ಬೆಂಗಳೂರು, (ಆಗಸ್ಟ್ 05): ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆ ತಿಳಿಸಿದೆ. 

 ಸಿಎಂ ಬಿಎಸ್‌ವೈ ಆರೋಗ್ಯದ ಕುರಿತು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆ ಇಂದು (ಬುಧವಾರ) ಹೆಲ್ತ್ ಬುಲೆಟಿನ್ ಬಿಡುಗಡೆಗೊಳಿಸದೆ. 
ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದ್ದು, ಅವರು ತಮ್ಮ ಕೊಠಡಿಯಿಂದಲೇ ದೈನಂದಿನ ಕಾರ್ಯಚಟುವಟಿಕೆಗಳನ್ನು ಸಹಜವಾಗಿ ನಿರ್ವಹಿಸುತ್ತಿದ್ದಾರೆ ಎಂದು ಆಸ್ಪತ್ರೆ ಹೆಲ್ತ್ ಬುಲೆಟಿನ್ ಮೂಲಕ ಸ್ಪಷ್ಟಪಡಿಸಿದೆ.

ಸಿಎಂ ಬೇಗ ಗುಣಮುಖರಾಗಲೆಂದು ಮುಸ್ಲಿಂ ಬಾಂಧವರಿಂದ ದರ್ಗಾದಲ್ಲಿ ಪ್ರಾರ್ಥನೆ

ಕೊರೋನಾ ವೈರಸ್ ತಗುಲಿರುವುದರಿಂದ ಸಿಎಂ ಮೊನ್ನೇ ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಯಿಂದಲೇ ಆಡಳಿತ ನಡೆಸುತ್ತಿದ್ದಾರೆ.

ಅಲ್ಲದೇ ಇಂದು (ಬುಧವಾರ) ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡಿದ ಕಾರ್ಯಕ್ರಮವನ್ನು ಮಣಿಪಾಲ್ ಆಸ್ಪತ್ರೆಯ ಟಿವಿಯಲ್ಲಿ ನೇರ ಪ್ರಸಾರ ವೀಕ್ಷಣೆ ಮಾಡಿದರು.

ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೂಡ ಕೊರೋನಾ ಸೋಂಕಿನಿಂದಾಗಿ ಅದೇ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯವು ಸಹ ಸ್ಥಿರವಾಗಿದೆ ಎಂದು ವೈದ್ಯರು ಹೇಳಿದ್ದಾರೆ.