Asianet Suvarna News Asianet Suvarna News

Badami Constituency: ಸಿದ್ದರಾಮಯ್ಯ ವಿರುದ್ಧ ತಿರುಗಿಬಿದ್ದ ಬಾದಾಮಿ ಕ್ಷೇತ್ರ ಬಿಟ್ಟುಕೊಟ್ಟಿದ್ದ ನಾಯಕ

 * ಸಿದ್ದರಾಮಯ್ಯ ವಿರುದ್ಧ ತಿರುಗಿಬಿದ್ದ ಬಾದಾಮಿ ಕ್ಷೇತ್ರ ಬಿಟ್ಟುಕೊಟ್ಟಿದ್ದ ನಾಯಕ
* ಬಾದಾಮಿ ಬಿಟ್ಟು ನಿಮ್ಮ ಕ್ಷೇತ್ರಕ್ಕೆ ಹೋಗುವಂತೆ ಆಗ್ರಹ
* ಪರಿಷತ್ ಚುನಾವಣೆ ಪ್ರಚಾರದ ಸಭೆಯಲ್ಲಿ ಬಹಿರಂಗವಾಗಿ ಹೇಳಿದ ನಾಯಕ
* ಚಿಮ್ಮನಕಟ್ಟಿ ಮಾತಿನಿಂದ ಸಿದ್ದರಾಮಯ್ಯಗೆ ಮುಜುಗರ

bb chimmanakatti upset On siddaramaiah Over badami constituency rbj
Author
Bengaluru, First Published Dec 6, 2021, 4:09 PM IST

ಬಾಗಲಕೋಟೆ, (ಡಿ.06)): ಇಲ್ಲಿ ನಡೆದ ಪರಿಷತ್ ಚುನಾವಣಾ (MLC Election) ಸಭೆಯಲ್ಲಿ ಕಾಂಗ್ರೆಸ್ ನಾಯಕ ಬಿ.ಬಿ ಚಿಮ್ಮನಕಟ್ಟಿ (BB Chimmanakatti) ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಸಿದ್ದರಾಮಯ್ಯ ಹಾಗೂ ಬೆಂಬಲಿಗರು ತಮ್ಮನ್ನು ಕಡೆಗಣಿಸಿದ್ದಾರೆ ಎಂಬ ವಿಚಾರಕ್ಕಾಗಿ ಅಸಮಾಧಾನಗೊಂಡಿರುವ ಚಿಮ್ಮನಕಟ್ಟಿ, ಬಾಗಲಕೋಟೆ (Bagalkot) ಜಿಲ್ಲೆಯ ಬಾದಾಮಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪರಿಷತ್ ಚುನಾವಣಾ ಪ್ರಚಾರ ವೇದಿಕೆಯಲ್ಲಿ ಭಾವುಕರಾಗಿದ್ದಾರೆ.

council Election karnataka : ಕಾಂಗ್ರೆಸ್‌ನಲ್ಲಿ ನಿಲ್ಲದ ಶೀತಲ ಸಮರ : ಅಭ್ಯರ್ಥಿ ಗೆಲುವಿಗೆ ಅಡ್ಡಿ

ಹೌದು... ನಗರದ ಅಕ್ಕಮಹಾದೇವಿ ಕಲ್ಯಾಣ ಮಂಟಪದಲ್ಲಿ ಇಂದು ನಡೆದ (ಡಿ.06) ವಿಧಾನಪರಿಷತ್ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಬಹಿರಂಗವಾಗಿಯೇ ಚಿಮ್ಮನಕಟ್ಟಿ, ವರುಣಾ ಬಿಟ್ಟು ಬಾದಾಮಿಗೆ ಯಾಕೆ ಬಂದ್ರಿ ಎಂದು ಪ್ರಶ್ನಿಸಿದ್ದಾರೆ. ಇದರಿಂದ  ವೇದಿಕೆಯಲ್ಲಿದ್ದ ಸಿದ್ದರಾಮಯ್ಯಗೆ ಮುಜಗರವಾಗಿದೆ.

ಚಿಮ್ಮನಕಟ್ಟಿ ಹೇಳಿದ್ದೇನು?
ನನ್ನನ್ನು ಪರಿಷತ್ ಸದಸ್ಯರಾಗಿ ಮಾಡುವುದಾಗಿ ಹೇಳಿದ್ದರು. ಆದರೆ ಪರಿಷತ್ ಸದಸ್ಯರನ್ನಾಗಿ ಮಾಡಿದರಾ? ಈ ಬಗ್ಗೆ ಎಷ್ಟು ನೋವು ಅನುಭವಿಸಿದ್ದೇನೆ ಎಂದು ನನಗೆ ಗೊತ್ತು. ನಾನು ಐದಾರು ಸಲ ಶಾಸಕ ಆಗಿದ್ದೆ. ಮಂತ್ರಿ ಆಗಿದ್ದೆ. ನನ್ನ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಬಂದು ನಿಂತ್ರು. ಈಗ ಅವರು ತಮ್ಮೂರು ಇರುವ ವರುಣಾ ಕ್ಷೇತ್ರದಲ್ಲಿ ನಿಲ್ಲಲಿ ಎಂದು ಚಿಮ್ಮನಕಟ್ಟಿ ಹೇಳಿದ್ದಾರೆ.

"

ನಮ್ಮನ್ನ ಹುಲಿ ಹೋಗಿ ಇಲಿ ಮಾಡಿದ್ದೀರಿ. ಮುಂದಿನ ಸಲ ಸಿದ್ದರಾಮಯ್ಯ ವರುಣಾ ಕ್ಷೇತ್ರದಲ್ಲಿ ನಿಲ್ತಾರೆ. ಸಿದ್ದರಾಮಯ್ಯ ಮಗನ ಬಿಟ್ಟು ತಾವೇ ಸ್ಪರ್ಧಿಸಿದ್ರೆ ಗೆಲ್ತಿದ್ರು. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲ್ಲುವ ಯೋಗ್ಯತೆ ಇಲ್ಲದಿದ್ರೆ ಅವರು ಯಾಕೆ ಸ್ಪರ್ಧಿಸಬೇಕಿತ್ತು. ಸ್ವಕ್ಷೇತ್ರದಲ್ಲೇ ಸಿದ್ದರಾಮಯ್ಯ ಗೆಲ್ಲಬೇಕು ಎಂದು ಚಾಲೆಂಜ್ ಮಾಡಿದ್ದಾರೆ. ಅದನ್ನ ಬಿಟ್ಟು ನಮಗೆ ಗಂಟುಬಿದ್ದರೆ ನಾವೇನು ಮಾಡಬೇಕು ಎಂದು ಮಾಜಿ ಶಾಸಕ ಚಿಮ್ಮನಕಟ್ಟಿ ಪ್ರಶ್ನೆ ಮಾಡಿದ್ದಾರೆ.

 ಬಾದಾಮಿಯಿಂದ (Badami) ಸ್ಪರ್ಧಿಸುವುದಾಗಿ ಬಿ.ಬಿ. ಚಿಮ್ಮನಕಟ್ಟಿ ಹೇಳಿದ್ದಾರೆ. ಬಾದಾಮಿಯಿಂದ ಸ್ಪರ್ಧೆ ಮಾಡಿ ಗೆದ್ದು, ಮಂತ್ರಿಯಾಗುತ್ತೇನೆ ಎಂದು ಪ್ರಚಾರದ ವೇದಿಕೆಯಲ್ಲಿ ಮಾಜಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ ಹೇಳಿದರು.

ಸಭೆಯಲ್ಲಿ ಗೊಂದಲ
ಚಿಮ್ಮನಕಟ್ಟಿ  ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ  ಸಿದ್ದರಾಮಯ್ಯಗೆ ಬಾದಾಮಿ ಮತಕ್ಷೇತ್ರ ಬಿಟ್ಟುಕೊಟ್ಟಿದ್ದರು. ಇದೀಗ ಚಿಮ್ಮನಕಟ್ಟಿ ನನ್ನ ಕ್ಷೇತ್ರ ನನಗೆ ಬಿಟ್ಟು ನಿಮ್ಮ ವರುಣಾ ಕ್ಷೇತ್ರಕ್ಕೆ ಹೋಗಿ ಎಂದು ಬಹಿರಂಗವಾಗಿಯೇ ಹೇಳಿದ್ದು,ಸಿದ್ದರಾಮಯ್ಯಗೆ ತೀವ್ರ ಮುಜುಗರ ಉಂಟಾಗಿದೆ

ಇನ್ನ ಮಾತಿಗೆ ಕೆಲವರಿಂದ ಕೇಕೆ, ಇನ್ನು ಕೆಲವರಿಂದ ಅಸಮಾಧಾನ ವ್ಯಕ್ತವಾಗಿದೆ. ಅತ್ತ ಸಿದ್ದರಾಮಯ್ಯ ಪರ ಅಭಿಮಾನಿಗಳ ಘೋಷಣೆಗಳನ್ನು ಕೂಗಿದ್ರೆ, ಇತ್ತ ಚಿಮ್ಮನಕಟ್ಟಿ ಸಮಾಧಾನಪಡಿಸಲು ಕೆಲ ಅಭಿಮಾನಿಗಳು ಮುಂದಾದರು. 

ಒಟ್ಟಿನಲ್ಲಿ ಮಾಜಿ ಸಚಿವ ಚಿಮ್ಮನಕಟ್ಟಿ ಮಾತಿನಿಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪ್ರಚಾರ ಸಭೆ ಗೊಂದಲದ ಗೂಡಾಯ್ತು.  

ಬಾದಾಮಿಯಲ್ಲೇ ಸ್ಪರ್ಧಿಸುವುದಾಗಿ ಹೇಳಿದ್ದ ಸಿದ್ದು
ಯೆಸ್..ಈಗಾಗಲೇ ಸಿದ್ದರಾಮಯ್ಯ ಅವರು ಮುಂಬರು ವಿಧಾನಸಭಾ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎನ್ನುವ ಗೊಂದಲಗಳು ಸೃಷ್ಟಿಯಾಗಿದ್ದವು. ಜಮೀರ್ ಅವರ ಚಾಮರಾಜಪೇಟೆ, ಕೋಲಾರ ಹಾಗೂ ಕೊಪ್ಪಳ ಕ್ಷೇತ್ರಗಳ ಹೆಸರುಗಳು ಕೇಳಿಬಂದಿದ್ದವು. ಆದ್ರೆ, ಬಾದಾಮಿ ಕ್ಷೇತ್ರದ ನೂರಾರು ಮುಖಂಡರು ಬೆಂಗಳೂರಿನ ಸಿದ್ದು ನಿವಾಸಕ್ಕೆ ಆಗಮಿಸಿ ಯಾವುದೇ ಕಾರಣಕ್ಕೂ ಕ್ಷೇತ್ರ ಬದಲಾವಣೆ ಮಾಡದಂತೆ ಒತ್ತಾಯಿಸಿದ್ದರು. 

ಆ ವೇಳೆ ಸಿದ್ದರಾಮಯ್ಯ ಅವರು ಮುಂದಿನ ಚುನಾವಣೆಯಲ್ಲಿ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಬೆಂಬಲಿಗರಿಗೆ ಮಾತುಕೊಟ್ಟಿದ್ದಾರೆ. ಆದ್ರೆ, ಇದೀಗ ಚಿಮ್ಮನಕಟ್ಟಿ ಸಿಡಿದೆದ್ದಿದ್ದು, ಸಿದ್ದರಾಮಯ್ಯ ಹಾಗೂ ಅವರ ಅಭಿಮಾನಿಗಳು ದೊಡ್ಡ ತಲೆನೋವು ಶುರುವಾಗಿದೆ.

Follow Us:
Download App:
  • android
  • ios