ಬೆಂಗಳೂರು, (ಜ.01): ಭಾರತೀಯ ಜನತಾ ಪಾರ್ಟಿಯ ಬೆಳಗಾವಿ ಜಿಲ್ಲಾ ಗ್ರಾಮೀಣ ಪ್ರಧಾನ ಕಾರ್ಯದರ್ಶಿ ರಾಜು ಚಿಕ್ಕನಗೌಡರ್  ನಿಧನರಾಗಿದ್ದಾರೆ.

ಬೆಂಗಳೂರಿನ ಹೊಟೆಲ್ ಕೊಠಡಿಯಲ್ಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಎಬಿವಿಪಿಯಿಂದ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡಿದ್ದರು.

ಕೊರೋನಾ ಸೋಂಕಿನಿಂದ ಬಳಲುತ್ತಿದ್ದ MLC ನಿಧನ

ಇದೀಗ ಅವರು ಅಗಲಿಕೆಯಿಂದ ಬೆಳಗಾವಿಯಲ್ಲಿ ಬಿಜೆಪಿಗೆ ದೊಡ್ಡ ಹೊಡೆತಬಿದ್ದಂತಾಗಿದೆ. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿಯೂ ಕೆಲಸ ಮಾಡಿದ್ದರು. ಅಲ್ಲದೇ ಪೂರ್ಣಾವಧಿಯಾಗಿ ಬಿಜೆಪಿ, ಸಂಘ ಪರಿವಾರದ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.

ಇನ್ನು ಇವರ ನಿಧನಕ್ಕೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಹಲವು ನಾಯಕರುಗಳು ಸಂತಾಪ ಸೂಚಿಸಿದ್ದಾರೆ.