Bengaluru: ಏಪ್ರಿಲ್‌ನಲ್ಲಿ ಬಿಬಿಎಂಪಿ ಚುನಾವಣೆಗೆ ಚಿಂತನೆ

*   ಚುನಾವಣೆ ಕುರಿತು ಬೊಮ್ಮಾಯಿ, ಕಟೀಲ್‌, ಸುರಾನಾ, ಅರುಣ್‌ ಗಂಭೀರ ಮಾತುಕತೆ
*   ಚುನಾವಣೆ ವಿಳಂಬದಿಂದ ಕಾರ್ಯಕರ್ತರಿಗೆ ಬೇಸರ
*   ಸಾರ್ವತ್ರಿಕ ಚುನಾವಣೆ ಮೇಲೆ ಪರಿಣಾಮ ಬೀರಬಹುದು 

BBMP Election Will Be Held Likely on April grg

ಬೆಂಗಳೂರು(ಜ.21):  ನೆನೆಗುದಿಗೆ ಬಿದ್ದಿರುವ ಬಿಬಿಎಂಪಿ(BBMP) ಚುನಾವಣೆಯನ್ನು(Election) ಬರುವ ಏಪ್ರಿಲ್‌ ತಿಂಗಳಲ್ಲಿ ನಡೆಸುವ ಸಾಧ್ಯತೆ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌(Nalin Kumar Kateel) ಅವರು ಗಂಭೀರ ಮಾತುಕತೆ ನಡೆಸಿದ್ದಾರೆ.

ಬುಧವಾರ ರಾತ್ರಿ ಬಿಜೆಪಿ ಕಚೇರಿಗೆ ತೆರಳಿದ್ದ ಮುಖ್ಯಮಂತ್ರಿ ಬೊಮ್ಮಾಯಿ ಅವರೊಂದಿಗೆ ನಳಿನ್‌ ಕುಮಾರ್‌ ಕಟೀಲ್‌, ಉಪಾಧ್ಯಕ್ಷ ನಿರ್ಮಲ್‌ ಕುಮಾರ್‌ ಸುರಾನಾ ಹಾಗೂ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್‌ ಕುಮಾರ್‌(Arun Kumar) ಸುದೀರ್ಘ ಮಾತುಕತೆ ನಡೆಸಿದರು.

Karnataka Politics: ತಡರಾತ್ರಿ ಮೂರೂವರೆ ಗಂಟೆ ಸಿಎಂ ಬೊಮ್ಮಾಯಿ ಸೀಕ್ರೆಟ್ ಮೀಟಿಂಗ್..!

ಈ ವೇಳೆ ಬಿಬಿಎಂಪಿ ಚುನಾವಣೆ ವಿಳಂಬವಾಗುತ್ತಿರುವುದರಿಂದ ಪಕ್ಷದ ನಗರದ ಕಾರ್ಯಕರ್ತರು(Activists) ಬೇಸರಗೊಂಡಿರುವ ವಿಷಯವನ್ನು ಪಕ್ಷದ ನಾಯಕರು ಮುಖ್ಯಮಂತ್ರಿಗಳ ಬಳಿ ಪ್ರಸ್ತಾಪಿಸಿದ್ದಾರೆ. ಇನ್ನಷ್ಟು ವಿಳಂಬ ಮಾಡುವುದರಿಂದ ಮುಂದಿನ ವರ್ಷದ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯ(General Election) ಮೇಲೂ ಪರಿಣಾಮ ಬೀರಲಿದೆ. ಹೆಚ್ಚು ತಡ ಮಾಡದೆ ಚುನಾವಣೆ ನಡೆಸುವತ್ತ ಗಮನಹರಿಸಬೇಕಾಗಿದೆ ಎಂಬ ಮಾತನ್ನು ಕಟೀಲ್‌ ಅವರು ಪ್ರತಿಪಾದಿಸಿದರು ಎನ್ನಲಾಗಿದೆ.

ಬಿಬಿಎಂಪಿ ಚುನಾವಣೆ ಕುರಿತಂತೆ ಸುಪ್ರೀಂಕೋರ್ಟ್‌ನಲ್ಲಿ(Supreme Court) ಪ್ರಕರಣವಿದೆ. ಅದನ್ನು ಸಾಧ್ಯವಾದಷ್ಟು ಬೇಗ ತೆರವುಗೊಳಿಸಲು ಬೇಕಾದ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು. ಎದುರಾಗಿರುವ ಅಡೆತಡೆಗಳನ್ನು ನಿವಾರಿಸಲಾಗುವುದು. ಮುಂದಿನ ಫೆಬ್ರವರಿ ಅಂತ್ಯ ಅಥವಾ ಮಾರ್ಚ್‌ ಮೊದಲ ವಾರದಲ್ಲಿ 2022-23ನೇ ಸಾಲಿನ ರಾಜ್ಯದ ಬಜೆಟ್‌(Budget) ಮಂಡಿಸಿದ ಬಳಿಕ ಕೋವಿಡ್‌(Covid-19) ಪ್ರಕರಣಗಳ ತೀವ್ರತೆ ಆಧರಿಸಿ ಚುನಾವಣೆ ನಡೆಸುವುದಕ್ಕೆ ಬೇಕಾದ ಪೂರಕ ವಾತಾವರಣ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರು ಭರವಸೆ ನೀಡಿದರು ಎಂದು ಮೂಲಗಳು ತಿಳಿಸಿವೆ.

ಇತ್ತೀಚೆಗೆ ಕೋವಿಡ್‌ ಪ್ರಕರಣ ಹೆಚ್ಚುತ್ತಿದ್ದ ಬೆನ್ನಲ್ಲೇ ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿಗಳು ಪಕ್ಷದ ಕಚೇರಿಯಲ್ಲಿ ನಗರ ಘಟಕಗಳ ಪದಾಧಿಕಾರಿಗಳ ಸಭೆ ಉದ್ದೇಶಿಸಿ ಮಾತನಾಡಿದ್ದರು. ಈ ವೇಳೆ ಕೂಡ ಹಲವು ಮುಖಂಡರು ಬಿಬಿಎಂಪಿ ಚುನಾವಣೆ ಬಗ್ಗೆ ಪ್ರಸ್ತಾಪಿಸಲು ಪ್ರಯತ್ನಿಸಿದ್ದರು. ಈ ಬಗ್ಗೆ ಶೀಘ್ರದಲ್ಲೇ ಕ್ರಮ ಕೈಗೊಳ್ಳುವೆ ಎಂಬ ಮಾತನ್ನಷ್ಟೇ ಹೇಳಿ ನುಣುಚಿಕೊಂಡಿದ್ದರು. ಇದೀಗ ಪಕ್ಷದ ರಾಜ್ಯ ನಾಯಕರು ಬಿಬಿಎಂಪಿ ಚುನಾವಣೆ ವಿಳಂಬವಾಗುತ್ತಿರುವುದನ್ನು ಗಂಭೀರವಾಗಿ ತೆಗೆದುಕೊಂಡಿದ್ದರಿಂದ ಮಾತುಕತೆಗೆ ವೇದಿಕೆ ಸಿದ್ಧವಾಯಿತು ಎಂದು ತಿಳಿದುಬಂದಿದೆ.

25ರಿಂದ 3 ದಿನ ಸರಣಿ ಸಭೆ

ಬಿಬಿಎಂಪಿ ಚುನಾವಣೆಗೆ ಪರೋಕ್ಷವಾಗಿ ಸಿದ್ಧತೆ ಆರಂಭಿಸಲು ಉದ್ದೇಶಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಕ್ಷದ ನಗರ ಘಟಕಗಳ ಪದಾಧಿಕಾರಿಗಳ ಜತೆ ವಿಸ್ತೃತವಾಗಿ ಸಮಾಲೋಚನೆ ನಡೆಸಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೇ ತಿಂಗಳ 25ರಿಂದ 27ರ ವರೆಗೆ ಮೂರು ದಿನಗಳ ಕಾಲ ಬೆಂಗಳೂರು ನಗರದ ಉತ್ತರ, ದಕ್ಷಿಣ ಮತ್ತು ಕೇಂದ್ರ ಜಿಲ್ಲೆಗಳ ಪದಾಧಿಕಾರಿಗಳ ಜತೆ ಒಂದೊಂದು ದಿನ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Covid-19 Crisis: ಕೊರೋನಾ 3ನೇ ಅಲೆ ಎದುರಿಸಲು ಬಿಬಿಎಂಪಿ ಸನ್ನದ್ಧ

2 ವಾರದಲ್ಲಿ ವರದಿ ನೀಡಲು ಬಿಬಿಎಂಪಿಗೆ ಹೈಕೋರ್ಟ್‌ ನಿರ್ದೇಶನ!

ವೃಷಭಾವತಿ ನದಿ ಪುನಶ್ಚೇತನಕ್ಕೆ (Vrushabhavathi Revival) ಕೈಗೊಳ್ಳಬಹುದಾದ ಅಲ್ಪಾವಧಿ ಕ್ರಮಗಳ ಬಗ್ಗೆ ರಾಷ್ಟ್ರೀಯ ಪರಿಸರ ಎಂಜಿನಿಯರಿಂಗ್‌ ಸಂಶೋಧನಾ ಸಂಸ್ಥೆ (ನೀರಿ) ಮಾಡಿರುವ ಶಿಫಾರಸುಗಳ ಅನುಷ್ಠಾನ ಸಂಬಂಧ ಆಗಿರುವ ಪ್ರಗತಿ ಕುರಿತು ಮಾಹಿತಿ ನೀಡುವಂತೆ ಬಿಬಿಎಂಪಿಗೆ (BBMP) ಹೈಕೋರ್ಟ್‌ ಎರಡು ವಾರ ಕಾಲಾವಕಾಶ ನೀಡಿತ್ತು. 

ಮಲಿನಗೊಂಡಿರುವ ವೃಷಭಾವತಿ ನದಿ ಸಂರಕ್ಷಣೆಗೆ ಕ್ರಮ ಕೈಗೊಳ್ಳಲು ಸರ್ಕಾರ ಹಾಗೂ ಬಿಬಿಎಂಪಿಗೆ ನಿರ್ದೇಶಿಸುವಂತೆ ಕೋರಿ ನಗರದ ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
 

Latest Videos
Follow Us:
Download App:
  • android
  • ios