ಆಡಳಿತದ ಮೇಲೆ ಹಿಡಿತ ಕಳೆದುಕೊಂಡ ಸಿಎಂ: ಜಗದೀಶ ಶೆಟ್ಟರ್‌

ಗ್ಯಾರಂಟಿ ಯೋಜನೆಗಳನ್ನು ಉಚಿತವಾಗಿ ನೀಡುವುದಾಗಿ ಹೇಳುವ ಸರ್ಕಾರ ಮತ್ತೊಂದೆಡೆ ಸಾಲ ಮಾಡುತ್ತಿದೆ. ನಷ್ಟದಲ್ಲಿರುವ ಸಾರಿಗೆ ಸಂಸ್ಥೆ ಸಾಲ ಹಾಗೂ ಬಡ್ಡಿಯಲ್ಲಿ ನಡೆಯುತ್ತಿದ್ದು, ಸರ್ಕಾರದ ನಿರ್ಲಕ್ಷ್ಯ ಇದಕ್ಕೆ ಕಾರಣ: ಸಂಸದ ಜಗದೀಶ ಶೆಟ್ಟರ 

Belagavi BJP MP Jagadish Shettar Slams Siddaramaiah's Government grg

ಹುಬ್ಬಳ್ಳಿ(ಜ.04): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಡಳಿತದ ಮೇಲೆ ಹಿಡಿತ ಕಳೆದುಕೊಂಡಿದ್ದಾರೆ. ಇದರಿಂದಾಗಿ ರಾ ಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ ಎಂದು ಸಂಸದ ಜಗದೀಶ ಶೆಟ್ಟರ್‌ ಆರೋಪಿಸಿದರು. 

ಅವರು ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಗ್ಯಾರಂಟಿ ಯೋಜನೆಗಳನ್ನು ಉಚಿತವಾಗಿ ನೀಡುವುದಾಗಿ ಹೇಳುವ ಸರ್ಕಾರ ಮತ್ತೊಂದೆಡೆ ಸಾಲ ಮಾಡುತ್ತಿದೆ. ನಷ್ಟದಲ್ಲಿರುವ ಸಾರಿಗೆ ಸಂಸ್ಥೆ ಸಾಲ ಹಾಗೂ ಬಡ್ಡಿಯಲ್ಲಿ ನಡೆಯುತ್ತಿದ್ದು, ಸರ್ಕಾರದ ನಿರ್ಲಕ್ಷ್ಯ ಇದಕ್ಕೆ ಕಾರಣ. ಬಸ್ ಟಿಕೆಟ್ ದರ ಹೆಚ್ಚಿಸಿ ಪ್ರಯಾಣಿಕರಿಗೆ ಹೊರೆ ಮಾಡಲಾಗುತ್ತಿದೆ. ಬಸ್ ಪ್ರಯಾಣ ದರ ಏರಿಕೆಗೆ ನನ್ನ ವಿರೋಧವಿದೆ ಎಂದರು. ಮಂತ್ರಿಗಳಿಂದಲೇ ಭ್ರಷ್ಟಾಚಾರ: 

ಬಿಜೆಪಿ ನಾಯಕರನ್ನ ಬಂಧಿಸಲು ಪೊಲೀಸರಿಗೆ ಉತ್ಸಾಹ, ಗುತ್ತಿಗೆದಾರರ ಸಾವಿಗೆ ಕಾರಣರಾದ ಆರೋಪಿಗಳ ಬಂಧನಕ್ಕೆ ಏಕಿಲ್ಲ? : ಶೆಟ್ಟರ್ ಕಿಡಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭ್ರಷ್ಟಾಚಾರ ರಹಿತ ಆಡಳಿತ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ, ಅವರ ಸಂಪುಟದ ಸಚಿವರು ಹಾಗೂ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಭ್ರಷ್ಟಾಚಾರ ನಿರ್ಮೂಲನೆ ಮಾಡುವ ಮನಸ್ಥಿತಿಯನ್ನು ಮುಖ್ಯಮಂತ್ರಿಗಳು ಸಂಪೂರ್ಣವಾಗಿ ಕಳೆದುಕೊಂಡಿದ್ದಾರೆ. ಪ್ರಾಮಾಣಿಕ ಅಧಿಕಾರಿಗಳ ತಲೆ ದಂಡವಾಗುತ್ತಿದೆ ಎಂದರು. 

ಗುತ್ತಿಗೆದಾರ ಸಚಿನ ಪಾಂಚಾಳ ಆತ್ಮಹತ್ಯೆಯ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹೆಸರು ಬಂದಿದ್ದು, ಅವರು ರಾಜೀನಾಮೆ ನೀಡಿ ತನಿಖೆ ಎದುರಿಸಲಿ. ಈ ಪ್ರಕರಣದ ಕುರಿತು ಸಿಬಿಐ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.

ಪ್ರತ್ಯೇಕ ಪಾಲಿಕೆ ಸ್ವಾಗತಾರ್ಹ: 

ರಾಜ್ಯ ಸರ್ಕಾರವು ಧಾರವಾಡ ಪ್ರತ್ಯೇಕ ಪಾಲಿಕೆ ರಚನೆ ಮಾಡಿರುವುದು ಸ್ವಾಗತಾರ್ಹವಾಗಿದೆ. ಇದರ ಬಗ್ಗೆ ಈ ಮೊದಲು ನಾನು ಧ್ವನಿ ಎತ್ತಿದ್ದೆ. ಧಾರವಾಡ ಜನತೆಯ ಬಹು ದಿನಗಳ ಬೇಡಿಕೆ ಇದುವೇ ಆಗಿತ್ತು. ಹುಬ್ಬಳ್ಳಿ ಹಾಗೂ ಧಾರವಾಡ ವಿಭಜನೆಯಾಗುವುದರಿಂದ ಎರಡೂ ನಗರಗಳು ಅಭಿವೃದ್ಧಿಯಾಗುವ ಭರವಸೆಯಿದೆ ಎಂದರು.

ಪ್ರಿಯಾಂಕ್ ಖರ್ಗೆ ದುರಂಹಕಾರ ಮಾತಿನಲ್ಲೇ ಗೊತ್ತಾಗುತ್ತದೆ: ಜಗದೀಶ್‌ ಶೆಟ್ಟರ್‌

ಬೆಳಗಾವಿ: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು. ಅವರಿಗೆ ಸೊಕ್ಕು, ಅಹಂಕಾರ ಎಷ್ಟಿದೆ ಎನ್ನುವುದು ಅವರ ಮಾತಿನ ಶೈಲಿಯಿಂದಲೇ ತಿಳಿದು ಬರುತ್ತದೆ ಎಂದು ಮಾಜಿ ಸಿಎಂ, ಸಂಸದ ಜಗದೀಶ್‌ ಶೆಟ್ಟರ್‌ ಆರೋಪಿಸಿದ್ದರು. 

ಜ.1 ರಂದು ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸಚಿವ ಪ್ರಿಯಾಂಕ ಖರ್ಗೆ ಅವರದ್ದು ಅಹಂಕಾರದ ಮಾತು. ನನ್ನ ತಪ್ಪಿಲ್ಲ ಅನ್ನೋದು ಬೇರೆ. ಈ ರೀತಿ ಪ್ರತಿ ಪಕ್ಷದ ಬಗ್ಗೆ ಅಹಂಕಾರದ ಬಗ್ಗೆ ಮಾತಾಡೋದು ಸರಿಯಲ್ಲ. ಅವರ ಅಹಂಕಾರದ ಮಾತಿನಿಂದಲೇ ಈ ಹಿಂದೆ ಅವರ ತಂದೆ ಮಲ್ಲಿಕಾರ್ಜುನ ಖರ್ಗೆ ಸೋತಿದ್ದರು. 

ಮಹಾತ್ಮ ಗಾಂಧಿ ಕುಟುಂಬಕ್ಕೂ, ಈ ಗಾಂಧಿ ಕುಟುಂಬಕ್ಕೂ ರಕ್ತ ಸಂಬಂಧವೇ ಇಲ್ಲ: ಜಗದೀಶ ಶೆಟ್ಟರ

ಈ ರೀತಿ ಟೆಂಕಾರದ ಮಾತು ನಡೆಯುವುದಿಲ್ಲ. ಪ್ರಿಯಾಂಕ ರಾಜೀನಾಮೆ ಕೊಡುವವರೆಗೂ ಬಿಜೆಪಿ ಹೋರಾಟ ಮುಂದುವರೆಸಲಿದೆ ಎಂದು ಹೇಳಿದರು. ಹಿಂದೆ ಇಂತಹದೇ ಪ್ರಕರಣದಲ್ಲಿ ಈಶ್ವರಪ್ಪನವರ ರಾಜೀನಾಮೆಗೆ ಕಾಂಗ್ರೆಸ್ ನವರು ಹೋರಾಟ ಮಾಡಿದ್ದರು. ಈ ವೇಳೆ ನೈತಿಕ ಹೊಣೆ ಹೊತ್ತು ಈಶ್ವರಪ್ಪ ರಾಜೀನಾಮೆ ನೀಡಿದ್ದರು‌. ಸಚಿನ್ ಕುಟುಂಬಸ್ಥರು ನೇರವಾಗಿ ಪ್ರಿಯಾಂಕ್ ಖರ್ಗೆ ವಿರುದ್ಧ ಆರೋಪ ಮಾಡಿದ್ದಾರೆ‌. ಈ ಪ್ರಕರಣವನ್ನು ಸಿಬಿಐಗೆ ವಹಿಸಿ ಖರ್ಗೆ ರಾಜೀನಾಮೆ ಕೊಡಲೇಬೇಕು ಎಂದು ಆಗ್ರಹಿಸಿದ್ದರು. 

ಸಿಎಂ ಸಿದ್ದರಾಮಯ್ಯನವರ ಸರ್ಕಾರದಲ್ಲಿ ಭ್ರಷ್ಟಾಚಾರ ಮೀತಿ‌ಮೀರಿದೆ. ಸಿದ್ದರಾಮಯ್ಯ ಅವರದ್ದು ಲಾಸ್ಟ್ ಲೆಗ್ ಆಫ್‌ ಪಾಲಿಟಿಕ್ಸ್. ಸಿದ್ದರಾಮಯ್ಯನವರ ಆಪ್ತರು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಎಲ್ಲಾ ಕಡೆಯಿಂದಲೂ ಹಣ ಬಳಿದುಕೊಳ್ಳುವುದು ಶುರುವಾಗಿದೆ.ಇದರ ನೇರ ಪರಿಣಾಮ ಗುತ್ತಿಗೆದಾರರ ಮೇಲೆ ಆಗುತ್ತಿದೆ ಎಂದು ಟೀಕಿಸಿದ ಅವರು, ಇಡೀ ವ್ಯವಸ್ಥೆ ಕೇಂದ್ರ ಸರ್ಕಾರದ ಗಮನಕ್ಕೆ ಇದ್ದೇ ಇರುತ್ತದೆ. ನಾವೂ ಸಹ ಕೇಂದ್ರ ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಡುತ್ತೇವೆ ಎಂದರು. ಸಿ.ಟಿ. ರವಿ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಕರಣ ಸಭಾಪತಿ ಮಧ್ಯಸ್ಥಿಕೆಯಲ್ಲಿ ಮುಗಿದು ಹೋಗುವ ಪ್ರಕರಣ. ಸಭಾಪತಿ ವ್ಯಾಪ್ತಿಗೆ ಬರುವ ಕೇಸ್ ನ್ನು ಪೊಲೀಸರು ತಮ್ಮ ಕಡೆ ತೆಗೆದುಕೊಂಡಿದ್ದು ಕಾನೂನು ಬಾಹಿರವಾಗಿದೆ. ಇದನ್ನು ಸಭಾಪತಿ ಸುಪರ್ದಿಗೆ ಬಿಟ್ಟು ಬಿಡಿ ಅವರು ನಿರ್ಧಾರ ತೆಗೆದುಕೊಳ್ಳಲಿ. ಸಿಟಿ ರವಿಯವರನ್ನ ಟಾರ್ಗೆಟ್ ಮಾಡುವುದನ್ನು ಸರ್ಕಾರ ನಿಲ್ಲಿಸಲಿ ಎಂದಿದ್ದರು. 

Latest Videos
Follow Us:
Download App:
  • android
  • ios