ಬೆಂಗಳೂರು, (ಡಿ.05):  ಕೆ.ಸಿ.ರಾಮಮೂರ್ತಿ ಅವರು ಬಿಜೆಪಿ ಅಭ್ಯರ್ಥಿಯಾಗಿ ರಾಜ್ಯಸಭೆಗೆ ಮರು ಆಯ್ಕೆಯಾದರು.

ಕೆ.ಸಿ.ರಾಮಮೂರ್ತಿ ಅವರು ಗುರುವಾರ ವಿಧಾನಸೌಧದಲ್ಲಿ ವಿಧಾನಸಭೆ ಕಾರ್ಯದರ್ಶಿ ಅವರಿಂದ ಆಯ್ಕೆ ಪ್ರಮಾಣ ಪತ್ರ ಸ್ವೀಕರಿಸಿದರು. 

ಕರ್ನಾಟಕದಲ್ಲಿ ಮತ್ತೊಂದು ಬೈ ಎಲೆಕ್ಷನ್: ಇದಕ್ಕೂ ಕಾಂಗ್ರೆಸ್‌ನಿಂದ ಬಂದವರಿಗೇ BJP ಟಿಕೆಟ್

ಈ ಸಂದರ್ಭದಲ್ಲಿ ಮುಖ್ಯ ಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗಳಾದ ಎಸ್.ಆರ್.ವಿಶ್ವನಾಥ್, ರಾಜ್ಯ ಬಿಜೆಪಿ ಸಂಚಾಲಕ ರಾದ ಎ.ಎಚ್.ಆನಂದ್ ಅವರು ಉಪಸ್ಥಿತರಿದ್ದು, ರಾಮಮೂರ್ತಿ ಅವರನ್ನು ಅಭಿನಂದಿಸಿದರು.

ಕರ್ನಾಟಕ ಕಾಂಗ್ರೆಸ್ ರಾಜ್ಯಸಭೆ ಸದಸ್ಯತ್ವಕ್ಕೆ ಕೆ.ಸಿ.ರಾಮಮೂರ್ತಿ ರಾಜೀನಾಮೆ ನೀಡಿ ಬಿಜೆಪಿ ಸೇರಿದರು. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯಸಭೆ ಸ್ಥಾನಕ್ಕೆ ಉಪಚುನಾವಣೆ ಪ್ರಕಟವಾಗಿತ್ತು.

ಕಾಂಗ್ರೆಸ್‌ಗೆ ಬಿಗ್ ಶಾಕ್: ಕರ್ನಾಟಕ ರಾಜ್ಯಸಭೆ ಸದಸ್ಯ ರಾಜೀನಾಮೆ

ಕರ್ನಾಟಕ ರಾಜ್ಯಸಭಾ ಉಪಚುನಾವಣೆಗೂ ಸಹ ಕಾಂಗ್ರೆಸ್ ಗೆ ರಾಜೀನಾಮೆ ನೀಡಿಬಂದ ನಾಯಕನನ್ನೇ ಬಿಜೆಪಿ ತನ್ನ ಅಭ್ಯರ್ಥಿಯನ್ನಾಗಿ ಮಾಡಿತ್ತು. ಅದರಂತೆ ಬಿಜೆಪಿ ಅಭ್ಯರ್ಥಿಯಾಗಿ ಕೆ.ಸಿ.ರಾಮಮೂರ್ತಿ  ನಾಮಪತ್ರ ಸಲ್ಲಿಸಿದ್ದರು. 

ವಿಧಾನಸಭೆಯಲ್ಲಿ ಶಾಸಕರ ಸಂಖ್ಯಾಬಲ ಕಡಿಮೆ ಇರುವುದರಿಂದ ಕಾಂಗ್ರೆಸ್‌ ಮತ್ತು ಜೆಡಿಎಸ್‌ನಿಂದ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ರಾಮಮೂರ್ತಿ ರಾಜ್ಯಸಭೆಗೆ ಮರು ಆಯ್ಕೆಯಾದರು.

ಅಧಿಸೂಚನೆ ಹೊರಡಿಸಿರುವಂತೆ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನಾಂಕ ಡಿಸೆಂಬರ್ 5 ಆಗಿದ್ದು, ಡಿಸೆಂಬರ್ 12 ರಂದು [ಬೆಳಿಗ್ಗೆ 9 ರಿಂದ ಸಂಜೆ 4 ವರೆಗೆ] ಮತದಾನ ನಡೆಯಬೇಕಿತ್ತು. 

ಆದ್ರೆ, ಕಾಂಗ್ರೆಸ್ ಹಾಗೂ ಜೆಡಿಎಸ್‌ನಿಂದ ಯಾವುದೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸದಿರುವುದರಿಂದ ಕೆ.ಸಿ.ರಾಮಮೂರ್ತಿ ರಾಜ್ಯಸಭೆ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾದರು.

ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದ ತಮಿಳುನಾಡು ಮೂಲದ ಡಾ.ಕೆ.ಪದ್ಮರಾಜನ್ ಹಾಗೂ ವಿಜಯಪುರ ಮೂಲದ ಶ್ರೀ ವೆಂಕಟೇಶ್ವರ ಮಹಾಸ್ವಾಮೀಜಿ ಉರುಫ್ ದೀಪಕ್ ಅವರ ನಾಮಪತ್ರಗಳು ತಿರಸ್ಕತಗೊಂಡಿವೆ. 

ಈ ಇಬ್ಬರೂ ಅಭ್ಯರ್ಥಿಗಳ ನಾಮಪತ್ರಗಳಿಗೆ ಯಾವ ಶಾಸಕರೂ ಸೂಚಕರಾಗಿ ಸಹಿ ಮಾಡಿರದ ಕಾರಣ ತಿರಸ್ಕರಿಸಲಾಗಿದೆ ಎಂದು ಚುನಾವಣಾಧಿಕಾರಿ ಪ್ರಕಟಿಸಿದರು.

ಆದರೆ, ಬಿಜೆಪಿ ಅಭ್ಯರ್ಥಿ ಕೆ.ಸಿ.ರಾಮಮೂರ್ತಿ ಅವರ ನಾಮಪತ್ರ ಕ್ರಮಬದ್ಧವಾಗಿದೆ. ಡಿ.5ರ ವರೆಗೂ ನಾಮಪತ್ರ ವಾಪಸ್ ಪಡೆಯಲು ಕಾಲಾವಕಾಶವಿದ್ದು, ನಾಮಪತ್ರ ವಾಪಸ್ ಪಡೆಯುವ ಅಂತಿಮ ಗಡುವು ಮುಗಿದ ನಂತರ ಕೆ.ಸಿ.ರಾಮಮೂರ್ತಿ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿರುವುದನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ.