ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೇನು ಏಳೆಂಟು ತಿಂಗಳು ಬಾಕಿಇದೆ. ಇದರ ಮಧ್ಯೆ ನವದೆಹಲಿಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.
ನವದೆಹಲಿ, (ಜೂನ್.30): ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೇನು ಏಳೆಂಟು ತಿಂಗಳು ಬಾಕಿ ಇದ್ದು, ಆಗಲೇ ಕಾಂಗ್ರೆಸ್‌ನಲ್ಲಿ ಚುನಾವಣೆ ಪೂರ್ವ ತಯಾರಿ ಭರ್ಜರಿ ನಡೆದಿದೆ. ಅಲ್ಲದೇ ಬಿಜೆಪಿ ನಾಯಕರಿಗೂ ಗಾಳ ಹಾಕಿದೆ.
ಹೌದು... ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಹಲವು ನಾಯಕರು ಸಂಪರ್ಕದಲ್ಲಿದ್ದಾರೆ ಎಂದು ಸ್ವತಃ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಬಾಂಬ್ ಸಿಡಿಸಿದ್ದಾರೆ.
ಇನ್ನು ಈ ಬಗ್ಗೆ ನವದೆಹಲಿಯಲಿ ಇಂದು(ಗುರುವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್‌ನ ಹಲವರು ನನ್ನ ಸಂಪರ್ಕದಲ್ಲಿ ಇದ್ದಾರೆ. ಇನ್ನೂ ಚುನಾವಣೆಗೆ 9 ತಿಂಗಳು ಇದೆ, ಈಗಲೇ ಯಾರು ಎಂದು ಹೇಳೋಕೆ ಆಗಲ್ಲ. ಯಾರೆಲ್ಲಾ ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿಕೊಂಡು, ಪಕ್ಷದ ನಾಯಕತ್ವ ಒಪ್ಪಿಕೊಂಡು ಬರ್ತಾರೆ, ಪಕ್ಷಕ್ಕೆ ನಿಷ್ಠಾವಂತರಾಗಿ ಇರ್ತೇವೆ ಎಂದು ಹೇಳುತ್ತಾರೆ ಅಂಥವರಿಗೆ ಟಿಕೇಟ್ ನೀಡುತ್ತೇವೆ ಎಂದರು.
ಸಿದ್ದರಾಮೋತ್ಸವ ಅಲ್ಲ, ಬಿದ್ದಿರುವ ಸಿದ್ದರಾಮಯ್ಯರನ್ನು ಮೇಲಕ್ಕೆತ್ತುವ ಉತ್ಸವ: ಬಿಜೆಪಿ ವ್ಯಂಗ್ಯ
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 130ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಸರಳ ಬಹುಮತ ಪಡೆಯುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಪಕ್ಷಾಂತರ ನಡೆಯುವುದು ಸಹಜ ಪ್ರಕ್ರಿಯೆ. ಅಲ್ಲಿ ಟಿಕೆಟ್ ಸಿಗದಿದ್ದರೆ ಇಲ್ಲಿಗೆ, ಇಲ್ಲಿ ಟಿಕೆಟ್ ಸಿಗದಿದ್ದರೆ ಅಲ್ಲಿಗೆ ಹಾರುತ್ತಾರೆ. ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿ ಬರುವವರನ್ನು ಸ್ವಾಗತಿಸುತ್ತೇವೆ. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಹಲವು ನಾಯಕರು ಸಂಪರ್ಕದಲ್ಲಿದ್ದಾರೆ. ಹಾಗೆಂದು ಪಕ್ಷಕ್ಕೆ ಬಂದ ಎಲ್ಲರಿಗೂ ಟಿಕೆಟ್ ಕೊಡುತ್ತೇವೆಂದು ಭರವಸೆ ಕೊಡಲು ಆಗುವುದಿಲ್ಲ. ಯಾರೆಲ್ಲ ಸಂಪರ್ಕದಲ್ಲಿದ್ದಾರೆ ಎಂದು ಹೇಳಲೂ ಆಗುವುದಿಲ್ಲ. ಟಿಕೆಟ್ ನೀಡುವುದು ಕಾಂಗ್ರೆಸ್ ಹೈಕಮಾಂಡ್ಗೆ ಬಿಟ್ಟ ವಿಚಾರ ಎಂದು ಹೇಳಿದರು.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 130ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಪಕ್ಷ ಸರಳ ಬಹುಮತ ಪಡೆಯುವುದು ನಿಶ್ಚಿತ. ನಾವು 150 ಸ್ಥಾನಗಳನ್ನು ಗೆಲ್ಲಬೇಕು ಎಂದು ಗುರಿ ಇಟ್ಟುಕೊಂಡಿದ್ದೇವೆ, ನಾವು 130ಕ್ಕೂ ಅಧಿಕ ಸ್ಥಾನ ಗೆಲ್ಲುವ ನಿರೀಕ್ಷೆಯಿದೆ. ಕಾಂಗ್ರೆಸ್ ಸಮೀಕ್ಷೆ ಬಗ್ಗೆ ಮುಖ್ಯಮಂತ್ರಿಗಳು ತಮ್ಮ ಅಭಿಪ್ರಾಯ ಹೇಳಿದ್ದಾರೆ, ಅವರ ಅಭಿಪ್ರಾಯ ಬೇರೆ ಇರುತ್ತೆ, ಜನರ ಅಭಿಪ್ರಾಯ ಬೇರೆ ಇರುತ್ತೆ. ಮಾದರಿ ಸಮೀಕ್ಷೆ ಎಂದರೆ ಜನರ ಅಭಿಪ್ರಾಯ ಸಂಗ್ರಹಿಸಲಾಗಿರುತ್ತೆ. ಅಂದರೆ ಮುಖ್ಯಮಂತ್ರಿಗಳು ಜನರ ಅಭಿಪ್ರಾಯ ಒಪ್ಪಿಕೊಳ್ಳಲ್ಲ ಎಂದಾಯಿತು. ಅದೇನೇ ಇದ್ದರೂ ನಾವು ಸ್ಪಷ್ಟಬಹುಮತದ ಮೂಲಕ ಗೆಲ್ಲುವುದನ್ನು ಯಾರಿಂದಲೂ ಅಲ್ಲಗೆಳೆಯಲು ಆಗಲ್ಲ ಎಂದು ತಿಳಿಸಿದರು.
ನನಗೆ ಆಗಸ್ 12ಕ್ಕೆ 75 ವರ್ಷವಾಗಲಿದೆ. ಹೀಗಾಗಿ ಸ್ನೇಹಿತರು ಹಿತೈಷಿಗಳು ಸಿದ್ದರಾಮೋತ್ಸವ ಮಾಡುತ್ತಿದ್ದಾರೆ. ಸಿದ್ಧರಾಮೋತ್ಸವಕ್ಕೆ ರಾಹುಲ್ ಗಾಂಧಿ ಬರಲು ಸಮ್ಮತಿಸಿದ್ದಾರೆ ಇದೊಂದು ವಿಶೇಷ ಸನ್ನಿವೇಶ ಎಂದು ಸಮ್ಮತಿ ನೀಡಿದ್ದಾರೆ. ನಾನು ಮೊದಲಿನಿಂದಲೂ ಅಹಿಂದಾ ಪರ. ದಮನಿತರ ಪರ. ಇಲ್ಲದವರು ಆರ್ಥಿಕ ಸಾಮಾಜಿಕವಾಗಿ ಹಿಂದುಳಿದವರ ಪರ. ಬಿಜೆಪಿಯವರು ನನಗೆ ಸರ್ಟಿಫಿಕೇಟ್ ಕೊಡುವುದು ಬೇಡ ಎಂದು ಟಾಂಗ್ ನೀಡಿದರು.
ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಪಕ್ಷಾಂತರ ನಡೆಯುವುದು ಸಹಜ ಪ್ರಕ್ರಿಯೆ. ಅಲ್ಲಿ ಟಿಕೆಟ್ ಸಿಗದಿದ್ದರೆ ಇಲ್ಲಿಗೆ, ಇಲ್ಲಿ ಟಿಕೆಟ್ ಸಿಗದಿದ್ದರೆ ಅಲ್ಲಿಗೆ ಹಾರುತ್ತಾರೆ. ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿ ಬರುವವರನ್ನು ಸ್ವಾಗತಿಸುತ್ತೇವೆ. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಹಲವು ನಾಯಕರು ಸಂಪರ್ಕದಲ್ಲಿದ್ದಾರೆ. ಹಾಗೆಂದು ಪಕ್ಷಕ್ಕೆ ಬಂದ ಎಲ್ಲರಿಗೂ ಟಿಕೆಟ್ ಕೊಡುತ್ತೇವೆಂದು ಭರವಸೆ ಕೊಡಲು ಆಗುವುದಿಲ್ಲ. ಯಾರೆಲ್ಲ ಸಂಪರ್ಕದಲ್ಲಿದ್ದಾರೆ ಎಂದು ಹೇಳಲೂ ಆಗುವುದಿಲ್ಲ. ಟಿಕೆಟ್ ನೀಡುವುದು ಕಾಂಗ್ರೆಸ್ ಹೈಕಮಾಂಡ್ಗೆ ಬಿಟ್ಟ ವಿಚಾರ ಎಂದು ಸಿದ್ಧರಾಮಯ್ಯ ತಿಳಿಸಿದರು.
ಕಾಂಗ್ರೆಸ್ ಪಕ್ಷಕ್ಕೆ ಇರುವಷ್ಟು ಅಭ್ಯರ್ಥಿಗಳು ಬೇರೆ ಯಾವ ಪಕ್ಷಗಳಿಗೂ ಇಲ್ಲ, ನಮಗೆ ಒಂದೊಂದು ಕ್ಷೇತ್ರದಲ್ಲಿ 10- 12 ಜನ ಗೆಲ್ಲುವ ಅಭ್ಯರ್ಥಿಗಳು ಇದ್ದಾರೆ. ಕೆಲವೊಮ್ಮೆ ಇದು ಸಮಸ್ಯೆ ಆಗುತ್ತೆ. ಕಾರಣ ಎಲ್ಲರಿಗೂ ಟಿಕೇಟ್ ಕೊಡಲು ಸಾಧ್ಯವಾಗಲ್ಲ. ಹಾಗೆ ನೋಡಿದರೆ ಬಿಜೆಪಿಗೆ ಅಭ್ಯರ್ಥಿಗಳ ಕೊರತೆ ಇದೆ. ಉದಾಹರಣೆಗೆ ಮೈಸೂರು ಭಾಗದಲ್ಲಿ ಹುಣಸೂರಿನಲ್ಲಿ ಬಿಜೆಪಿ ಅಭ್ಯರ್ಥಿ ಯಾರು? ವಿಶ್ವನಾಥ್ ಈಗ ಪರಿಷತ್ ಸದಸ್ಯರಾಗಿದ್ದಾರೆ. ಕೆ.ಆರ್ ನಗರದಲ್ಲಿ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಿಜೆಪಿಗೆ ಅಭ್ಯರ್ಥಿ ಯಾರಿದ್ದಾರೆ? ಇಡೀ ಮಂಡ್ಯ ಜಿಲ್ಲೆಯಲ್ಲಿ ಅವರಿಗೆ ಅಭ್ಯರ್ಥಿಗಳೇ ಇಲ್ಲ. ಬಿಜೆಪಿಯಲ್ಲಿ ಟಿಕೇಟ್ ಸಿಗದವರು ನಮ್ಮಲ್ಲಿಗೆ ಬರುತ್ತಾರೆ, ನಮ್ಮಲ್ಲಿ ಟಿಕೇಟ್ ಸಿಗದವರು ಬಿಜೆಪಿಗೆ ಹೋಗುತ್ತಾರೆ, ಇದೆಲ್ಲ ಚುನಾವಣಾ ಸಮಯದಲ್ಲಿ ಸಾಮಾನ್ಯ ವಿಷಯ. ಯಾರಿಗೆ ಸೈದ್ಧಾಂತಿಕ ಬದ್ಧತೆ ಇರುತ್ತೆ ಅವರು ಪಕ್ಷ ಬಿಟ್ಟು ಹೋಗಲ್ಲ ಎಂದು ತಿಳಿಸಿದರು.
