ತುಮಕೂರಿನ ಶಿರಾ ಹಾಗೂ ಬೆಂಗಳೂರಿನ ಆರ್.ಆರ್.ನಗರ ವಿಧಾನಸಭಾ ಕ್ಷೇತ್ರ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

ಬೆಂಗಳೂರು, (ಅ.13): ಕರ್ನಾಟಕದಲ್ಲಿ ಎದುರಾಗಿರುವ ಆರ್.ಆರ್.ನಗರ ಮತ್ತು ಶಿರಾ ಬೈ ಎಲೆಕ್ಷನ್‌ಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಪ್ರಕಟಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಿಜೆಪಿ ಹೈಕಮಾಂಡ್ ಇಂದು (ಮಂಗಳವಾರ) ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಅಧಿಕೃತವಾಗಿ ಘೋಷಣೆ ಮಾಡಿದೆ. ನಿರೀಕ್ಷೆಯಂತೆ ವಲಸೆ ಬಂದ ನಾಯಕರುಗಳಿಗೆ ಬಿಜೆಪಿ ಮಣೆ ಹಾಕಿದೆ.

ಒಂದೇ ದಿನ ಮುನಿರತ್ನಗೆ ಡಬಲ್ ಧಮಾಕಾ..!

ನಿರೀಕ್ಷೆಯಂತೆ ಬೆಂಗಳೂರಿನ ಆರ್.ಆರ್. ನಗರ ಉಪಚುನಾವಣೆ ಟಿಕೆಟ್‌ ಅನ್ನು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿರುವ ಮುನಿರತ್ನ ಅವರಿಗೆ ಕೊಡಲಾಗಿದೆ. ಇನ್ನು ಶಿರಾ ಕ್ಷೇತ್ರದ ಟಿಕೆಟ್ ಡಾ. ರಾಜೇಶ್ ಗೌಡ ಅವರಿಗೆ ನೀಡಲಾಗಿದೆ.

ತುಮಕೂರು ಜಿಲ್ಲೆಯ ಶಿರಾ ಮತ್ತು ಬೆಂಗಳೂರಿನ ಆರ್.ಆರ್.ನಗರ ಕ್ಷೇತ್ರಗಳಿಗೆ ನ.03ರಂದು ಮತದಾನ ನಡೆಯಲಿದ್ದು, ನ.10ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಸಲು ಅ.16 ಕೊನೆಯ ದಿನವಾಗಿದೆ.
"