ಯಡಿಯೂರಪ್ಪ ಅವರನ್ನು ಭೇಟಿಯಾಗಿ ಬಿಜೆಪಿ ಸೇರ್ಪಡೆ, ಲೋಕಸಭೆ ಸ್ಪರ್ಧೆ ಖಚಿತಪಡಿಸಿದ ಡಾ.ಸಿ.ಎನ್.ಮಂಜುನಾಥ್!
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಬಿಜೆಪಿ ಸೇರ್ಪಡೆಯಾಗಿ, ಲೋಕಸಭಾ ಚುನಾವನೆಯಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದು ಜಯದೇವ ಹೃದ್ರೋಗ ಸಂಸ್ಥೆ ಮಾಜಿ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ತಿಳಿಸಿದ್ದಾರೆ.
ಬೆಂಗಳೂರು (ಮಾ.13): ನಮ್ಮ ನಾಡಿನ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರ ಹ್ಯಾಟ್ರಿಕ್ ಗೆಲುವಿಗಾಗಿ ನಾನು ಕೂಡ ನಿರೀಕ್ಷೆ ಮಾಡುತ್ತಿದ್ದೇನೆ. ನಾನು ಕೂಡ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗುವುದಕ್ಕೆ ಕೈ ಬಲಪಡಿಸುತ್ತೇನೆ. ಈ ನಿಟ್ಟಿನಲ್ಲಿ ಬಿಜೆಪಿ ಸೇರ್ಪಡೆಗೊಂಡು, ಲೋಕಸಭಾ ಚುನಾವಣೆಯಲ್ಲಿಯೂ ಸ್ಪರ್ಧಿಸುತ್ತೇನೆ ಎಂದು ಜಯದೇವ ಹೃದ್ರೋಗ ಸಂಸ್ಥೆ ಮಾಜಿ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರು ತಿಳಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್, ಯಡಿಯೂರಪ್ಪ ಅವರನ್ನು ಭೇಟಿಯಾಗಿ ಪಕ್ಷ ಸೇರ್ಪಡೆ ಬಗ್ಗೆ ಮಾತನಾಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಹ್ಯಾಟ್ರಿಕ್ ಚುನಾವಣೆ ಎದುರಿಸುತ್ತಿದ್ದಾರೆ. ಅವರ ಗೆಲ್ಲುವ ನಿರೀಕ್ಷೆಯಿದ್ದು, ಅವರ ಕೈ ಬಲಪಡಿಸಲು ಸಿದ್ಧವಾಗಿದ್ದೇನೆ. ಈ ನಿಟ್ಟಿನಲ್ಲಿ ಬಿಜೆಪಿ ಸೇರ್ಪಡೆಯಾಗಿ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಟಿಕೆಟ್ ಕೊಟ್ಟ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದರು.
ಡಾ.ಸಿ.ಎನ್. ಮಂಜುನಾಥ್ ನಾಳೆ ಬಿಜೆಪಿ ಸೇರ್ಪಡೆ, ಆರ್.ಆರ್.ನಗರದಲ್ಲಿ ಪ್ರಚಾರ ಪೂರ್ವಭಾವಿ ಸಭೆ
ನಾನು ರಾಜಕಾರಣದಲ್ಲೂ ರಾಜಕೀಯ ಮಾಡುವುದಿಲ್ಲ. ಬಹಳ ಮುಖ್ಯವಾದುದು ಆರೋಗ್ಯ, ಕೃಷಿ, ಶಿಕ್ಷಣ ಮತ್ತು ತಂತ್ರಜ್ಞಾನ. ಈ ಎಲ್ಲ ವ್ಯವಸ್ಥೆಗಳನ್ನು ಸರ್ಕಾರಿ ಅನುದಾನದಿಂದ ಅಭಿವೃದ್ಧಿ ಮಾಡಲು ಹೇಗೆ ಸಾಧ್ಯ ಎಂಬುದನ್ನು ತೋರಿಸಲಾಗಿದೆ. ನಾನು ರಾಜ್ಯಮಟ್ಟದಲ್ಲಿ ಮಾಡಿದ ಸಾಧನೆಯನ್ನು ರಾಷ್ಟ್ರಮಟ್ಟಕ್ಕೂ ಕೊಂಡೊಯ್ಯಲು ತೀರ್ಮಾನಿಸಿ ರಾಜಕಾರಣಕ್ಕೆ ಬರುತ್ತಿದ್ದೇನೆ. ಕಳೆದ ಮೂರು ವಾರಗಳಿಂದ ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಕರೆ ಮಾಡಿ ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ನಾನು ಕೂಡ ರಾಜಕಾರಣಕ್ಕೆ ಬರುತ್ತಿದ್ದೇನೆ ಎಂದು ತಿಳಿಸಿದರು.
ರಾಜಕಾರಣ ಎಂದಾಕ್ಷಣ ಎಲ್ಲ ಮಾತುಗಳು ಕೇಳಿಬರುತ್ತವೆ. ಜನರಿಗೆ ನನ್ನ ಬಗ್ಗೆ ಗೊತ್ತಿದೆ. ಆರೋಗ್ಯ ಕ್ಷೇತ್ರ ಬಹಳ ದೊಡ್ಡ ಕ್ಷೇತ್ರವಾಗಿದ್ದು, ಇಲ್ಲಿ ಸಾಧಿಸಿದ ಯಶಸ್ಸನ್ನು ರಾಜಕಾರಣದಲ್ಲೂ ಸಾಧಿಸುವ ನಿರೀಕ್ಷೆಯಿದೆ. ಪ್ರಧಾನಿ ಮೋದಿ ಅವರು ಹಾಗೂ ಮಾಜಿ ಪ್ರಧಾನಿ ದೇವೇಗೌಡ ಅವರ ನಾಯಕತ್ವದಲ್ಲಿ ರಾಜರಾರಣದಲ್ಲಿ ಬರುವುದೆಲ್ಲವನ್ನು ಸ್ವೀಕರಿಸಲು ಸಿದ್ಧವಾಗಿದ್ದೇನೆ ಎಂದು ಹೇಳಿದರು.
ಲೋಕಸಭಾ ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳಿದ ಸಂಸದ ಡಿ.ವಿ. ಸದಾನಂದಗೌಡ!
ನಾಳೆಯೇ ಬಿಜೆಪಿ ಸೇರ್ಪಡೆಯಾಗುವ ಕಾರ್ಯಕ್ರಮ ನಿಗದಿಯಾಗಿಲ್ಲ. ಆದರೆ, ಎಲ್ಲ ನಾಯಕರ ಲಭ್ಯತೆಯನ್ನು ನೋಡಿಕೊಂಡು ದಿನಾಂಕ ನಿಗದಿ ಮಾಡಿಕೊಂಡು ಪಕ್ಷ ಸೇರ್ಪಡೆ ಆಗುತ್ತೇನೆ. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಹೆಚ್.ಡಿ. ಕುಮಾರಸ್ವಾಮಿ ಅವರಿಂದ ಕೆಲ ಮಾರ್ಗದರ್ಶನಗಳನ್ನೂ ಪಡೆದುಕೊಳ್ಳುತ್ತೇನೆ ಎಂದು ಡಾ.ಮಂಜುನಾಥ್ ತಿಳಿಸಿದರು.