Asianet Suvarna News Asianet Suvarna News

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಮಹತ್ವದ ಹುದ್ದೆ ನೀಡಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಆದೇಶ

ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ, ರಾಜ್ಯ ಮಹಿಳಾ ಕಾಂಗ್ರೆಸ್ ನ ಮಾಜಿ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮಹತ್ವದ ಹುದ್ದೆ ನೀಡಿ ಆದೇಶ ಹೊರಡಿಸಿದ್ದಾರೆ.

Belagavi Congress MLA Lakshmi Hebbalkar  appointed kpcc spoke person rbj
Author
Bengaluru, First Published Sep 22, 2020, 5:05 PM IST

ಬೆಂಗಳೂರು, (ಸೆ.22): ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ, ರಾಜ್ಯ ಮಹಿಳಾ ಕಾಂಗ್ರೆಸ್ ನ ಮಾಜಿ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಈ ಕುರಿತು ಮಂಗಳವಾರ  ಆದೇಶ ಹೊರಡಿಸಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ರಾಜ್ಯ ಕಾಂಗ್ರೆಸ್ ನಲ್ಲಿ ಅತ್ಯಂತ ಪ್ರಭಾವಿಯಾಗಿದ್ದು, ಈವರೆಗೆ ನೀಡಲಾಗಿದ್ದ ಎಲ್ಲ ಹುದ್ದೆಗಳನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ. ಯಾವುದೇ ವಿಷಯವನ್ನು ಅತ್ಯಂತ ಸಮರ್ಥವಾಗಿ ನಿರ್ವಹಿಸುವ ಸಾಮರ್ಥ್ಯ ಅವರಿಗಿದೆ. ಇದನ್ನು ಗಮನಿಸಿ ಅವರಿಗೆ ಈ ಮಹತ್ವದ ಹುದ್ದೆಯನ್ನು ನೀಡಲಾಗಿದೆ ಎಂದು ಹೇಳಿದ್ದಾರೆ.

ಹೆಬ್ಬಾಳ್ಕರ್ ‘ಲಕ್ಷ್ಮೀ’ ಲೆಕ್ಕ ಕೇಳಿದ ಇಡಿ: ಬರ್ತಿನಿ ಬಿಡಿ ಎಂದ ನಾಯಕಿಯ ಪೊಟೋ ನೋಡಿ!

ತಮಗಿರುವ ಅನುಭವ, ತಿಳಿವಳಿಕೆಗಳೊಂದಿಗೆ ವಿಷಯವನ್ನು ಸಮರ್ಥವಾಗಿ ಮಂಡಿಸುವ ಸಾಮರ್ಥ್ಯವನ್ನು ಗಮನಿಸಿ ನಿಮ್ಮನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ ಎಂದು ಡಿ.ಕೆ.ಶಿವಕುಮಾರ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.

ತಕ್ಷಣವೇ ಅಧಿಕಾರ ವಹಿಸಿಕೊಂಡು ಕಾರ್ಯಪ್ರವೃತ್ತರಾಗಬೇಕು ಎಂದು ಡಿಕೆ ಶಿವಕುಮಾರ್ ಅವರು ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಸೂಚಿಸಿದ್ದಾರೆ.

ಇನ್ನು ಈ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಲಕ್ಷ್ಮೀ ಹೆಬ್ಬಾಳ್ಕರ್, ನನ್ನನ್ನು ಕೆಪಿಸಿಸಿ ವಕ್ತಾರಳನ್ನಾಗಿ ನೇಮಿಸಿದ ಹೊಸ ಅವಕಾಶ ಕೊಟ್ಟಿದ್ದಕ್ಕಾಗಿ ಡಿಕೆ ಶಿವಕುಮಾರ್, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಧಿ, ಪ್ರಿಯಾಂಕಾ ಗಾಂಧಿ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ ಅವರಿಗೆ ಹೃದಯ ಪುರ್ವಕ ಧನ್ಯವಾದಗಳು ಎಂದಿದ್ದಾರೆ.

Follow Us:
Download App:
  • android
  • ios