ಸಿ.ಎಂ.ಇಬ್ರಾಹಿಂ ಸ್ಥಾನಕ್ಕೆ ಬೈ ಎಲೆಕ್ಷನ್, ಹಿಂದೂಳಿದ ವರ್ಗಕ್ಕೆ ಮಣೆ ಹಾಕಿದ ಬಿಜೆಪಿ
ಸಿ.ಎಂ.ಇಬ್ರಾಹಿಂ ಅವರ ರಾಜೀನಾಮೆಯಿಂದ ತೆರವಾಗಿದ್ದ ಕರ್ನಾಟಕ ವಿಧಾನಪರಿಷತ್ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿ ಹೆಸರು ಪ್ರಕಟವಾಗಿದ್ದು, ಹಿಂದೂಳಿದ ವರ್ಗಕ್ಕೆ ಮಣೆ ಹಾಕಿದೆ.
ಬೆಂಗಳೂರು, (ಜುಲೈ,30): ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ ಮಾಜಿ ಪರಿಷತ್ ಸದಸ್ಯ ಸಿ.ಎಂ ಇಬ್ರಾಹಿಂ ರಾಜೀನಾಮೆಯಿಂದ ತೆರವಾಗಿದ್ದ ವಿಧಾನಪರಿಷತ್ ಸ್ಥಾನಕ್ಕೆ ಉಪ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.
ಬಿಜೆಪಿ ಹಿರಿಯ ನಾಯಕ ಬಾಬೂರಾವ್ ಚಿಂಚನಸೂರ್ ಗೆ ಟಿಕೆಟ್ ಘೋಷಣೆ ಮಾಡಿದೆ. ವಿಧಾನಪರಿಷತ್ ನ ಒಂದು ಸ್ಥಾನಕ್ಕೆ ಉಪ ಚುನಾವಣೆ ಘೋಷಣೆ ಮಾಡಲಾಗಿತ್ತು. ಇದೀಗ ಈ ಸ್ಥಾನಕ್ಕೆ ಬಿಜೆಪಿಯಿಂದ ಕೋಲಿ ಸಮುದಾಯದ ಬಾಬೂರಾವ್ ಚಿಂಚನಸೂರ್ ಗೆ ಟಿಕೆಟ್ ನೀಡಿದೆ.
ಇಬ್ರಾಹಿಂ ರಾಜೀನಾಮೆಯಿಂದ ತೆರವಾದ ಪರಿಷತ್ ಉಪ ಚುನಾವಣೆಗೆ ದಿನಾಂಕ ನಿಗದಿ
ಮುಂಬರುವ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಹಿಂದೂಳಿದ ವರ್ಗಕ್ಕೆ ಅವಕಾಶ ನೀಡಲಾಗಿದೆ. ಅಲ್ಲದೇ ಕಲ್ಯಾಣ ಕರ್ನಾಟಕ ಭಾಗಕ್ಕೆ ಪ್ರಾತಿನಿಧ್ಯ ನೀಡಿದೆ. ಕಲಬುರಗಿ ಭಾಗದಲ್ಲಿ ಕೋಲಿ ಸಮುದಾಯ ಹೆಚ್ಚಿದ್ದ. ಇದರಿಂದ ಕೋಲಿ ಸಮುದಾಯ ಹಿರಿಯ ನಾಯಕ ಬಾಬುರಾವ್ ಚಿಂಚನಸೂರು ಅವರಿಗೆ ಮಣೆ ಹಾಕಲಾಗಿದೆ.
01-08-2022 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ನಾಮಪತ್ರಗಳ ಪರಿಶೀಲನೆ 02-08-2022ರಂದು ನಡೆಯಲಿದೆ. ನಾಮಪತ್ರಗಳನ್ನು ಹಿಂಪಡೆಯಲು 04-08-2022 ಕೊನೆಯ ದಿನವಾಗಿದೆ. 11-08-2022ರಂದು ಮತದಾನ ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ. ಇನ್ನು ಅಂದೇ ಸಂಜೆ 5 ಗಂಟೆಗೆ ಮತಏಣಿಕೆ ನಡೆಯಲಿದೆ.
ಕಾಂಗ್ರೆಸ್‌ನಿಂದ ವಿಧಾನಪರಿಷತ್‌ಗೆ ಆಯ್ಕೆಯಾಗಿದ್ದ ಸಿ.ಎಂ.ಇಬ್ರಾಹಿಂ ಅವರು ಇತ್ತೀಚೆಗೆ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ ಜೆಡಿಎಸ್ ಸೇರ್ಪಡೆಯಾಗಿದ್ದರು. ಈ ಹಿನ್ನೆಲೆಯಲ್ಲಿ ತೆರವಾದ ಸ್ಥಾನ ಇದೀಗ ಉಪಚುನಾವಣೆಯನ್ನು ನಡೆಸಲು ಅಧಿಸೂಚನೆ ಹೊರಡಿಸಲಾಗಿದೆ.
2024 ರ ಜೂನ್ ತಿಂಗಳವರೆಗೆ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಸಿ.ಎಂ.ಇಬ್ರಾಹಿಂ ಅವರ ಸದಸ್ಯತ್ವ ಅವಧಿ ಇತ್ತು. ಆದ್ರೆ, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಸ್ಥಾನ ಸಿಗದೆ ಅಸಮಾಧಾನಗೊಂಡು ಇಬ್ರಾಹಿಂ ಕಾಂಗ್ರೆಸ್ ಹಾಗೂ ಪರಿಷತ್ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ.