ಚಿಕಿತ್ಸೆ ಫಲಕಾರಿಯಾಗದೇ ಕೋವಿಡ್‍ಗೆ ಬಿಜೆಪಿ MLC ಬಲಿ
ಮಹಾಮಾರಿ ಕೊರೋನಾ ಎರಡನೇ ಅಲೆ ಭೀಕರವಾಗಿದ್ದು, ಸಾವಿನ ಪ್ರಮಾಣದಲ್ಲಿ ಹೆಚ್ಚಾಗಿದೆ. ಅದರಲ್ಲೂ ದೊಡ್ಡ-ದೊಡ್ಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜಕಾರಣಿಗಳನ್ನೂ ಸಹ ಬಲಿ ಪಡೆಯುತ್ತಿದೆ.
ಪಾಟ್ನಾ, (ಮೇ.01): ದೇಶದಲ್ಲಿ ಕೊರೋನಾ ಅಟ್ಟಹಾಸ ಮೆರೆಯುತ್ತಿದ್ದು, ರಾಜಕಾರಣಿಗಳ ಸಾವು ಕೂಡ ಮುಂದುವರೆದಿದೆ. ಇದೀಗ ಇದರ ಸಾಲಿಗೆ ಬಿಹಾರ ಬಿಜೆಪಿ ಎಂಎಲ್‌ಸಿ ಹರಿ ನಾರಾಯಣ್ ಚೌಧರಿ ಸೇರಿದ್ದಾರೆ.
ಹೌದು.. ಬಿಹಾರ ಬಿಜೆಪಿ ವಿಧಾನಪರಿಷ್ತ ಸದಸ್ಯ ಹರಿ ನಾರಾಯಣ್ ಚೌಧರಿ ಮಹಾಮಾರಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.
ಕೋವಿಡ್ ಪಾಸಿಟಿವ್ ಸೋಂಕು ದೃಢ ಪಟ್ಟಿದ್ದರಿಂದ 1 ವಾರದ ಹಿಂದೆ ಇಂದಿರಾಗಾಂಧಿ ಮೆಡಿಕಲ್ ಸೈನ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಶುಕ್ರವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ ಎಂದು ಬಿಹಾರ ವಿಧಾನ ಪರಿಷತ್ ಸಭಾಧ್ಯಕ್ಷ ಅವದೇಶ್ ನರೈನ್ ಸಿಂಗ್ ಹೇಳಿದ್ದಾರೆ.
ಭಾರತದ ಕೊರೋನಾ ನಿಯಂತ್ರಣಕ್ಕೆ US ಮೆಡಿಕಲ್ ಮಹತ್ವದ ಸಲಹೆ!
77 ವರ್ಷದ ಚೌಧರಿ 2015 ರಲ್ಲಿ ಸಮಸ್ತಿಪುರ ಸ್ಥಳೀಯ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಇನ್ನು ನಾರಾಯಣ ಅವರ ನಿಧನಕ್ಕೆ ಸಿಎಂ ನಿತೀಶ್ ಕುಮಾರ್ ಕೂಡ ಸಂತಾಪ ಸೂಚಿಸಿದ್ದಾರೆ.
ಚೌಧರಿ ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಮೂರು ಪುತ್ರಿಯರನ್ನು ಅಗಲಿದ್ದಾರೆ. ಸರ್ಕಾರದ ಸಕಲ ಗೌರವಗಳೊಂದಿಗೆ ಮುಕ್ತಿಧಾಮದಲ್ಲಿ ಅಂತ್ಯ ಕ್ರಿಯೆ ನಡೆಯಲಿದೆ.