Asianet Suvarna News Asianet Suvarna News

ಬೆಳಗಾವಿ ಬೈ ಎಲೆಕ್ಷನ್‌ಗೆ ಅಭ್ಯರ್ಥಿ ಘೋಷಣೆಯಾಗಿಲ್ಲ, ಆಗಲೇ ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ ಸ್ವಾಮೀಜಿ

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಮೊದಲ ದಿನವಾದ ಮಂಗಳವಾರ ಒಟ್ಟು ನಾಲ್ಕು ನಾಮಪತ್ರಗಳು ಸಲ್ಲಿಕೆಯಾಗಿವೆ. ಆದ್ರೆ, ನಾಮಪತ್ರ ಸಲ್ಲಿದ ಸ್ವಾಮೀಜಿ ನಡೆ ಕುತೂಹಲಕ್ಕೆ ಕಾರಣವಾಗಿದೆ.

belagavi lok sabha by Poll swamiji files nomination on bjp Name rbj
Author
Bengaluru, First Published Mar 23, 2021, 10:54 PM IST

ಬೆಳಗಾವಿ, (ಮಾ.23): ಬೆಳಗಾವಿ ಲೋಕಸಭಾ ಬೈ ಎಲೆಕ್ಷನ್‌ಗೆ ಬಿಜೆಪಿ ಇನ್ನೂ ತನ್ನ ಅಭ್ಯರ್ಥಿ ಹೆಸರನ್ನು ಘೋಷಣೆ ಮಾಡಿಲ್ಲ. ಆದರೂ ಬಿಜೆಪಿಯಿಂದ ಸ್ವಾಮೀಜಿಯೊಬ್ಬರು ನಾಮಪತ್ರ ಸಲ್ಲಿಸಿದ್ದಾರೆ. ಇದು ಅಚ್ಚರಿ ಅನ್ನಿಸಿದರೂ ಸತ್ಯ.

ಹೌದು...ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಮೊದಲ ದಿನವಾದ ಇಂದು (ಮಂಗಳವಾರ) ಇಬ್ಬರು ಅಭ್ಯರ್ಥಿಗಳು ಒಟ್ಟು 4 ನಾಮಪತ್ರಗಳನ್ನು ಸಲ್ಲಿಸಿದ್ದಾರೆ‌. ಅದರಲ್ಲೂ ಸ್ವಾಮೀಜಿಯೊಬ್ಬರು ಬಿಪಿಯಿಂದ ಉಮೇದುವಾರಿಕೆ ಸಲ್ಲಿಸಿರೋದು ಕುತೂಹಲ ಮೂಡಿಸಿದೆ. 

ಬೆಳಗಾವಿ ಲೋಕಸಭಾ ಬೈ ಎಲೆಕ್ಷನ್: ಬಿಜೆಪಿಯಲ್ಲಿ ತೇಲಿಬಂದ ಅಚ್ಚರಿ ಹೆಸರುಗಳು!

ಸುರೇಶ್ ಅಂಗಡಿಯವರ ಅಕಾಲಿಕ ನಿಧನದಿಮದ ತೆರವಾಗಿರುವ ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಇದೇ ಏಪ್ರಿಲ್ 17ರಂದು ಮತದಾನ ನಡೆಯಲಿದೆ. ಆದರೂ ಇನ್ನೂ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ. ಇದರ ಮಧ್ಯೆ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ವೆಂಕಟೇಶ್ವರ ಮಹಾಸ್ವಾಮೀಜಿ ಅವರು 3 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. 

ಅದರಲ್ಲಿ ಎರಡು ಭಾರತೀಯ ಜನತಾ ಪಾರ್ಟಿ ಹಾಗೂ ಒಂದು ಹಿಂದುಸ್ತಾನ ಜನತಾ ಪಾರ್ಟಿ ಎಂದು ನಮೂದಿಸಿದ್ದಾರೆ. ಅಲ್ಲದೇ ಸ್ವಾಮೀಜಿ ತಮ್ಮ ನಾಮಪತ್ರದಲ್ಲಿ ಸೂಚಕರಾಗಿ ರಮೇಶ್ ಜಾರಕಿಹೋಳಿ, ಪ್ರಭಾಕರ ಕೋರೆ ಹೆಸರು ಉಲ್ಲೇಖಿಸಿರುವುದು ಅಚ್ಚರಿ ಮೂಡಿಸಿದೆ.

ಇದುವರೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಮಾಡದೇ ಇದ್ದರೂ ಬಿಜೆಪಿ ವತಿಯಿಂದ ಸ್ವಾಮೀಜಿ ನಾಮಪತ್ರ ಸಲ್ಲಿಸಿರುವುದು ಹೇಗೆ ಸಾಧ್ಯ ಎನ್ನುವ ಚರ್ಚೆಗಳು ನಡೆಯುತ್ತಿವೆ. 

ಬೆಳಗಾವಿ ಲೋಕಸಭಾ ಬೈ ಎಲೆಕ್ಷನ್: ಕಾಂಗ್ರೆಸ್ ಅಭ್ಯರ್ಥಿ ಫೈನಲ್!

ಇನ್ನು ಪಕ್ಷೇತರ ಅಭ್ಯರ್ಥಿಯಾಗಿ ಶ್ರೀಕಾಂತ್ ಪಡಸಲಗಿ ಅವರು ನಾಮಪತ್ರವನ್ನು ಸಲ್ಲಿಸಿದರು. ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅವರು ನಾಮಪತ್ರಗಳನ್ನು ಸ್ವೀಕರಿಸಿದರು.

ಸುರೇಶ ಅಂಗಡಿ ಕುಟುಂಬ ಸೇರಿ ಬೆಳಗಾವಿ ಜಿಲ್ಲೆಯ ಹಲವು ನಾಯಕರು ಬಿಜೆಪಿ ಟಿಕೆಟ್ ಗಾಗಿ ಲಾಬಿ ನಡೆಸುತ್ತಿದ್ದಾರೆ. ಟಿಕೆಟ್ ಯಾರಿಗೆ ಕೊಡಬೇಕು ಎಂಬ ಲೆಕ್ಕಾಚಾರದಲ್ಲಿ ಬಿಜೆಪಿ ಹೈಕಮಾಂಡ್ ತೊಡಗಿದೆ. ಮತ್ತೊಂದೆಡೆ ಕಾಂಗ್ರೆಸ್‌ನಿಂದ ಸತೀಶ್ ಜಾರಕಿಹೊಳಿ ಅವರಿಗೆ ಟಿಕೆಟ್ ಫಿಕ್ಸ್ ಎನ್ನಲಾಗುತ್ತಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

ಮಾರ್ಚ್ 23 ನಾಮಪತ್ರ
ಮಾ.30 ನಾಮಪತ್ರ ಸಲ್ಲಿಕೆ ಕೊನೆ ದಿನ
ಏ.3 ನಾಮಪತ್ರ ವಾಪಸ್ ಕೊನೆ ದಿನ
ಏ.17 ಮತದಾನ ಮೇ.2ಕ್ಕೆ ಫಲಿತಾಂಶ

Follow Us:
Download App:
  • android
  • ios