Asianet Suvarna News Asianet Suvarna News

Bellary Election Result 2023: ಬಳ್ಳಾರಿಯಲ್ಲಿ ನಡೆಯದ ರಾಮುಲು ಆಟ, ಕೈಗೆ ಜೈ ಎಂದ ವೋಟರ್

ಕಳೆದ ಬಾರಿ ಚಿತ್ರದುರ್ಗದ ಮೊಳಕಾಲ್ಮೂರು ಕ್ಷೇತ್ರದ ಶಾಸಕನಾಗಿದ್ದ ಬಿಜೆಪಿಯ ಹಿರಿಯ ನಾಯಕ ಬಿ.ಶ್ರೀರಾಮುಲು ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಹೀನಾಯ ಸೋಲು ಕಂಡಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಬಿ.ನಾಗೇಂದ್ರ ಭರ್ಜರಿ ಗೆಲುವು ಕಂಡಿದ್ದಾರೆ.
 

bellary b sriramulu Karnataka election results 2023 live updates winning candidates san
Author
First Published May 13, 2023, 12:19 PM IST

ಬಳ್ಳಾರಿ (ಮೇ.13): ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಬಳ್ಳಾರಿ ರಾಜಕಾರಣದಲ್ಲಿ ಹಿರಿಯ ಸಚಿವ ಹಾಗೂ ಬಿಜೆಪಿಯ ಪ್ರಮುಖ ನಾಯಕ ಬಿ.ಶ್ರೀರಾಮುಲು ಹೀನಾಯ ಸೋಲು ಕಂಡಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಬಿ.ನಾಗೇಂದ್ರ ದೊಡ್ಡ ಮಟ್ಟದ ಗೆಲುವು ಕಂಡಿದ್ದಾರೆ. ಬಹುತೇಕ ಎಲ್ಲಾ ಸುತ್ತುಗಳಲ್ಲಿ ಮುನ್ನಡೆ ಕಂಡುಕೊಂಡಿದ್ದ ಬಿ ನಾಗೇಂದ್ರ, ಒಟ್ಟು 16 ಸುತ್ತಿನ ಮತಎಣಿಕೆಯ ಪೈಕಿ 12 ಸುತ್ತಿನ ಮತ ಎಣಿಕೆಯ ವೇಲೆ 26 ಸಾವಿರ ಮತಗಳ ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಅದರೊಂದಿಗೆ ಬಿಜೆಪಿ ಪಾಲಿಗೆ ಪ್ರಮುಖ ನಾಯಕನಾಗಿದ್ದ ಶ್ರೀರಾಮುಲು ಸೋಲು ಖಚಿತವಾಗಿದೆ. ಸತತ ನಾಲ್ಕು ಬಾರಿ ಶಾಸಕ ಹಾಗೂ ಒಮ್ಮೆ ಎಂಪಿ ಆಗಿ ಆಯ್ಕೆಯಾಗಿದ್ದ ಶ್ರೀರಾಮುಲು ಹೀನಾಯ ಸೋಲು ಕಂಡ ಬೆನ್ನಲ್ಲಿಯೇ ಅವರು ನಿರಾಸೆಯ ಮಡುವಿಗೆ ಬಿದ್ದಿದ್ದಾರೆ. ಇನ್ನೂ ನಾಲ್ಕು ಸುತ್ತಿನ ಮತ ಎಣಿಕೆ ಬಾಕಿ ಇರುವ ನಡುವೆಯೇ ಬಳ್ಳಾರಿಯಲ್ಲಿ‌ ಮುಗಿಲು‌ ಮುಟ್ಟಿದ ನಾಗೇಂದ್ರ ಅಭಿಮಾನಿಗಳು ಹಾಗೂ ಕೈ ಕಾರ್ಯಕರ್ತರ ಸಂಭ್ರಮ ವ್ಯಕ್ತಪಡಿಸಿದ್ದಾರೆ.

Karnataka Election 2023 Live: ಈ ಸಚಿವರಿಗೆ ಕಾಡುತ್ತಿದೆ ಸೋಲಿನ ಭೀತಿ

16ನೇ ವಿಧಾನಸಭಾ ಚುನಾವಣೆಯು ಮೇ 10ರಂದು ಒಂದೇ ಹಂತದಲ್ಲಿ ನಡೆದಿತ್ತು. ರಾಜ್ಯದ ಎಲ್ಲೆಡೆ ಸ್ಥಾಪನೆಯಾದ 58,545 ಮತಗಟ್ಟೆಗಳಲ್ಲಿ 2615 ಅಭ್ಯರ್ಥಿಗಳ ಭವಿಷ್ಯವನ್ನು 3.8 ಕೋಟಿ ಮತದಾರರು ಬರೆದಿದ್ದು, ಒಟ್ಟಾರೆ ದಾಖಲೆಯುತ ಶೇ.73.19ರಷ್ಟು ಮತದಾನವಾಗಿತ್ತು. 224 ಅಭ್ಯರ್ಥಿಗಳು ರಾಜ್ಯ ವಿಧಾನಸಭೆಗೆ ಆಯ್ಕೆಯಾಗಲಿದ್ದು, ಸರಕಾರ ರಚಿಸಲು ಪಕ್ಷವೊಂದಕ್ಕೆ 113 ಬಲಾಬಲ ಪ್ರದರ್ಶಿಸಬೇಕು.

16ನೇ ವಿಧಾನಸಭಾ ಚುನಾವಣೆಯು ಮೇ 10ರಂದು ಒಂದೇ ಹಂತದಲ್ಲಿ ನಡೆದಿತ್ತು. ರಾಜ್ಯದ ಎಲ್ಲೆಡೆ ಸ್ಥಾಪನೆಯಾದ 58,545 ಮತಗಟ್ಟೆಗಳಲ್ಲಿ 2615 ಅಭ್ಯರ್ಥಿಗಳ ಭವಿಷ್ಯವನ್ನು 3.8 ಕೋಟಿ ಮತದಾರರು ಬರೆದಿದ್ದು, ಒಟ್ಟಾರೆ ದಾಖಲೆಯುತ ಶೇ.73.19ರಷ್ಟು ಮತದಾನವಾಗಿತ್ತು. 224 ಅಭ್ಯರ್ಥಿಗಳು ರಾಜ್ಯ ವಿಧಾನಸಭೆಗೆ ಆಯ್ಕೆಯಾಗಲಿದ್ದು, ಸರಕಾರ ರಚಿಸಲು ಪಕ್ಷವೊಂದಕ್ಕೆ 113 ಬಲಾಬಲ ಪ್ರದರ್ಶಿಸಬೇಕಿತ್ತು.

Follow Us:
Download App:
  • android
  • ios