Asianet Suvarna News Asianet Suvarna News

ಕಾಂಗ್ರೆಸ್‌ ವಿಜಯೋತ್ಸವ ವೇಳೆ ಗಲಾಟೆ: ಬಿಜೆಪಿ ಕಾರ‍್ಯಕರ್ತನ ಕೊಲೆ!

ಹೊಸಕೋಟೆ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತನೊಬ್ಬನ ಹತ್ಯೆಯಾಗಿದೆ. ಕಾಂಗ್ರೆಸ್‌ ಅಭ್ಯರ್ಥಿ ಶರತ್‌ ಬಚ್ಚೇಗೌಡ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಡಿ.ಶೆಟ್ಟಿಹಳ್ಳಿಯ ಬಿಜೆಪಿ ಕಾರ್ಯಕರ್ತನೊಬ್ಬನ ಮನೆ ಮುಂದೆ ಪಟಾಕಿ ಸಿಡಿಸಿ ಗಲಾಟೆ ಎಬ್ಬಿಸಿದ ಕಾಂಗ್ರೆಸ್‌ ಕಾರ್ಯಕರ್ತರು, ನಂತರ ಆತನ ಮೇಲೆ ಹಲ್ಲೆ ನಡೆಸಿ ಹತ್ಯೆಗೈದಿದ್ದಾರೆ.

BJP activist killed by congress workers during Congress victory at hoskote rav
Author
First Published May 15, 2023, 1:46 AM IST

ಹೊಸಕೋಟೆ (ಮೇ.15) : ಹೊಸಕೋಟೆ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತನೊಬ್ಬನ ಹತ್ಯೆಯಾಗಿದೆ. ಕಾಂಗ್ರೆಸ್‌ ಅಭ್ಯರ್ಥಿ ಶರತ್‌ ಬಚ್ಚೇಗೌಡ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಡಿ.ಶೆಟ್ಟಿಹಳ್ಳಿಯ ಬಿಜೆಪಿ ಕಾರ್ಯಕರ್ತನೊಬ್ಬನ ಮನೆ ಮುಂದೆ ಪಟಾಕಿ ಸಿಡಿಸಿ ಗಲಾಟೆ ಎಬ್ಬಿಸಿದ ಕಾಂಗ್ರೆಸ್‌ ಕಾರ್ಯಕರ್ತರು, ನಂತರ ಆತನ ಮೇಲೆ ಹಲ್ಲೆ ನಡೆಸಿ ಹತ್ಯೆಗೈದಿದ್ದಾರೆ.

ಕೃಷ್ಣಪ್ಪ (55) ಮೃತ ಬಿಜೆಪಿ ಕಾರ್ಯಕರ್ತ(Krishnappa bjp activist). ಕಾಂಗ್ರೆಸ್‌ ಅಭ್ಯರ್ಥಿ ಶರತ್‌ ಬಚ್ಚೇಗೌಡ(Congress candidate sharat bachchegowda) ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಶನಿವಾರ ಸಂಜೆ ಪಟಾಕಿ ಹಚ್ಚಿ ಕೃಷ್ಣಪ್ಪ ಮನೆ ಮುಂದೆ ಎಸೆದು ಗಲಾಟೆ ತೆಗೆದಿದ್ದರು. ಈ ವೇಳೆ ಮಾತಿಗೆ ಮಾತು ಬೆಳೆದು ಕೃಷ್ಣಪ್ಪ ಮತ್ತು ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿದ್ದರು. ಈ ವೇಳೆ ಕೃಷ್ಣಪ್ಪನಿಗೆ ಕೊಡಲಿಯಿಂದ ಎದೆ ಹಾಗೂ ಭುಜಕ್ಕೆ ಬಲವಾಗಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟರೆ, ಪುತ್ರ ಬಾಬು ಹಾಗೂ ಪತ್ನಿಗೆ ಎದೆ ಹಾಗೂ ಭುಜಕ್ಕೆ ಬಲವಾಗಿ ಪೆಟ್ಟು ಬಿದ್ದು ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ.

 

ಲೋಕಸಭಾ ಚುನಾವಣೆ ಮೇಲೆ ಕಾಂಗ್ರೆಸ್ ಕಣ್ಣು: 3-4 ಡಿಸಿಎಂ ಹುದ್ದೆ ಸೃಷ್ಟಿಆಗುತ್ತಾ?

ಘಟನೆ ಸಂಬಂಧಿಸಿ ಆದಿ, ಗಣೇಶ್‌, ಹರೀಶ್‌, ಚನ್ನಕೇಶವ ಎಂಬವರ ಮೇಲೆ ದೂರು ದಾಖಲಿಸಲಾಗಿದ್ದು, ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ತಾಲೂಕು ಬಿಜೆಪಿ ಅಧ್ಯಕ್ಷ ಕೆ.ಸತೀಶ್‌ ಹಾಗೂ ಜಿ.ಪಂ. ಮಾಜಿ ಸದಸ್ಯ ಸಿ.ನಾಗರಾಜ್‌ ನೇತೃತ್ವದಲ್ಲಿ ಸಾವಿರಾರು ಬಿಜೆಪಿ ಕಾರ್ಯಕರ್ತರು ನಂದಗುಡಿ ಗ್ರಾಮದ ಪೊಲೀಸ್‌ ಠಾಣೆ ಮುಂದೆ ಶವ ಇಟ್ಟು ಪ್ರತಿಭಟನೆ ನಡೆಸಿದರು. ಪೊಲೀಸರು ಆರೋಪಿಗಳನ್ನು ಶೀಘ್ರ ಬಂಧಿಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಕೈಬಿಡಲಾಯಿತು.

ಕಾರ‍್ಯಕರ್ತರನ್ನು ಮುಟ್ಟಿದರೆ ಸುಮ್ನಿರಲ್ಲ ಎಂಟಿಬಿ ವಾರ್ನಿಂಗ್

ತಾಲೂಕಿನಲ್ಲಿ ಶರತ್‌ ಬಚ್ಚೇಗೌಡ ಗೆಲುವು ಸಾಧಿ​ಸಿದ ಕೆಲವೇ ಗಂಟೆಗಳಲ್ಲಿ ಬಿಜೆಪಿ ಕಾರ್ಯಕರ್ತನ ಕೊಲೆ ಹಾಗೂ ಹಲವಾರು ಗ್ರಾಮಗಳಲ್ಲಿ ಹಲ್ಲೆ ಮಾಡಿರುವ ಘಟನೆಗಳು ನಡೆದಿದ್ದು, ಬಿಜೆಪಿ ಕಾರ್ಯಕರ್ತರನ್ನ ಮುಟ್ಟಿದ್ರೆ ಸುಮ್ನಿರಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಎಂಟಿಬಿ ನಾಗರಾಜ್‌ ಎಚ್ಚರಿಕೆ ನೀಡಿದ್ದಾರೆ.

ಚುನಾವಣೆ ಮತ ಎಣಿಕೆ ನಡೆದ ಕೆಲವೇ ಗಂಟೆಗಳಲ್ಲಿ ತಾಲೂಕಿನಲ್ಲಿ ಈ ರೀತಿಯ ಶಾಂತಿ ಕದಡುವ ಕೆಲಸ ಮಾಡುವುದು ಸರಿಯಲ್ಲ. ನಮ್ಮ ಬಿಜೆಪಿ ಕಾರ್ಯಕರ್ತರೆ ನಮ್ಮ ಪಕ್ಷಕ್ಕೆ ಆಧಾರ ಸ್ತಂಭ. ಅಂತಹ ಕಾರ್ಯಕರ್ತರನ್ನು ಮುಟ್ಟಿದರೆ ನಾನು ಸುಮ್ಮನಿರಲ್ಲ. ಈಗಾಗಲೆ ಡಿ.ಶೆಟ್ಟಿಹಳ್ಳಿಯಲ್ಲಿ ಪಟಾಕಿ ಸಿಡಿಸುವ ವಿಚಾರಕ್ಕೆ ಗಲಾಟೆ ನಡೆದಿದ್ದು, ಬಿಜೆಪಿ ಕಾರ್ಯಕರ್ತ ಕೃಷ್ಣಪ್ಪನನ್ನು ಐವರು ಕೊಡಲಿಯಿಂದ ಹೊಡೆದು ಕೊಲೆ ಮಾಡಿದ್ದಾರೆ. ಅವರ ಮಗ ಬಾಬುಗೂ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ಶಿವನಾಪುರ, ಕೋಡಿಹಳ್ಳಿ, ಕಾಮರಸನಹಳ್ಳಿ, ಕುರುಬರಹಳ್ಳಿ ಗ್ರಾಮಗಳಲ್ಲಿ ಬಿಜೆಪಿ ಕಾರ್ಯಕರ್ತರ ಮನೆ ಮುಂದೆ ಪಟಾಕಿ ಸಿಡಿಸಿ ಗಲಾಟೆ ಮಾಡಿ ಹಲ್ಲೆ ಮಾಡಿರುವ ಪ್ರಕರಣ ವರದಿಯಾಗಿದೆ.

ನಂದಗುಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್‌ ಇಲಾಖೆಯ ಹಿರಿಯ ಅಧಿ​ಕಾರಿಗಳ ಗಮನಕ್ಕೆ ತಂದಿದ್ದು, ತ್ವರಿತವಾಗಿ ಆರೋಪಿಗಳನ್ನು ಬಂ​ಧಿಸುವಂತೆ ಒತ್ತಾಯಿಸಿದ್ದೇನೆ. ಆರೋಪಿಗಳನ್ನು ಬಂಧಿಸದಿದ್ದರೆ ಹಾಗೂ ನಮ್ಮ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದರೆ ಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಹೇಳಿದರು.

ಬಿಜೆಪಿ ಕಾರ್ಯಕರ್ತನ ಶವವಿಟ್ಟು ಪ್ರತಿಭಟನೆ

ಹೊಸಕೋಟೆ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದ ಕಾಂಗ್ರೆಸ್‌ ಅಭ್ಯರ್ಥಿ ಗೆಲುವಿನ ಕೆಲವೇ ಗಂಟೆಗಳಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತನ ಮನೆ ಮುಂದೆ ಪಟಾಕಿ ಸಿಡಿಸಿ ಜಗಳಕ್ಕೆಳೆದು ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ನಂದಗುಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ನಡೆದಿದೆ.

ಡಿ.ಶೆಟ್ಟಿಹಳ್ಳಿ ಗ್ರಾಮದ ಬಿಜೆಪಿ ಕಾರ್ಯಕರ್ತ ಕೃಷ್ಣಪ್ಪ ಕೊಲೆಯಾದವರು. ಕೃಷ್ಣಪ್ಪನವರ ಮಗನ ಮೇಲೂ ಹಲ್ಲೆಯಾಗಿದ್ದು ಈತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶರತ್‌ ಬಚ್ಚೇಗೌಡ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಡಿ.ಶೆಟ್ಟಿಹಳ್ಳಿ ಗ್ರಾಮದ ಬಿಜೆಪಿ ಕಾರ್ಯಕರ್ತ ಕೃಷ್ಣಪ್ಪನ ಮನೆ ಮುಂದೆ ಪಟಾಕಿ ಸಿಡಿಸಿ ಗಲಾಟೆ ಮಾಡುತ್ತಿದ್ದ ಕಾಂಗ್ರೆಸ್‌ ಕಾರ್ಯಕರ್ತರನ್ನು ಪ್ರಶ್ನಿಸಿದ್ದಕ್ಕೆ ಕೃಷ್ಣಪ್ಪ ಹಾಗೂ ಕುಟುಬಂಸ್ಥರ ಮೇಲೆ ಮಾರಕಾಯುಧಗಳಿಂದ ಹಲ್ಲೆ ಮಾಡಿದ್ದಾರೆನ್ನಲಾಗಿದೆ.

ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಶರತ್‌ ಬಚ್ಚೇಗೌಡ ಗೆಲುವು ಸಾಧಿಸಿದ್ದಕ್ಕೆ ಕಾಂಗ್ರೆಸ್‌ ಕಾರ್ಯಕರ್ತರು ಕೃಷ್ಣಪ್ಪ ಮನೆ ಮುಂದೆ ಪಟಾಕಿ ಹಚ್ಚಿ ಮನೆಗೆ ಪಟಾಕಿ ಎಸೆದು ಗಲಾಟೆ ತೆಗೆದು ಮಾತಿಗೆ ಮಾತು ಬೆಳೆದು ಕೃಷ್ಣಪ್ಪನಿಗೆ ಕೊಡಲಿಯಿಂದ ಎದೆ ಹಾಗು ಭುಜಕ್ಕೆ ಬಲವಾಗಿ ಹೊಡೆದು ಪರಿಣಾಮ ಸ್ಥಳದಲ್ಲೆ ಮೃತಪಟ್ಟಿದ್ದಾನೆ. ಮಗ ಬಾಬು ಹಾಗೂ ಹೆಂಡತಿಗೆ ಎದೆ ಹಾಗು ಭುಜಕ್ಕೆ ಬಲವಾಗಿ ಪೆಟ್ಟು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಘಟನೆಗೆ ಸಂಬಂ​ಧಿಸಿದಂತೆ ಆದಿ, ಗಣೇಶ್‌, ಹರೀಶ್‌, ಚನ್ನಕೇಶವ ಮೇಲೆ ದೂರು ಸಲ್ಲಿಸಿದ್ದು ಆರೋಪಿಗಳನ್ನು ಬಂ​ಧಿಸುವಂತೆ ತಾಲೂಕು ಬಿಜೆಪಿ ಅಧ್ಯಕ್ಷ ಕೆ.ಸತೀಶ್‌ ಹಾಗೂ ಜಿಪಂ ಮಾಜಿ ಸದಸ್ಯ ಸಿ.ನಾಗರಾಜ್‌ ನೇತೃತ್ವದಲ್ಲಿ ಸಾವಿರಾರು ಬಿಜೆಪಿ ಕಾರ್ಯಕರ್ತರು ಕೊಲೆ ಮಾಡಿ ಪರಾರಿಯಾಗಿರುವ ಮೂವರನ್ನು ಬಂಧಿಸುವಂತೆ ಬಿಜೆಪಿ ಕಾರ್ಯಕರ್ತರ ಪಟ್ಟು ಹಿಡಿದು ನಂದಗುಡಿ ಪೊಲೀಸ್‌ ಠಾಣೆ ಮುಂಭಾಗ ಶವ ಇಟ್ಟು ಪ್ರತಿಭಟನೆ ನಡೆಸಿದರು.

ಚುನಾವಣೆ ಮುಗೀತಿದ್ದಂತೆ ಶುರುವಾಯ್ತಾ ದ್ವೇಷ ರಾಜಕಾರಣ? ಶಾಸಕ ನಾಗೇಂದ್ರಗೆ ಬಿಜೆಪಿ ಬೆಂಬಲಿಗರು ಜೀವ ಬೆದರಿಕೆ!

ಸಿಪಿಐ ದಿವಾಕರ್‌ ಮಾತನಾಡಿ, ಕೊಲೆಗೆ ಸಂಬಂಧಿ​ಸಿದಂತೆ ಆರೋಪಿ ಆದಿಯನ್ನು ಬಂ​ಧಿಸಿದ್ದು ಉಳಿದ ಆರೋಪಿಗಳನ್ನು ಬಂ​ಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿ ಸಮಾಧಾನ ಪಡಿಸಿದ ಬಳಿಕ ಪ್ರತಿಭಟನೆ ಹಿಂದಕ್ಕೆ ಪಡೆದರು.

Follow Us:
Download App:
  • android
  • ios