ಕಮಿಷನ್ ಆರೋಪ ಬೆನ್ನಲ್ಲೇ ಬಿಬಿಎಂಪಿ ಅಗ್ನಿ ದುರಂತ, ಬಿಜೆಪಿ vs ಕಾಂಗ್ರೆಸ್ ಜಟಾಪಟಿ ಶುರು

ಬಿಬಿಎಂಪಿ ಬೆಂಕಿ ಪ್ರಕರಣ ರಾಜಕೀಯ ತಿರುವು ಪಡೆದಿದೆ. ಪಾಲಿಕೆ ಕಚೇರಿಗೆ ಬೆಂಕಿ ಹಿಂದೆ ಬಿಜೆಪಿ ಷಡ್ಯಂತರ ಬಿಜೆಪಿಯ ಭ್ರಷ್ಟರ ಹೆಡೆಮುರಿ ಕಟ್ಟುವುದು ನಿಶ್ಚಿತ ಎಂದು ಕಾಂಗ್ರೆಸ್‌ ಹೇಳಿದೆ.

BBMP laboratory Fire breaks out case talk war between BJP vs Congress gow

ಬೆಂಗಳೂರು (ಆ.12): ‘ಬಿಬಿಎಂಪಿ ಕಚೇರಿಯ ಕಾಮಗಾರಿಗಳ ಗುಣಮಟ್ಟನಿಯಂತ್ರಣ ಪ್ರಯೋಗಾಲಯದಲ್ಲಿ ಕಾಮಗಾರಿಗಳ ದಾಖಲೆ ಇದ್ದಂತಹ ಕೊಠಡಿಗೆ ಬೆಂಕಿ ಬಿದ್ದಿರುವುದು ಆಕಸ್ಮಿಕವಲ್ಲ, ಷಡ್ಯಂತ್ರ. 40 ಪರ್ಸೆಂಟ್‌ ಹಗರಣ ನ್ಯಾಯಾಂಗ ತನಿಖೆಗೆ ವಹಿಸಿದ ಬೆನ್ನಲ್ಲೇ ಬೆಂಕಿ ಹಚ್ಚಿರುವ ದುಷ್ಕರ್ಮಿಗಳು ಹಾಗೂ ಇದರ ಹಿಂದಿರುವ ಬಿಜೆಪಿಯ ಭ್ರಷ್ಟರ ಹೆಡೆಮುರಿ ಕಟ್ಟುವುದು ನಿಶ್ಚಿತ’ ಎಂದು ರಾಜ್ಯ ಕಾಂಗ್ರೆಸ್‌ ಹೇಳಿದೆ.

ಪಕ್ಷದ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಆರೋಪಿಸಿರುವ ಕಾಂಗ್ರೆಸ್‌, ‘40% ಕಮಿಷನ್‌ನ ಕಳಪೆ ಕಾಮಗಾರಿಗಳ ಬಗ್ಗೆ ನ್ಯಾಯಾಂಗ ತನಿಖೆಗೆ ವಹಿಸಿದ ಬೆನ್ನಲ್ಲೇ ದಾಖಲೆಗಳಿದ್ದ ಕೊಠಡಿಗೆ ಬೆಂಕಿ ಹಚ್ಚಲಾಗಿದೆ. ಬೆಂಕಿ ಹಚ್ಚಿರುವ ದುಷ್ಮರ್ಮಿಗಳು ಹಾಗೂ ಇದರ ಹಿಂದಿರುವ ಬಿಜೆಪಿಯ ಭ್ರಷ್ಟರನ್ನು ಬಿಡುವ ಪ್ರಶ್ನೆಯೇ ಇಲ್ಲ. ಬಿಜೆಪಿ ತಾನು ಮಾಡಿದ ಭ್ರಷ್ಟಾಚಾರದ ಸಾಕ್ಷ್ಯಗಳಿಗೆ ಬೆಂಕಿ ಇಟ್ಟು ಬಚಾವಾಗಿ ಬಿಡುವ ಹುನ್ನಾರ ನಡೆಸಿದೆ’ ಎಂದು ಗಂಭೀರ ಆರೋಪ ಮಾಡಿದೆ.

ಬಿಬಿಎಂಪಿ ಲ್ಯಾಬ್‌ಗೆ ಬೆಂಕಿ: ಮುಖ್ಯ ಎಂಜಿನಿಯರ್‌ ಸೇರಿ 9 ಮಂದಿ ಗಂಭೀರ

ಬಿಬಿಎಂಪಿ ಕಚೇರಿಗೆ ದುಷ್ಕರ್ಮಿಗಳು ಬೆಂಕಿ ಹೊತ್ತಿಸಿದ ಪರಿಣಾಮ ಎಂಟು ನೌಕರರಿಗೆ ಗಾಯವಾಗಿದೆ, ಮೂರು ಜನರ ಸ್ಥಿತಿ ಗಂಭೀರವಾಗಿದೆ. ಇವರೆಲ್ಲರಿಗೂ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗಿದೆ. ತನಿಖೆಗೆ ಹೆದರಿದ ಭ್ರಷ್ಟರು ನಡೆಸಿದ ಇಂತಹ ಹೀನ ಕೃತ್ಯದ ಹಿಂದಿರುವ ಕೈಗಳಿಗೆ ಕೊಳ ತೊಡಿಸುವುದು ಖಚಿತ. ಈ ಹಿಂದೆ ಬಿಜೆಪಿ ಆಡಳಿತವಧಿಯಲ್ಲಿ ಬಿಬಿಎಂಪಿಗೆ ಬೆಂಕಿ ಇಟ್ಟವರೇ ಇಂದೂ ಸಹ ಇಟ್ಟಿದ್ದಾರೆ ಎಂಬ ಗುಮಾನಿ ಹೆಚ್ಚಿದೆ. ಇದನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸೂಕ್ತ ತನಿಖೆ ನಡೆಸಿ ತೆರೆಮರೆಯಲ್ಲಿರುವ ಭ್ರಷ್ಟರನ್ನು ಬಯಲಿಗೆಳೆಯುತ್ತೇವೆ ಎಂದು ಹೇಳಿದೆ.

ಲ್ಯಾಬ್‌ಗೆ ಬೆಂಕಿ ಹಚ್ಚಿದ್ದಾ, ಬಿಜೆಪಿ: ಬಿಬಿಎಂಪಿ ಕಚೇರಿಯಲ್ಲಿ ಬೆಂಕಿ ಹತ್ತಿಕೊಂಡಿತೇ ಅಥವಾ ಬೆಂಕಿ ಹಚ್ಚಿದ್ದಾರಾ ಎಂಬ ಬಗ್ಗೆ ತನಿಖೆ ನಡೆಯಬೇಕು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ಒತ್ತಾಯಿಸಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದಾದರೂ ಕಡತ ನಾಶ ಮಾಡಲು ಬೆಂಕಿ ಹಚ್ಚಿದ್ದರೇ ಎಂಬ ವಿವರ ಹೊರಬೇಕಿದೆ. ಯಾರೇ ತಪ್ಪು ಮಾಡಿದರೂ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಬಿಬಿಎಂಪಿ ಕೇಂದ್ರ ಕಛೇರಿ ಲ್ಯಾಬ್‌ನಲ್ಲಿ ಅಗ್ನಿ ದುರಂತ ಪ್ರಕರಣ, ಪ್ರತ್ಯೇಕ ತನಿಖೆಗೆ ಸಿಎಂ ಆದೇಶ

ನೀವೆ ಬೆಂಕಿ ಹಚ್ಚಿರಬೇಕು: ಶೇ.40 ಕಮೀಷನ್‌ ಆರೋಪ ಸಾಬೀತು ಮಾಡಲಾರದೆ ನೀವೇ ಬೆಂಕಿ ಹಚ್ಚಿರಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಕಾಂಗ್ರೆಸ್‌ಗೆ ತಿರುಗೇಟು ನೀಡಿದ್ದಾರೆ. ನಿಮ್ಮ ಸರ್ಕಾರ, ನಿಮ್ಮ ಅಧಿಕಾರಿಗಳು ಹಾಗೂ ನಿಮ್ಮದೇ ಆಡಳಿತ. ಬೆಂಕಿ ಹಚ್ಚುವ ಕೆಲಸ ನಿಮ್ಮದೇ ಇರಬೇಕು? ನಿಮ್ಮ ಸರ್ಕಾರ ಕಡತಗಳನ್ನು ರಕ್ಷಿಸಲು ಆಗದ ಸರ್ಕಾರವೇ? ಬಿಬಿಎಂಪಿಗೆ ಬೆಂಕಿ ಬಿದ್ದಿದೆ ಎಂದರೆ ನಿಮ್ಮ ಕೈಲಾಗದ ಆಡಳಿತಕ್ಕೆ ಹಿಡಿತ ಕನ್ನಡಿ ಎಂದು ಟ್ವೀಟ್‌ ಮೂಲಕ ಹೇಳಿದ್ದಾರೆ.

 

ಆಂತರಿಕ ತಾಂತ್ರಿಕ ವಿಚಾರಣೆಗೆ ಮುಖ್ಯ ಆಯುಕ್ತರ ಆದೇಶ
ಗುಣಮಟ್ಟನಿಯಂತ್ರಣ ಪ್ರಯೋಗಾಲಯದ ಅಗ್ನಿ ಅವಘಡದ ಕಾರಣಕ್ಕಾಗಿ ಆಂತರಿಕ ತಾಂತ್ರಿಕ ವಿಚಾರಣೆ ನಡೆಸಲು ಬಿಬಿಎಂಪಿಯ ಎಂಜಿನಿಯರ್‌ ವಿಭಾಗದ ಮುಖ್ಯಸ್ಥ .ಬಿ.ಎಸ್‌.ಪ್ರಹ್ಲಾದ್‌ ಅವರನ್ನು ನೇಮಿಸಲಾಗಿದೆ. ತಾಂತ್ರಿಕ ವಿಚಾರಣೆ ವರದಿಯನ್ನು ಆ.31ರ ಒಳಗೆ ಸಲ್ಲಿಸಲು ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಕಚೇರಿ ಆದೇಶದಲ್ಲಿ ತಿಳಿಸಿದ್ದಾರೆ.

ಬಿಬಿಎಂಪಿ ಕೇಂದ್ರ ಕಚೇರಿ ಆವರಣದ ಕಟ್ಟಡದಲ್ಲಿರುವ ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಪ್ರಯೋಗಾಲಯದ ಮುಖ್ಯ ಅಭಿಯಂತರ ಸೇರಿ 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Latest Videos
Follow Us:
Download App:
  • android
  • ios