ಜೆಡಿಎಸ್ ಮತ್ತು ಬಿಜೆಪಿ ಹಾಲು ಜೇನಿ ನಂತೆ ಸಮ್ಮಿಳಿತವಾಗಿ ಕೆಲಸ ಮಾಡುತ್ತಿವೆ. ಮಹಿಳಾ ಮೀಸಲು ಮಸೂದೆಯನ್ನು ಪ್ರಧಾನಿಯಾಗಿದ್ದ ವೇಳೆ ದೇವೇಗೌಡ ಅವರು ಸಂಸತ್ತಿನಲ್ಲಿ ಮಂಡಿಸಿದರು. ಪ್ರಧಾನಿ ಮೋದಿ ಅವರು ಅದೇ ಸಂಸತ್ತಿನಲ್ಲಿ ಮಸೂದೆಗೆ ಅಂಗೀಕಾರ ಪಡೆದು ಜಾರಿಗೂ ತಂದರು. ಇಂಥ ಜೋಡಿ ದೇಶಕ್ಕೆ, ರಾಜ್ಯಕ್ಕೆ ಒಳ್ಳೆಯದು ಮಾಡುತ್ತದೆ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ| ಸಿ.ಎನ್. ಮಂಜುನಾಥ್ 

ಬೆಂಗಳೂರು(ಏ.03): ಪ್ರಧಾನಿ ನರೇಂದ್ರ ಮೋದಿ ಮತ್ತು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಜೋಡಿ ರಾಜ್ಯಕ್ಕೆ ಬಹುದೊಡ್ಡ ಕೊಡುಗೆ ನೀಡಲಿದೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ| ಸಿ.ಎನ್. ಮಂಜುನಾಥ್ ಹೇಳಿದ್ದಾರೆ. ಮಂಗಳವಾರ ಜೆಡಿಎಸ್ ಕಚೇರಿಯಲ್ಲಿ ಬೆಂಗಳೂರು ಕೇಂದ್ರ ಕ್ಷೇತ್ರದಮೈತ್ರಿ ಅಭ್ಯರ್ಥಿ ಪಿ.ಸಿ.ಮೋಹನ್‌ರೊಂದಿಗೆ ಮೈತ್ರಿ ಪಕ್ಷಗಳ ಕಾಠ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.

ಜೆಡಿಎಸ್ ಮತ್ತು ಬಿಜೆಪಿ ಹಾಲು ಜೇನಿ ನಂತೆ ಸಮ್ಮಿಳಿತವಾಗಿ ಕೆಲಸ ಮಾಡುತ್ತಿವೆ. ಮಹಿಳಾ ಮೀಸಲು ಮಸೂದೆಯನ್ನು ಪ್ರಧಾನಿಯಾಗಿದ್ದ ವೇಳೆ ದೇವೇಗೌಡ ಅವರು ಸಂಸತ್ತಿನಲ್ಲಿ ಮಂಡಿಸಿದರು. ಪ್ರಧಾನಿ ಮೋದಿ ಅವರು ಅದೇ ಸಂಸತ್ತಿನಲ್ಲಿ ಮಸೂದೆಗೆ ಅಂಗೀಕಾರ ಪಡೆದು ಜಾರಿಗೂ ತಂದರು. ಇಂಥ ಜೋಡಿ ದೇಶಕ್ಕೆ, ರಾಜ್ಯಕ್ಕೆ ಒಳ್ಳೆಯದು ಮಾಡುತ್ತದೆ ಎಂದರು.

ಬಿಜೆಪಿ ಡಾ.ಸಿ.ಎನ್.ಮಂಜುನಾಥ್‌ ವಿರುದ್ಧ ಬಿಎಸ್‌ಪಿಯ ಡಾ.ಸಿ.ಎನ್‌ ಮಂಜುನಾಥ್‌ ಸ್ಪರ್ಧೆ!

ಎನ್‌ಡಿಎ ಮೈತ್ರಿಕೂಟ ದೇಶಾದ್ಯಂತ 400ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸು ವುದರಲ್ಲಿ ಅನುಮಾನ ಇಲ್ಲ. ಆ 400 ಸಂಸದ ರಲ್ಲಿ ನಾನು, ಪಿ.ಸಿ.ಮೋಹನ್ ಇರುತ್ತಾರೆ ಎಂದು ಹೇಳಿದರು.

ಸಂಸದ ಪಿ.ಸಿ.ಮೋಹನ್ ಮಾತನಾಡಿ, ರಾಜ್ಯದ ಅಭಿವೃದ್ಧಿಗೆ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು. ರಾಜ್ಯ ಸರ್ಕಾರದ ವೈಫಲ್ಯಗಳನ್ನು ಜನತೆಗೆ ಮನವರಿಕೆ ಮಾಡಿಕೊಡಬೇಕು ಎಂದರು. ಜೆಡಿಎಸ್‌ ನಗರ ಘಟಕದ ಅಧ್ಯಕ್ಷ ಎಚ್‌.ಎಂ. ರಮೇಶ್ ಗೌಡ, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಉಪಸ್ಥಿತರಿದ್ದರು.