Asianet Suvarna News Asianet Suvarna News

ಪರಿಷತ್ ಚುನಾವಣೆ ಫಲಿತಾಂಶ: ಬಿಜೆಪಿಯ ಬಸವರಾಜ ಹೊರಟ್ಟಿಗೆ ದಾಖಲೆ ಗೆಲುವು

* ಕರ್ನಾಟಕ ವಿಧಾನ ಪರಿಷತ್ ಚುನಾವಣೆ ಫಲಿತಾಂಶ
* ಬಿಜೆಪಿಯ ಬಸವರಾಜ ಹೊರಟ್ಟಿಗೆ ದಾಖಲೆ ಗೆಲುವು
* ಸತತ ಎಂಟನೇ ಬಾರಿಗೆ ಗೆಲುವು ಸಾಧಿಸಿದ ಹೊರಟ್ಟಿ

BJP Candidate Basavaraj Horatti wins Karnataka MLC polls for record eighth time rbj
Author
Bengaluru, First Published Jun 15, 2022, 3:32 PM IST

ಬೆಳಗಾವಿ, (ಜೂನ್.15):  ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಕಾರ್ಯ ಅಂತ್ಯವಾಗಿದ್ದು, ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸತತ 8ನೇ ಬಾರಿಗೆ ಜಯಗಳಿಸುವ ಮೂಲಕ ತಮ್ಮ ಗೆಲುವಿನ ನಾಗಲೋಟ ಮುಂದುವರಿಸಿದ್ದಾರೆ.

ಸರದಾರ ಪಟ್ಟ ಮುಂದುವರೆದಿದ್ದಾರೆ. 6449 ಮತಗಳನ್ನು  ಪಡೆದುಕೊಂಡು ವಿಜಯಶಾಲಿಯಾಗಿದ್ದಾರೆ. ಪಶ್ಚಿಮ ಶಿಕ್ಷಕರ ಕ್ಷೇತ್ರ ದಿಂದ ಆಯ್ಕೆಯಾದ ಬಿಜೆಪಿಯ ಬಸವರಾಜ ಹೊರಟ್ಟಿ ಅವರಿಗೆ ಚುನಾವಣಾಧಿಕಾರಿ  ಅಮ್ಲಾನ ಆದಿತ್ಯ ಬಿಸ್ವಾಸ್  ಪ್ರಮಾಣ ಪತ್ರ ವಿತರಿಸಿದರು.

MLC Elections Result: ರಾಜಕೀಯ ಇತಿಹಾಸದಲ್ಲೇ ದಾಖಲೆ ಬರೆದ ಹೊರಟ್ಟಿ

ವಿಧಾನ ಪರಿಷತ್ ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ  ಅವರು ಕಣಕ್ಕೆ ಇಳಿದಿದರು. ಚುನಾವಣೆ ಅಖಾಡಕ್ಕೆ ದುಮ್ಮಿಕ್ಕಿದ ಇವರಿಗೆ ಭ್ರಷ್ಟಾಚಾರ ಆರೋಪ ಮಾಡಿದ ವಿರೋಧ ಪಕ್ಷಗಳಿಗೆ ಗೆಲುವಿನ ಮೂಲಕ ಟಾಂಗ್‌ ಕೊಟ್ಟಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿ 3200 ಮತಗಳನ್ನು ಪಡೆದುಕೊಂಡಿದ್ದಾರೆ. ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ   ಅವರು 6449 ಮತಗಳನ್ನು ಪಡೆಯುವ ಮೂಲಕ ಗೆಲುವಿನ ನಗೆ ಬಿರಿದ್ದಾರೆ.

ಗೆಲುವಿನ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಹೊರಟ್ಟಿ,, 42 ವರ್ಷಗಳಿಂದ ಈ ಕ್ಷೇತ್ರ ಪ್ರತಿನಿಧಿಸುತ್ತಿದ್ದೇನೆ. ಯಾವುದೇ ಕಪ್ಪು ಚುಕ್ಕೆ ಇಲ್ಲದೇ ಅಧಿಕಾರ ನಡೆಸಿದ್ದೇನೆ. ವಿರೋಧಿಗಳು ಮಾಡಿರುವ ಆರೋಪ ಸಾಬೀತಾದರೆ ರಾಜಕೀಯದಿಂದ ದೂರ ಉಳಿಯುತ್ತೇನೆ ಎಂದಿದ್ದರು. ಇವರ ಗೆಲುವು  ವಿರೋದಗಳಿಗೆ ಮುಖಭಂಗ ತರುವಂತಾಗಿದೆ ಎಂದರು.

ಈ ಬಾರಿ ಪರಿಷತ್ ಚುನಾವಣೆಗೆ ಬಸವರಾಜ ಹೊರಟ್ಟಿ ಅವರು ಜೆಡಿಎಸ್‌ ತೊರೆದು ಬಿಜೆಪಿಯಿಂದ ಕಣಕ್ಕಿಳಿದಿದ್ದರು. ಹೊರಟ್ಟಿ ಸೇರ್ಪಡೆಯಿಂದ ಬಿಜೆಪಿಯಲ್ಲಿ ವಿರೋಧಗಳು ವ್ಯಕ್ತವಾಗಿದ್ದರು. ಈ ಹಿನ್ನೆಲೆಯಲ್ಲಿ ಈ ಬಾರಿ ಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆ ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದೆ. ಅಲ್ಲದೇ ಯಾರು ಗೆಲುವು ಸಾಧಿಸಲಿದ್ದಾರೆ ಎನ್ನುವ ಕುತೂಹಲ ಮೂಡಿಸಿತ್ತು. ಅಂತಿಮವಾಗಿ ಹೊರಟ್ಟಿ ಮತ್ತೊಮ್ಮೆ ಪರಿಷತ್‌ಗೆ ಎಂಟ್ರಿಕೊಟ್ಟಿದ್ದಾರೆ.

ವಾಯುವ್ಯ ಶಿಕ್ಷಕರ ಕ್ಷೇತ್ರ
ವಾಯುವ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಮೊದಲ ಸುತ್ತಿನಲ್ಲಿ ಮುನ್ನಡೆ ಕಾಯ್ದುಕೊಂಡಿದ್ದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಎರಡನೇ ಸುತ್ತಿನಲ್ಲಿಯೂ ಮುನ್ನಡೆ ಸಾಧಿಸಿದ್ದಾರೆ.ಈವರೆಗೆ 10 ಸಾವಿರ ಮತಗಳ ಏಣಿಕೆ ಮುಗಿದಿದ್ದು, ಬಿಜೆಪಿ ಅಭ್ಯರ್ಥಿ ಅರುಣ ಶಾಹಪುರಗಿಂತ ಕೈ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಅಂದಾಜು 1700 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

Follow Us:
Download App:
  • android
  • ios