ಬೆಂಗಳೂರು, (ಆ.30): ಹಳ್ಳಿಯಿಂದ ಬಿಜೆಪಿ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಶಂಕರಗೌಡ ಪಾಟೀಲ್ ಈಗ ದೆಹಲಿ ಮುಟ್ಟಿದ್ದಾರೆ.

ಹೌದು... ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿದ್ದ ಬೆಳಗಾವಿಯ ಬಿಜೆಪಿ ಮುಖಂಡ ಶಂಕರಗೌಡ ಪಾಟೀಲರನ್ನು ಇದೀಗ ದೆಹಲಿಯ ವಿಶೇಷ ಪ್ರತಿನಿಧಿಯನ್ನಾಗಿ ನೇಮಕ ಮಾಡಲಾಗಿದೆ.

ಕ್ಯಾಬಿನೇಟ್ ದರ್ಜೆಯ ಸ್ಥಾನಮಾನದೊಂದಿಗೆ ದೆಹಲಿಯ ವಿಶೇಷ ಪ್ರತಿನಿಧಿಯನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಇಂದು (ಭಾನುವಾರ) ಆದೇಶ ಹೊರಡಿಸಿದೆ.

ಸಿಎಂ ಯಡಿಯೂರಪ್ಪ ನಿರ್ಧಾರಕ್ಕೆ ಪ್ರಧಾನಿ ಮೋದಿ ಶಹಬ್ಬಾಶ್..!

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಿ ಹೊರಡಿಸಿದ ಆದೇಶವನ್ನು ರಾಜ್ಯ ಸರ್ಕಾರ, ಹಿಂದಕ್ಕೆ ಪಡೆದು  ದೆಹಲಿಯ ವಿಶೇಷ ಪ್ರತಿನಿಧಿಯನ್ನಾಗಿ ನೇಮಿಸಿದೆ.

ಬೆಳಗಾವಿಯ ಬಿಜೆಪಿ ಮುಖಂಡ ಶಂಕರಗೌಡ ಪಾಟೀಲರು ಬಿಜೆಪಿ ಅಧಿಕಾರಕ್ಕೆ ಬಂದಾಗ ಅನೇಕ ಹುದ್ದೆಗಳನ್ನು ಪಡೆದುಕೊಂಡಿದ್ದರು,ಬೆಳಗಾವಿ ಬುಡಾ ಅದ್ಯಕ್ಚ, ಅರಣ್ಯ ನಿಗಮದ ಅದ್ಯಕ್ಷ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ಸೇವೆ ಮಾಡಿರುವ ಶಂಕರಗೌಡ ಪಾಟೀಲರು ಈಗ ಕರ್ನಾಟಕ ಸರ್ಕಾರದ ದೇಹಲಿಯ ವಿಶೇಷ ಪ್ರತಿನಿಧಿಯಾಗಿದ್ದಾರೆ.