ಬೆಳಗಾವಿ ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ನಾರಾಯಣಸ್ವಾಮಿ

ಉತ್ತರ ಕರ್ನಾಟಕ ಕುರಿತು ಸಮರ್ಪಕವಾಗಿ ಚರ್ಚೆ ನಡೆಯದ ಕಾರಣ ಬೆಳಗಾವಿ ಅಧಿವೇಶನ ತೃಪ್ತಿ ತಂದಿಲ್ಲ ಎಂದು ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

Belagavi Session Not Satisfactory Says Chalavadi Narayanaswamy gvd

ಸುವರ್ಣ ವಿಧಾನಸೌಧ (ಡಿ.20): ಉತ್ತರ ಕರ್ನಾಟಕ ಕುರಿತು ಸಮರ್ಪಕವಾಗಿ ಚರ್ಚೆ ನಡೆಯದ ಕಾರಣ ಬೆಳಗಾವಿ ಅಧಿವೇಶನ ತೃಪ್ತಿ ತಂದಿಲ್ಲ ಎಂದು ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿ, ಸರ್ಕಾರವು ತನ್ನ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಉತ್ತರ ಕರ್ನಾಟಕ ಸಮಸ್ಯೆ ಕುರಿತು ಸಮರ್ಪಕವಾಗಿ ಚರ್ಚೆ ನಡೆಸಲು ಬಿಡದೆ ತೇಪೆ ಹಚ್ಚುವ ಕೆಲಸ ಮಾಡುತ್ತಿದೆ. ಜನರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳುವ ಕೆಲಸ ಮಾಡದೆ ಇರುವ ಕಾರಣ ಅಧಿವೇಶನ ಅತೃಪ್ತಿ ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ತಮಗೆ ಬೇಕಾದವರಿಗೆ ನಿವೇಶನ ಹಂಚಿಕೆ ಮಾಡಿದ್ದಾರೆ. ರಾಯಚೂರು ಉಷ್ಣ ವಿದ್ಯುತ್‌ ಸ್ಥಾವರಕ್ಕೆ ಬಣ್ಣ ಹೊಡೆಯಲು 120 ಕೋಟಿ ರು. ಬೇಕಾ? ವಾಲ್ಮೀಕಿ, ಮುಡಾ ಹಗರಣ ಮತ್ತು ಇತರ ಹಗರಣ ಮುಚ್ಚಿಕೊಳ್ಳಲು ಸರ್ಕಾರ ಮುಂದಾಗಿದೆ. ಹಗರಣಗಳ ಬಗ್ಗೆ ಚರ್ಚೆ ಮಾಡಲು ಎಷ್ಟೇ ಕೇಳಿದರೂ ಅವಕಾಶ ನೀಡುತ್ತಿಲ್ಲ ಎಂದು ಟೀಕಾಪ್ರಹಾರ ನಡೆಸಿದರು. ಸರ್ಕಾರ ಗ್ಯಾರಂಟಿ ಬಿಟ್ಟು ಬೇರೆ ಮಾತನಾಡುತ್ತಿಲ್ಲ. ಗ್ಯಾರಂಟಿಗಳು ಶಾಶ್ವತವಾಗಿರುವುದಿಲ್ಲ. ಗ್ಯಾರಂಟಿ ಜಾರಿಗೆ ಮುನ್ನ ಜನ ಉಪವಾಸ ಇರಲಿಲ್ಲ. ಗ್ಯಾರಂಟಿಗಳ ಜತೆಗೆ ಅಭಿವೃದ್ಧಿ ಮಾಡಬೇಕು. ಗ್ಯಾರಂಟಿಯಲ್ಲೇ ಸರ್ಕಾರ ಮುಗಿದರೆ ಹೇಗೆ? ರೈತರು, ನೀರಾವರಿ ಯೋಜನೆ ಮತ್ತು ಇತರೆ ಸಮಸ್ಯೆಗಳಿವೆ. ಅಭಿವೃದ್ಧಿಗಳಿಗಾಗಿ ಸರ್ಕಾರ ಅನುದಾನ ಒದಗಿಸಬೇಕು ಎಂದು ಆಗ್ರಹಿಸಿದರು.

ದಲಿತರ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಮನವಿ: ರಾಜ್ಯದಲ್ಲಿ ದಲಿತರು ಎದುರಿಸುತ್ತಿರುವ ಹಲವು ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಸರ್ಮಪಕವಾದ ಯೋಜನೆ ರೂಪಿಸಬೇಕೆಂದು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿಗೆ ರಾಜ್ಯ ಛಲವಾದಿ ಮಹಾಸಭಾ ಮನವಿ ಮಾಡಿದೆ. ಬಾಗಲಕೋಟ ಜಿಲ್ಲಾಧ್ಯಕ್ಷ ಪ್ರೇಮನಾಥ ಗರಸಂಗಿ ಅವರ ನೇತೃತ್ವದ ನಿಯೋಗ ಬೆಳಗಾವಿ ಸುವರ್ಣಸೌಧದಲ್ಲಿ ಭೇಟಿಯಾಗಿ ಮನವಿ ಮಾಡಿತು. ವಿಷಯದ ಗಂಭೀರತೆ ಅರಿತ ನಾರಾಯಣಸ್ವಾಮಿ ಅವರು ಈ ಸಂಬಂಧ ತಾವು ಶೀಘ್ರದಲ್ಲಿ ದಲಿತ ಮುಖಂಡರ ಸಭೆ ಕರೆದು ಸಮಾಲೋಚನೆ ಮಾಡಿ ಒಂದು ನಿರ್ಧಾರಕ್ಕೆ ಬರುವ ಅಶ್ವಾಸನೆ ನೀಡಿದರು. 

ಈಗೀಗ ಮಧ್ಯರಾತ್ರಿ ಗುಡ್‌ನೈಟ್ ಮೆಸೇಜ್ ಬಂದರೂ ಬೆಚ್ಚಿ ಬೀಳ್ತೀನಿ: ಕಿಚ್ಚ ಸುದೀಪ್ ಮನದಾಳದ ಮಾತು

ಮನವಿಯಲ್ಲಿ ಇನ್ನಿತರೆ ಬೇಡಿಕೆಗಳಾದ ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯಕ್ಕೆ ಒನಕೆ ಓಬವ್ವನ ಹೆಸರು ಇಡುವುದು ಹಾಗೂ ನವಬೌದ್ಧರಿಗೆ ಗಣಕೀಕೃತ ಪ್ರಮಾಣ ಪತ್ರ ನೀಡುವುದು ಸೇರಿ ಅನೇಕ ಸಮಸ್ಯೆಗಳ ಬಗ್ಗೆ ಪರಿಹಾಕ್ಕೆ ತಾವು ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಭರವಸೆ ನೀಡಿದರು. ನಿಯೋಗದಲ್ಲಿ ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾ ಬಾಗಲಕೋಟೆ ಜಿಲ್ಲಾ ಘಟಕದ ಗೌರವಾಧ್ಯಕ್ಷ ಬಸವರಾಜ ಚಲವಾದಿ, ಪ್ರಧಾನ ಕಾರ್ಯದರ್ಶಿ ಎನ್.ಬಿ.ಗಸ್ತಿ, ಪದಾಧಿಕಾರಿಗಳಾದ ಮಹೇಶ ಬೀಳಗಿ, ಮನೋಹರ ಗರಸಂಗಿ, ಆನಂದ ನಾರಾಯಣಿ ಇದ್ದರು.

Latest Videos
Follow Us:
Download App:
  • android
  • ios