ಪಾಟ್ನಾ, (ಅ.12): ಬಿಹಾರದ ಹಿಂದುಳಿದ ವರ್ಗದ ಕಲ್ಯಾಣ ಸಚಿವ ವಿನೋದ್ ಕುಮಾರ್ ಸಿಂಗ್ (55) ಸೋಮವಾರ ನಿಧನರಾಗಿದ್ದಾರೆ.

ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ದೆಹಲಿಯ ಆಸ್ಪತ್ರೆಯಲ್ಲಿ ಸೋಮವಾರ ಮೃತಪಟ್ಟಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ. 

ಸರ್ಕಾರಿ ನೌಕರರಿಗೆ ಬಂಪರ್, RCBಗೆ ಸವಾಲ್ ಹಾಕಿದ ಕೆಕೆಆರ್; ಅ.12ರ ಟಾಪ್ 10 ಸುದ್ದಿ!

ಕತಿಹಾರ್ ಜಿಲ್ಲೆಯ ಪ್ರಾನ್ಪುರ್ ಕ್ಷೇತ್ರದ ಬಿಜೆಪಿ ಶಾಸಕರಾದ ಶ್ರೀ ಸಿಂಗ್ ಅವರು ಜೂನ್ 28 ರಂದು ಕೊರೋನಾ ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಕೊರೋನಾ ಪಾಸಿಟಿವ್ ಧೃಡವಾಗಿತ್ತು. ಬಳಿಕ ಆಸ್ಪತ್ರೆಗೆ ದಾಖಲಾಗಿ ಕೊಂ ಚೇತರಿಸಿಕೊಂಡಿದ್ದರು. 

ಇದೇ ಸಂದರ್ಭದಲ್ಲಿ ತೀವ್ರ ಮೆದುಳಿನ ರಕ್ತಸ್ರಾವದಿಂದ ಬಳಲುತ್ತಿದ್ದ ಅವರನ್ನು ದೆಹಲಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು.

ವಿನೋದ್ ಕುಮಾರ್ ಸಿಂಗ್ ಸಾವಿಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಂತಾಪ ಸೂಚಿಸಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ಮಾಡುವುದಾಗಿ ಘೋಷಿಸಿದರು.