಬಲದೊಂದಿಗೆ ಅವಿರೋಧವಾಗಿ ಸಭಾಪತಿಯಾಗಿ ಆಯ್ಕೆಯಾಗಿದ್ದರು.