Asianet Suvarna News Asianet Suvarna News

ಸಂವಿಧಾನ ಬದಲಾಯಿಸುವ ವಿರೋಧಿಗಳ ಬಗ್ಗೆ ಎಚ್ಚರ ವಹಿಸಿ: ಸಿದ್ದರಾಮಯ್ಯ

ಸಮಾಜದಲ್ಲಿ ಬದಲಾವಣೆ ಒಪ್ಪದೆ ಅಸಮಾನತೆ ಪೋಷಿಸುವವರು, ಸಂವಿಧಾನ ಬದಲಾಯಿಸುವ ಹುನ್ನಾರ ನಡೆಸುವವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. 

Beware of opponents of constitutional change Says CM Siddaramaiah gvd
Author
First Published Jan 29, 2024, 2:30 AM IST

ಬೆಂಗಳೂರು (ಜ.29): ಸಮಾಜದಲ್ಲಿ ಬದಲಾವಣೆ ಒಪ್ಪದೆ ಅಸಮಾನತೆ ಪೋಷಿಸುವವರು, ಸಂವಿಧಾನ ಬದಲಾಯಿಸುವ ಹುನ್ನಾರ ನಡೆಸುವವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಮೆಜೆಸ್ಟಿಕ್‌ನ ಖೋಡೆ ವೃತ್ತದ ಸಮೀಪ ಆಯೋಜಿಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುಣ್ಯ ಸಂಸ್ಮರಣಾ ದಿನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎಲ್ಲರಿಗೂ ಸಮಾನ ಅವಕಾಶ ಲಭಿಸಿ ಸಮಾಜದಲ್ಲಿ ಬದಲಾವಣೆಯಾಗಬಾರದು. ಯಾರೋ ದುಡಿದಿದ್ದನ್ನು ತಾವು ಕುಳಿತು ತಿನ್ನಬೇಕು ಎಂದು ಬಯಸುವವರು ಈಗಲೂ ನಮ್ಮ ಸಂವಿಧಾನ ಬದಲಾಯಿಸುವ ಹುನ್ನಾರ ನಡೆಸುತ್ತಿದ್ದಾರೆ. 

ಇಂಥವರ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಅಭಿಪ್ರಾಯಪಟ್ಟರು. ಸಮಾಜದ ಬದಲಾವಣೆಗೆ ಒಪ್ಪದೆ ಅಸಮಾನತೆ ಪೋಷಿಸುವವರು ಬಹಳ ಅಪಾಯಕಾರಿ. ಎಲ್ಲರಿಗೂ ಸಮಾನ ಅವಕಾಶಗಳು ಸಿಗಬಾರದು ಎಂದು ಇವರು ಬಯಸುತ್ತಾರೆ. ನಮ್ಮ ಸಂವಿಧಾನ ಬದಲಾಯಿಸಬೇಕು ಎಂದು ಹುನ್ನಾರ ನಡೆಸುತ್ತಿದ್ದಾರೆ. ಇವರ ಬಗ್ಗೆ ಎಚ್ಚರದಿಂದ ಇರಬೇಕು. ಇವರ ಆಶಯಗಳು ನಾಶವಾಗುವಂತೆ ನಾವು ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ರಾಜಕಾರಣದ ಮೇಲೆ ಧರ್ಮದ ಪ್ರಭಾವ ಹೆಚ್ಚುತ್ತಿದೆ, ಇದು ಪ್ರಜಾಪ್ರಭುತ್ವಕ್ಕೆ ಮಾರಕ: ವೀರಪ್ಪ ಮೊಯ್ಲಿ

ನಮ್ಮವರ ಕುತಂತ್ರ ಕಾರಣ: ನಮ್ಮವರ ಕುತಂತ್ರ-ಪಿತೂರಿಯಿಂದಲೇ ಬ್ರಿಟೀಷರು 400 ವರ್ಷ ಭಾರತವನ್ನು ಆಳಿದರು. ದೇಶ ಪ್ರೇಮಿ ಸಂಗೊಳ್ಳಿರಾಯಣ್ಣನನ್ನೂ ನಮ್ಮವರೆ ಕುತಂತ್ರದಿಂದ ಬ್ರಿಟಿಷರಿಗೆ ಹಿಡಿದು ಕೊಟ್ಟರು. ರಾಯಣ್ಣ ಕುರುಬ ಸಮುದಾಯಕ್ಕೆ ಸೇರಿದವರು ಎಂದು ನಾವು ಗೌರವ ನೀಡುವುದಲ್ಲ, ರಾಯಣ್ಣನ ದೇಶಪ್ರೇಮ ಮತ್ತು ತ್ಯಾಗಕ್ಕಾಗಿ ಅವರನ್ನು ಪ್ರತಿಯೊಬ್ಬರೂ ಸ್ಮರಿಸಬೇಕು, ಗೌರವಿಸಬೇಕು. ಪ್ರತೀ ಮನೆಗಳಲ್ಲೂ ರಾಯಣ್ಣ ಜನಿಸಬೇಕು ಎಂದು ತಿಳಿಸಿದರು. ಕೆಂಪೇಗೌಡ ಪ್ರಾಧಿಕಾರ ಮಾಡಿದ್ದು ನಾವೇ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರನ್ನು ನಾಮಕರಣ ಮಾಡಬೇಕೆಂದು ಶಿಫಾರಸು ಮಾಡಿದ್ದು ಕೂಡ ನಾವೆ. 

ಕೆಂಪೇಗೌಡ, ರಾಯಣ್ಣ, ಬಸವಣ್ಣ, ಕುವೆಂಪು, ಕನಕದಾಸ, ಮಹಾತ್ಮಗಾಂಧಿ, ವಿವೇಕಾನಂದ ಸೇರಿದಂತೆ ಎಲ್ಲ ಮಹಾತ್ಮರ ಆಶಯಗಳು ಸ್ಫೂರ್ತಿಯಾಗಲಿ ಎಂದು ಅವರ ಹೆಸರುಗಳನ್ನು ನಾಮಕರಣ ಮಾಡಲಾಗುತ್ತದೆ ಎಂದು ಹೇಳಿದರು. ರಾಯಣ್ಣ ಜನಿಸಿದ ಸಂಗೊಳ್ಳಿ, ಅವರನ್ನು ಗಲ್ಲಿಗೇರಿಸಿದ ನಂದಗಢ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ರಾಯಣ್ಣ ಹೆಸರಿಡಲು ಕೇಂದ್ರಕ್ಕೆ ಶಿಫಾರಸು ಮಾಡಲಾಗಿದೆ. ನಮಗೇ ಅಧಿಕಾರ ಇದ್ದದ್ದರೆ ನಾನೇ ಹೆಸರು ನಾಮಕರಣ ಮಾಡುತ್ತಿದೆ. ಆದರೆ ಕೇಂದ್ರ ಸರ್ಕಾರ ಈ ಕೆಲಸ ಮಾಡಬೇಕಿದೆ ಎಂದು ಸ್ಪಷ್ಟಪಡಿಸಿದರು.

ಭವಿಷ್ಯದ ವಿದ್ಯುತ್ ಭಾರ ನಿಭಾಯಿಸಲು ಸರ್ಕಾರ ಬದ್ಧ: ಸಚಿವ ಸತೀಶ್‌ ಜಾರಕಿಹೊಳಿ

ಅಸಮಾನತೆ ಹೋಗಿ ಸಮಾನತೆ ಮೂಡಬೇಕು ಎಂಬ ಉದ್ದೇಶದಿಂದ ರಾಜ್ಯದಲ್ಲಿ ಸಂವಿಧಾನ ಜಾಥಾ ಮಾಡುತ್ತಿದ್ದೇವೆ. ಸಂವಿಧಾನ ಬದಲಿಸಬೇಕು ಎನ್ನುವವರಿಗೂ ನಮ್ಮಲ್ಲಿ ಚಪ್ಪಾಳೆ ತಟ್ಟುತ್ತಾರೆ. ಸಂವಿಧಾನ ಉಳಿಸಬೇಕು ಎನ್ನುವವರಿಗೂ ಚಪ್ಪಾಳೆ ತಟ್ಟುತ್ತಾರೆ. ಇಂತಹವರಿಗೆ ಏನು ಹೇಳಬೇಕು ಎಂದು ಪ್ರಶ್ನಿಸಿದರು. ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ನಸೀರ್‌ ಅಹ್ಮದ್‌, ಕೆ.ಗೋವಿಂದರಾಜು, ಮಾಜಿ ಸಚಿವ ಎಚ್‌.ಎಂ.ರೇವಣ್ಣ ಮತ್ತಿತರರು ಹಾಜರಿದ್ದರು.

Latest Videos
Follow Us:
Download App:
  • android
  • ios