*  ಬಿಜೆಪಿ ಕಾರ್ಯಕರ್ತರ ಮನೆಯಲ್ಲಿ ಮತದಾರ ಪರಿಷ್ಕರಣೆ ಆರೋಪ*  ಬೃಹತ್‌ ಬಿಜೆಪಿ ಮಹಾನಗರ ಪಾಲಿಕೆ’ ಎಂದು ಮರು ನಾಮಕರಣ ಮಾಡಿ *  ಬಿಬಿಎಂಪಿ ಆಯುಕ್ತರು ಬೇಜವಾಬ್ದಾರಿಯುತವಾಗಿ ನಡೆದುಕೊಳ್ಳುತ್ತಿದ್ದಾರೆ 

ಬೆಂಗಳೂರು(ಮಾ.25): ಜಯನಗರ ಕ್ಷೇತ್ರದ ಬಿಬಿಎಂಪಿ(BBMP) ಕಂದಾಯ ಹಾಗೂ ಸಹಾಯಕ ಕಂದಾಯ ಅಧಿಕಾರಿಗಳು ಕಚೇರಿಯಲ್ಲಿ ಕೆಲಸ ಮಾಡದೆ ಬಿಜೆಪಿ(BJP) ಕಾರ್ಯಕರ್ತರೊಬ್ಬರ ಮನೆಯಲ್ಲಿ ಮತದಾರರ ಪರಿಷ್ಕರಣೆ ಮಾಡುತ್ತಿರುವಾಗ ಪ್ರತ್ಯಕ್ಷವಾಗಿ ಸಿಕ್ಕಿಬಿದ್ದಿದ್ದಾರೆ. ಅವರ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದರ ಬದಲು ಬಿಬಿಎಂಪಿ ಕಚೇರಿ ಹೆಸರನ್ನು ‘ಬೃಹತ್‌ ಬಿಜೆಪಿ ಮಹಾನಗರ ಪಾಲಿಕೆ’ ಎಂದು ಮರು ನಾಮಕರಣ ಮಾಡಿ ಎಂದು ಕಾಂಗ್ರೆಸ್‌ ಸದಸ್ಯ ಸೌಮ್ಯಾರೆಡ್ಡಿ(Sowmya Reddy) ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಬಿಬಿಎಂಪಿ ಆಯುಕ್ತರು, ಅಧಿಕಾರಿಗಳು ಸಿಕ್ಕಿಬಿದ್ದಿದ್ದು ಒಂದೇ ಬಾರಿ ಅಲ್ಲವೇ ಎಂಬ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಬಿಬಿಎಂಪಿಯ ಮುಖ್ಯ ಆಯುಕ್ತರು ಪಕ್ಷಾತೀತವಾಗಿ ಕೆಲಸ ಮಾಡದೆ ಬಿಜೆಪಿ ಕಾರ್ಯಕರ್ತರಂತೆ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದರು.

Hijab Row: 'ಹಿಜಾಬ್ ಬದಲು ದುಪ್ಪಟ್ಟಾಕ್ಕೆ ಅವಕಾಶ ಕೊಡಿ'

ಅವರನ್ನು ಕೂಡಲೇ ನಮ್ಮ ಕ್ಷೇತ್ರದಿಂದ ತೆಗೆಯಬೇಕು ಎಂದು ಬೇಡಿಕೆ ಇಟ್ಟರೂ ಬಿಬಿಎಂಪಿ ಆಯುಕ್ತರು ಬೇಜವಾಬ್ದಾರಿಯುತವಾಗಿ ನಡೆದುಕೊಳ್ಳುತ್ತಿದ್ದಾರೆ. ಬಿಬಿಎಪಿಗೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಬದಲಿಗೆ ಬೃಹತ್‌ ಬಿಜೆಪಿ ಮಹಾನಗರ ಪಾಲಿಕೆ ಎಂದು ಮರು ನಾಮಕರಣ ಮಾಡಿ. ಈ ಬಗ್ಗೆ ಕಂದಾಯ ಸಚಿವ ಆರ್‌. ಅಶೋಕ್‌(R Ashok) ಅವರು ಉತ್ತರ ಕೊಡಿಸಿ ಎಂದು ಒತ್ತಾಯಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ(KS Eshwarappa0, ಬಿಬಿಎಂಪಿ ಕಂದಾಯ ಅಧಿಕಾರಿಗಳು ಬೆಂಗಳೂರು(Bengaluru) ನಗರಾಭಿವೃದ್ಧಿ ಖಾತೆ ಅಡಿ ಬರುತ್ತಾರೆ. ಹೀಗಾಗಿ ಮುಖ್ಯಮಂತ್ರಿಗಳಿಂದ ಉತ್ತರ ಕೊಡಿಸಲಾಗುವುದು ಎಂದು ಹೇಳಿ ಚರ್ಚೆಗೆ ತೆರೆ ಎಳೆದರು.

ಬಿಜೆಪಿಯಿಂದ ಭಾವನಾತ್ಮಕ ರಾಜಕಾರಣ: ಸಿದ್ದರಾಮಯ್ಯ

ಬೆಂಗಳೂರು(ಮಾ.24): ಬಿಜೆಪಿಯವರು ಸಂವಿಧಾನಬದ್ಧವಾಗಿ ಆಡಳಿತ ನಡೆಸದೆ ಭಾವನಾತ್ಮಕ ರಾಜಕಾರಣ(Emotional Politics) ಮಾಡುತ್ತಿದ್ದಾರೆ. ಜನರ ಮನಸ್ಸನ್ನು ಕೆರಳಿಸಿ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ಅನೇಕ ಯುವಕರು ಬಲಿಪಶುವಾಗುತ್ತಿದ್ದಾರೆ. ಸಂವಿಧಾನದ ಬಗ್ಗೆ ಯಾರಿಗೆ ಗೌರವವಿಲ್ಲವೋ ಅಂತಹವರ ಕೈಗೆ ದೇಶ ಸಿಕ್ಕಿ ಹಾಕಿಕೊಂಡಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಹೇಳಿದ್ದರು. 
ಚಿತ್ರಕಲಾ ಪರಿಷತ್‌ನಲ್ಲಿ ಏರ್ಪಡಿಸಿದ್ದ ಡಾ.ರಾಮಮನೋಹರ ಲೋಹಿಯಾ ಜನ್ಮದಿನಾಚರಣೆ ಸಮಾರಂಭದಲ್ಲಿ ಡಾ.ರಾಮಮನೋಹರ ಲೋಹಿಯಾ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ಇಂದು ದೇಶ ಮತ್ತು ಅನೇಕ ರಾಜ್ಯಗಳಲ್ಲಿ ಬಿಜೆಪಿ ಆಡಳಿತವಿದ್ದು ಬಲಪಂಥೀಯರ ಕೈಗೆ ಸಿಕ್ಕಿ ಹಾಕಿಕೊಂಡಿದೆ. ಸಮಸ್ಯೆಗಳ ಬಗ್ಗೆ ಚರ್ಚೆ ಮಾಡದೆ ಭಾವನಾತ್ಮಕ ವಿಷಯಗಳನ್ನು ಮುನ್ನಲೆಗೆ ತರುತ್ತಿದ್ದಾರೆ ಎಂದು ಟೀಕಿಸಿದ್ದರು. 

ಇಡೀ ರಾಜ್ಯಕ್ಕೆ ಬೆಂಕಿ ಹಚ್ಚುವ ವ್ಯಕ್ತಿ ನೀನು, ಈಶ್ವರಪ್ಪ-ಜಮೀರ್ ಮಾತಿನ ಜಟಾಪಟಿ

ವೈಚಾರಿಕತೆ, ತತ್ವ, ಸಿದ್ಧಾಂತದಲ್ಲಿ ಬಿಜೆಪಿಯವರಿಗೆ ನಂಬಿಕೆಯಿಲ್ಲ. ಯುವ ಶಕ್ತಿಯನ್ನು ದಾರಿ ತಪ್ಪಿಸುತ್ತಿದ್ದಾರೆ. ಪ್ರಜಾಪ್ರಭುತ್ವಕ್ಕೆ ಮಾರಕವಾಗಿ ಆಡಳಿತ ನಡೆಸುತ್ತಿದ್ದಾರೆ. ಅಭಿವೃದ್ಧಿ ಮರೆತು ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಭಾವನೆಗಳ ಜೊತೆ ಆಟ ಆಡುತ್ತಿದ್ದಾರೆ. ಸಂವಿಧಾನದ(Constitution) ಬಗ್ಗೆ ಇವರಿಗೆ ಗೌರವವಿಲ್ಲ ಎಂದು ಆರೋಪಿಸಿದ್ದರು. 

ಜೈಲಿಗೆ ಹೋಗುವ ಆಸೆ ಈಡೇರಲಿಲ್ಲ:

1975ರಲ್ಲಿ ತುರ್ತು ಪರಿಸ್ಥಿತಿಯನ್ನು(Emergency in 1975) ವಿರೋಧಿಸಿ ಮೈಸೂರಿನ(Mysuru)s ಸಯ್ಯಾಜಿರಾವ್‌ ರಸ್ತೆಯಲ್ಲಿ ಸೋಷಿಯಲಿಸ್ಟ್‌ ಪಕ್ಷದಿಂದ ಪ್ರತಿಭಟನೆ ನಡೆಸಿದ್ದೆವು. ಆಗ ನನ್ನನ್ನು ಪೊಲೀಸರು ಠಾಣೆಗೆ ಕರೆದುಕೊಂಡು ಹೋಗಿ ಬಳಿಕ ಬಿಟ್ಟು ಕಳುಹಿಸಿದ್ದರು. ಜೈಲಿಗೆ ಹಾಕುತ್ತಾರೆ, ಒಂದಾರು ತಿಂಗಳು ಬರುವುದಿಲ್ಲ ಎಂದು ಮನೆಯವರಿಗೆ ಹೇಳಿ ಆಸೆಯಿಂದ ಬಂದಿದ್ದೆ. ಆದರೆ ನನ್ನ ಆಸೆ ಈಡೇರಲಿಲ್ಲ. ಸಪ್ಪೆ ಮೊರೆ ಹಾಕಿಕೊಂಡು ಮನೆಗೆ ಹಿಂದಿರುಗಿದ್ದೆ ಎಂದು ಹಳೆಯದನ್ನು ನೆನಪಿಸಿಕೊಂಡರು.

ರಾಷ್ಟ್ರ ರಾಜಕಾರಣಕ್ಕೆ ನಷ್ಟ:

ಚಿತ್ರಕಲಾ ಪರಿಷತ್‌ ಅಧ್ಯಕ್ಷ ಬಿ.ಎಲ್‌.ಶಂಕರ್‌(BL Shankar) ಮಾತನಾಡಿ, ದೇವರಾಜ ಅರಸು, ರಾಮಕೃಷ್ಣ ಹೆಗಡೆ, ಸಿದ್ದರಾಮಯ್ಯ ಅವರು ಮಾತ್ರ ನಾಯಕರನ್ನು ತಯಾರು ಮಾಡಿದ್ದಾರೆ. ಈ ಮಾತಿನಿಂದ ಯಾರಾದರೂ ಬೇಜಾರು ಮಾಡಿಕೊಂಡರೂ ಪರವಾಗಿಲ್ಲ. ಸಿದ್ದರಾಮಯ್ಯ ಅವರು ರಾಷ್ಟ್ರ ರಾಜಕಾರಣಕ್ಕೆ ಹೋಗದಿದ್ದರಿಂದ ಕರ್ನಾಟಕಕ್ಕೆ(Karnataka) ಲಾಭವಾಗಿದೆ. ಆದರೆ ರಾಷ್ಟ್ರ ರಾಜಕಾರಣಕ್ಕೆ ನಷ್ಟವಾಗಿದೆ ಎಂದು ಅಭಿಪ್ರಾಯಪಟ್ಟರು.