ಕಾಂಗ್ರೆಸ್ ಯುವ ಘಟಕ ಅಧ್ಯಕ್ಷರ ನೇಮಕ: ರಾಷ್ಟ್ರೀಯ ಪಕ್ಷಗಳಲ್ಲಿ ಕನ್ನಡಿಗರದ್ದೇ ಹವಾ..!
ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರನ್ನ ಬಿಜೆಪಿ ರಾಷ್ಟ್ರೀಯ ಯು ಮೋರ್ಚ ಅಧ್ಯಕ್ಷರನ್ನಾಗಿ ನೇಮಕದ ಬೆನ್ನಲ್ಲೇ ಇದೀಗ ಮತ್ತೋರ್ವ ಕನ್ನಡಿಗ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ.
ನವದೆಹಲಿ, (ಡಿ.02): ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ರಾಷ್ಟ್ರೀಯ ಪಕ್ಷಗಳಲ್ಲಿ ಇಬ್ಬರು ಕನ್ನಡಿಗರು ಯುವ ಸಾರಥ್ಯ ವಹಿಸಿಕೊಂಡಿದ್ದಾರೆ.
ಹೌದು...ಸಂಸದ ತೇಜಸ್ವಿ ಸೂರ್ಯ ಅವರನ್ನ ಬಿಜೆಪಿ ರಾಷ್ಟ್ರೀಯ ಯು ಮೋರ್ಚ ಅಧ್ಯಕ್ಷರನ್ನಾಗಿ ನೇಮಕದ ಬೆನ್ನಲ್ಲೇ ಇದೀಗ ಮತ್ತೋರ್ವ ಕನ್ನಡಿಗ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ.
ಶ್ರೀನಿವಾಸ್ ಬಿ.ವಿ. ಅವರನ್ನು ಭಾರತೀಯ ಯುವ ಕಾಂಗ್ರೆಸ್ (ಐವೈಸಿ)ನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು (ಬುಧವಾರ) ಆದೇಶ ಹೊರಡಿಸಿದ್ದಾರೆ.
ರಾಹುಲ್ ಗಾಂಧಿ ಯುವ ಟೀಂನಲ್ಲಿ ಏಕೈಕ ಕನ್ನಡಿಗ ಈ ಕ್ರಿಕೆಟ್ ಪಟು
ನೇಮಕಾತಿ ತಕ್ಷಣದಿಂದ ಜಾರಿಗೆ ಬರಲಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ ಸಿ ವೇಣುಗೋಪಾಲ್ ಅಧಿಕೃತ ತಿಳಿಸಿದ್ದಾರೆ.
ಕಳೆದ ವರ್ಷ ಜುಲೈನಲ್ಲಿ ಭದ್ರಾವತಿ ಮೂಲದ ಶ್ರೀನಿವಾಸ್ ಅವರನ್ನು ಭಾರತೀಯ ಯುವ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಇದೀಗ ಪೂರ್ಣ ಅವಧಿಗೆ ನೇಮಕ ಮಾಡಲಾಗಿದೆ.
ಅತ್ತ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚ ಅಧ್ಯಕ್ಷರಾಗಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ನೇಮಕಗೊಂಡು, ಹೈದರಾಬಾದ್, ಪಶ್ಚಿಮ ಬಂಗಾಳದಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಒಟ್ಟಿನಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳಲ್ಲಿ ಕರ್ನಾಟಕದ ಮೂಲಕ ಇಬ್ಬರು ರಾಷ್ಟ್ರ ಮಟ್ಟದಲ್ಲಿ ಮಹತ್ವದ ಹುದ್ದೆಗೆ ಪಡೆದುಕೊಂಡಿರುವುದು ವಿಶೇಷ.