ಕರ್ನಾಟಕದ ಮತ್ತೋರ್ವ ಬಿಜೆಪಿ ಶಾಸಕರೊಬ್ಬರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಸಂಪರ್ಕಕ್ಕೆ ಬಂದವರಿಗೆ ಕ್ವಾರಂಟೈನ್ ಆಗುವಂತೆ ಮನವಿ ಮಾಡಿದ್ದಾರೆ.

ಮಂಗಳೂರು, (ಆ.05): ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜ ಅವರಿಗೂ ಇಂದು (ಬುಧವಾರ) ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಈ ಕುರಿತಂತೆ ಟ್ವಿಟ್ಟರ್‌ ಮೂಲಕ ಖತಿಪಡಿಸಿದ್ದು, ಮನೆಯಲ್ಲೇ ಚಿಕಿತ್ಸೆ ಪಡೆಯುವುದಾಗಿ ತಿಳಿಸಿದ್ದಾರೆ. ಅಲ್ಲದೇ ಸಂಪರ್ಕದಲ್ಲಿದ್ದವರಿಗೆ ಕ್ವಾರಂಟೈನ್ ಆಗುವಂತೆ ಮನವಿ ಮಾಡಿದ್ದಾರೆ.

ಜೆಡಿಎಸ್‌ ಶಾಸಕ ಜಿ.ಟಿ. ದೇವೇಗೌಡಗೆ ಕೊರೋನಾ ಪಾಸಿಟಿವ್‌

ಸಣ್ಣ ಮಟ್ಟಿನ ಜ್ವರ ಇದ್ದ ಕಾರಣ ಮಾಡಿಸಿದ ಕೋವಿಡ್ 19 ಕೊರೋನಾ ಪರೀಕ್ಷೆಯಲ್ಲಿ ನನಗೆ ಕೋವಿಡ್19 ಪಾಸಿಟಿವ್ ಎಂದು ವರದಿ ಬಂದಿದೆ. ಸಣ್ಣ ಮಟ್ಟಿನ ಜ್ವರ ಹೊರತುಪಡಿಸಿ ಬೇರೆ ಯಾವುದೇ ಲಕ್ಷಣಗಳಿಲ್ಲದೆ ಇರುವುದರಿಂದ ಮನೆಯಲ್ಲಿಯೇ ಇದ್ದು ಶುಶ್ರೂಷೆ ಪಡೆಯುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ಎಂದಿದ್ದಾರೆ.

Scroll to load tweet…