ಲೋಕಸಭಾ ಚುನಾವಣೆ ಮತ ಪಟ್ಟಿ ಪರಿಷ್ಕರಣೆಗೆ ಬಿಜೆಪಿ ಅಭಿಯಾನ: ಕೇಂದ್ರ ಸಚಿವೆ ಶೋಭಾ

ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಬಿಜೆಪಿಯು ಮತದಾರರ ಪಟ್ಟಿನೋಂದಣಿ ಮತ್ತು ಪರಿಷ್ಕರಣೆಗೆ ಸಂಬಂಧಿಸಿದಂತೆ ‘ಮತದಾರರ ಚೇತನ ಮಹಾಭಿಯಾನ’ ಹಮ್ಮಿಕೊಳ್ಳಲು ನಿರ್ಧರಿಸಿದೆ.

BJP campaign to revise Lok Sabha election vote list Says Shobha Karandlaje gvd

ಬೆಂಗಳೂರು (ಆ.26): ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಬಿಜೆಪಿಯು ಮತದಾರರ ಪಟ್ಟಿನೋಂದಣಿ ಮತ್ತು ಪರಿಷ್ಕರಣೆಗೆ ಸಂಬಂಧಿಸಿದಂತೆ ‘ಮತದಾರರ ಚೇತನ ಮಹಾಭಿಯಾನ’ ಹಮ್ಮಿಕೊಳ್ಳಲು ನಿರ್ಧರಿಸಿದೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಕೃಷಿ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಪ್ರತಿ ಲೋಕಸಭಾ ಚುನಾವಣೆಗೂ ಮತದಾರರ ಪಟ್ಟಿಯನ್ನು ಪರಿಷ್ಕರಿಸಲಾಗುತ್ತದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ನಿರ್ದೇಶನದಂತೆ ಹೊಸ ಮತದಾರರ ನೋಂದಣಿ ಮತ್ತು ಮತದಾರರ ಪಟ್ಟಿಯ ಪರಿಷ್ಕರಣೆಯ ಕಾರ್ಯವನ್ನು ಆದ್ಯತೆಯ ಮೇರೆಗೆ ಮಾಡಬೇಕಾಗಿದೆ. 

ರಾಜ್ಯದ 58 ಸಾವಿರಕ್ಕೂ ಹೆಚ್ಚು ಬೂತ್‌ಗಳಲ್ಲಿ ಈ ಕಾರ್ಯ ನಡೆಯಲಿದೆ ಎಂದು ವಿವರಿಸಿದರು. ಪರಿಣಾಮಕಾರಿ ಅನುಷ್ಠಾನಕ್ಕಾಗಿ ರಾಜ್ಯ ತಂಡ ರಚಿಸಲಾಗಿದೆ. ಸಂಸದ ತೇಜಸ್ವಿ ಸೂರ್ಯ, ಶಾಸಕ ಅರವಿಂದ್‌ ಬೆಲ್ಲದ, ಮಾಜಿ ಶಾಸಕ ಪಿ.ರಾಜೀವ್‌, ಮುಖಂಡರಾದ ವಿವೇಕ್‌ ರೆಡ್ಡಿ, ಲೋಕೇಶ್‌ ಬಿಜ್ಜಾವರ ಅವರು ತಂಡದಲ್ಲಿದ್ದಾರೆ. ಪ್ರತಿ ಜಿಲ್ಲೆಯಲ್ಲಿ ಇದಕ್ಕಾಗಿ ಮೂರು ಸದಸ್ಯರ ಜಿಲ್ಲಾ ಸಮಿತಿ ಮತ್ತು ವಿಧಾನಸಭೆ ಕ್ಷೇತ್ರಕ್ಕೆ ಮೂರು ಜನರ ಸಮಿತಿ ಮತ್ತು ಶಕ್ತಿ ಕೇಂದ್ರ ಮಟ್ಟದಲ್ಲಿ ಸಮಿತಿಗಳನ್ನು ರಚಿಸಲಾಗುತ್ತಿದೆ ಎಂದು ತಿಳಿಸಿದರು.

ಅಕ್ರಮ ಕಟ್ಟಡ, ಸೈಟಿಗೆ ದುಪ್ಪಟ್ಟು ಆಸ್ತಿ ತೆರಿಗೆ?: ಸಚಿವ ಈಶ್ವರ ಖಂಡ್ರೆ

ಜಿಲ್ಲೆಯ ಸಂಸದರು, ಶಾಸಕರು ಮತ್ತು ಪದಾಧಿಕಾರಿಗಳು ಚುನಾವಣಾ ಆಯೋಗದಿಂದ ನೇಮಿಸಲ್ಪಟ್ಟಬಿಎಲ್‌ಓಗಳೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು ಮತ್ತು ಅಗತ್ಯಕ್ಕೆ ಅನುಗುಣವಾಗಿ ತಮ್ಮ ದೂರುಗಳನ್ನು ನೋಂದಾಯಿಸಬೇಕು. ಶಕ್ತಿ ಕೇಂದ್ರ ಮಟ್ಟದಲ್ಲಿ ತಾಂತ್ರಿಕ ಹಿನ್ನೆಲೆ ಹೊಂದಿರುವ ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ನೇಮಿಸಲಾಗುತ್ತದೆ. ಹೊಸ ಮತದಾರರ ನೋಂದಣಿ, ಸೇರ್ಪಡೆ, ರದ್ದು, ವಿಳಾಸ ಬದಲಾವಣೆಗೆ ಅರ್ಜಿಗಳನ್ನು ಅಗತ್ಯ ಪ್ರಮಾಣದಲ್ಲಿ ಮುದ್ರಿಸಿ ಬೂತ್‌ ಮಟ್ಟದಲ್ಲಿ ವಿತರಿಸಲಾಗುತ್ತದೆ. ಪಕ್ಷದ ಕಾರ್ಯಕರ್ತರಿಂದ ಮನೆ ಮನೆಗೆ ಪ್ರಚಾರವನ್ನು ಆಯೋಜಿಸಲಿದ್ದೇವೆ. ಇದಕ್ಕಾಗಿ ನಾವು ಏಳು ದಿನಗಳ ಅಲ್ಪಾವಧಿಯ ವಿಸ್ತಾರಕ್‌ ಯೋಜನೆಯನ್ನು ಮಾಡಿಸಲಿದ್ದೇವೆ ಎಂದರು.

ಪ್ರಧಾನಿ ಮೋದಿ ಸ್ವಾಗತಿಸುವ ಗಣ್ಯರಲ್ಲಿ ಸಿಎಂ, ರಾಜ್ಯಪಾಲರೇ ಇಲ್ಲ!

ಇದಕ್ಕಾಗಿ ಸಾರ್ವಜನಿಕ ಸ್ಥಳಗಳಲ್ಲಿ ಅಭಿಯಾನಗಳನ್ನು ಆಯೋಜಿಸಲಿದ್ದು, ಡಿಜಿಟಲ್ ವ್ಯವಸ್ಥೆಗಳನ್ನು ಬಳಸಿಕೊಳ್ಳಲಿದ್ದೇವೆ. ಹೊಸ ವಸತಿ ಪ್ರದೇಶಗಳು, ಬಹುಮಹಡಿ ಕಟ್ಟಡಗಳು, ಹಾಸ್ಟೆಲಗಳಲ್ಲಿ, ಕಾರ್ಮಿಕ ವಸತಿ ಪ್ರದೇಶಗಳಲ್ಲಿ ವಿಶೇಷ ಅಭಿಯಾನಗಳನ್ನು ಕೈಗೊಳ್ಳಲಿದ್ದೇವೆ ಎಂದು ಶೋಭಾ ತಿಳಿಸಿದರು. ಮತದಾರರ ಪಟ್ಟಿಯಲ್ಲಿ ಹೊಸ ಮತದಾರರ ಸೇರ್ಪಡೆ, ನಕಲಿ ಮತದಾರರನ್ನು ತೆಗೆಸುವುದು ಮತ್ತು ವರ್ಗಾವಣೆ ಪ್ರಕ್ರಿಯೆಗೆ ದೊಡ್ಡ ವಿಧಾನಸಭಾ ಕ್ಷೇತ್ರಗಳಲ್ಲಿ ಕನಿಷ್ಠ 20 ಸಾವಿರ, ಅದಕ್ಕಿಂತ ಚಿಕ್ಕ ಕ್ಷೇತ್ರಗಳಲ್ಲಿ 10 ಸಾವಿರ ಮತ್ತು ಸಣ್ಣ ಕ್ಷೇತ್ರಗಳಲ್ಲಿ 5 ಸಾವಿರ ಮತದಾರರ ಗುರಿಯನ್ನು ನಿಗದಿಪಡಿಸಲಾಗಿದೆ. ಸಂಪೂರ್ಣ ಪ್ರಚಾರದ ಅಭಿಯಾನವನ್ನು ಚುನಾವಣಾ ಆಯೋಗವು ನಿಗದಿ ಪಡಿಸಿದ ದಿನಾಂಕಗಳಿಗೆ ಅನ್ವಯವಾಗುವಂತೆ ಯೋಜಿಸಲಾಗುತ್ತದೆ ಎಂದರು.

Latest Videos
Follow Us:
Download App:
  • android
  • ios