ಬಿಬಿಎಂಪಿ ಕಾಯ್ದೆಗೆ ರಾಜ್ಯಪಾಲ ವಜುಭಾಯಿ ವಾಲಾ ಸಹಿ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಜ.11ರಿಂದ ಹೊಸ ಆಡಳಿತ ವ್ಯವಸ್ಥೆ ಜಾರಿಯಾಗಲಿದೆ.
ಬೆಂಗಳೂರು, (ಜ.8): ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಡಳಿತ ವ್ಯವಸ್ಥೆಯನ್ನು ಬದಲಾವಣೆ ಮಾಡುವಂತಹ ಮಹತ್ವದ ಮಸೂದೆಗೆ ರಾಜ್ಯಪಾಲರು ಅಂಗೀಕಾರ ಹಾಕಿದ್ದು, ಜ.11ರಿಂದ ಅಧಿಕೃತವಾಗಿ ಜಾರಿಗೆ ಬರಲಿವೆ.
"
ವಿಧಾನಸಭೆ ಮತ್ತು ವಿಧಾನಪರಿಷತ್‍ನ ಎರಡು ಅಧಿವೇಶನದಲ್ಲಿ ಸುದೀರ್ಘವಾಗಿ ಚರ್ಚೆಯಾಗಿ ಜಂಟಿ ಪರಿಶೀಲನಾ ಸಮಿತಿಯ ಪರಿಶೀಲನೆಗೆ ಒಳಪಟ್ಟು ಅಂತಿಮವಾಗಿ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿನಿಯಮ 2020ಕ್ಕೆ ರಾಜ್ಯಪಾಲರಾದ ವಜುಭಾಯಿ ವಾಲಾ ಸಹಿ ಹಾಕಿದ್ದಾರೆ.
ಚುನಾವಣೆ ಮುಂದೂಡುವಂತೆ 'ಸುಪ್ರೀಂ' ಮೊರೆಹೋದ ಯಡಿಯೂರಪ್ಪ ಸರ್ಕಾರ
ನೂತನ ಕಾಯ್ದೆ ಜ.11ರಿಂದ ಜಾರಿಗೆ ಬರಲಿದೆ ಎಂದು ನಗರಾಭಿವೃದ್ಧಿ ಇಲಾಖೆ ಅಧಿಕೃತ ಪ್ರಕಟಣೆ ತಿಳಿಸಿದೆ. ನೂತನ ಕಾಯ್ದೆ ಬೆಂಗಳೂರಿನ ದೂರಗಾಮಿ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ರೂಪುಗೊಂಡಿದ್ದು, ಆಡಳಿತ ವ್ಯವಸ್ಥೆಯಲ್ಲಿ ಸಮಗ್ರ ಬದಲಾವಣೆ ತರಲಿದೆ.
ಬಿಬಿಎಂಪಿಗೆ ಇನ್ನು ಮುಂದೆ 8 ವಲಯಗಳಿಗೂ ಪ್ರತ್ಯೇಕ ಆಯುಕ್ತರನ್ನು ನೇಮಿಸಲಾಗುತ್ತದೆ. ಕೇಂದ್ರ ಕಚೇರಿಯಲ್ಲಿ ಈಗಿರುವ ಆಯುಕ್ತರು ಇನ್ನು ಮುಂದೆ ಮುಖ್ಯ ಆಯುಕ್ತರಾಗಿ ಕೆಲಸ ಮಾಡಲಿದ್ದಾರೆ.
ವಾರ್ಡ್‍ಗಳ ಸಂಖ್ಯೆಯನ್ನು 198ರಿಂದ 243ಕ್ಕೆ ಹೆಚ್ಚಿಸಲು ಇದೇ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಆಡಳಿತಾತ್ಮಕವಾಗಿ ಹಲವಾರು ಮಹತ್ವದ ಬದಲಾವಣೆಗಳನ್ನು ಅಳವಡಿಸಲಾಗುತ್ತಿದ್ದು, ಇನ್ನು ಮುಂದೆ ಬೆಂಗಳೂರಿನ ಸಮಗ್ರ ಅಭಿವೃದ್ಧಿಯಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Jan 8, 2021, 7:04 PM IST