ಬಾಗಲಕೋಟೆ: 2 ಲಕ್ಷ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಗೆಲವು, ಚರಂತಿಮಠ

2047ಕ್ಕೆ ಭಾರತ ವಿಶ್ವಗುರುವಾಗುವ ನಿಟ್ಟಿನಲ್ಲಿ ಭಾರತೀಯ ಜನತಾ ಪಕ್ಷ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಸಮಗ್ರ ಅಬಿವೃದ್ಧಿ ದೃಷ್ಟಿಯಿಂದ ಧಾರ್ಮಿಕ ಸಾಮಾಜಿಕ ಹಾಗೂ ಆರ್ಥಿಕವಾಗಿ ಪ್ರಗತಿಗೆ ಸಾಕಷ್ಟು ಯೋಜನೆಗಳನ್ನು ತರುವ ಮೂಲಕ ಹೊಸ ಭಾರತದ ದಿಕ್ಸೂಚಿಯನ್ನು ತೋರಿಸಿದ್ದಾರೆ. ರೈತರು, ಮಹಿಳೆಯರು, ಯುವಕರು, ಕೂಲಿಕಾರ್ಮಿಕರು ಸೇರಿದಂತೆ ಈ ನಾಲ್ಕೂ ವಿಭಾಗಗಳನ್ನು ಮಾಡಿ ಇವರ ಶ್ರೇಯೋವೃದ್ಧಿಗೆ ಅನೇಕ ಯೋಜನೆಗಳನ್ನು ಇದೇ ಬಜೆಟ್‌ನಲ್ಲಿ ನೀಡಲಾಗಿದೆ ಎಂದ ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ
 

BJP Candidate Will be Win by margin of 2 lakh Votes in Bagalkot Says Veeranna Charantimath grg

ಬಾಗಲಕೋಟೆ(ಫೆ.08): ದೇಶಕ್ಕಾಗಿ, ದೇಶದ ಸಮಗ್ರ ಅಭಿವೃದ್ಧಿಯ ದೂರದೃಷ್ಟಿಯ ನಾಯಕತ್ವಕ್ಕಾಗಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಬಾಗಲಕೋಟೆ ಲೋಕಸಭಾ ಬಿಜೆಪಿ ಅಭ್ಯರ್ಥಿ 2 ಲಕ್ಷ ಮತಗಳ ಅಂತರಿಂದ ಗೆಲುವು ನಿಶ್ಚಿತ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು. ಅವರು ಭಾರತೀಯ ಜನತಾ ಪಕ್ಷ ಬಾಗಲಕೋಟೆ ವತಿಯಿಂದ ನವನಗರದಲ್ಲಿನ ಬಿಜೆಪಿ ಕಾರ್ಯಾಲಯದಲ್ಲಿ ಜರುಗಿದ ಬಿಜೆಪಿ ಜಿಲ್ಲಾ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

2047ಕ್ಕೆ ಭಾರತ ವಿಶ್ವಗುರುವಾಗುವ ನಿಟ್ಟಿನಲ್ಲಿ ಭಾರತೀಯ ಜನತಾ ಪಕ್ಷ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಸಮಗ್ರ ಅಬಿವೃದ್ಧಿ ದೃಷ್ಟಿಯಿಂದ ಧಾರ್ಮಿಕ ಸಾಮಾಜಿಕ ಹಾಗೂ ಆರ್ಥಿಕವಾಗಿ ಪ್ರಗತಿಗೆ ಸಾಕಷ್ಟು ಯೋಜನೆಗಳನ್ನು ತರುವ ಮೂಲಕ ಹೊಸ ಭಾರತದ ದಿಕ್ಸೂಚಿಯನ್ನು ತೋರಿಸಿದ್ದಾರೆ. ರೈತರು, ಮಹಿಳೆಯರು, ಯುವಕರು, ಕೂಲಿಕಾರ್ಮಿಕರು ಸೇರಿದಂತೆ ಈ ನಾಲ್ಕೂ ವಿಭಾಗಗಳನ್ನು ಮಾಡಿ ಇವರ ಶ್ರೇಯೋವೃದ್ಧಿಗೆ ಅನೇಕ ಯೋಜನೆಗಳನ್ನು ಇದೇ ಬಜೆಟ್‌ನಲ್ಲಿ ನೀಡಲಾಗಿದೆ ಎಂದರು.

ಅಡ್ವಾನಿಯವರಿಗೆ ಭಾರತ ರತ್ನ ಕೊಟ್ಟಿದ್ದರಲ್ಲಿ ತಪ್ಪಿಲ್ಲ: ಸಚಿವ ಆರ್‌.ಬಿ.ತಿಮ್ಮಾಪುರ

400 ಸಂಸತ್‌ ಕ್ಷೇತ್ರ ಗೆಲ್ಲುವ ವಿಶ್ವಾಸ:

ಮುಂಬರುವ ಯುವ ಜನಾಂಗಕ್ಕೆ ನವ ಭಾರತ ಹೇಗೆ ಇರಬೇಕು ಎಂಬ ಆಲೋಚನೆ ಮೋದಿಜಿ ಅವರದ್ದಾಗಿದೆ. ಭಾರತ ವಿಶ್ವಗುರುವಾಗಲು ಭಾರತೀಯ ಜನತಾ ಪಕ್ಷ ಹಾಗೂ ಪ್ರಧಾನಿ ನರೇಂದ್ರಮೋದಿಯ ಅವಶ್ಯಕತೆ ಇದೆ. ನರೇಂದ್ರ ಮೋದಿಯವರು ಹೇಳಿದಂತೆ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 370, ಎನ್.ಡಿ.ಎ ಸೇರಿದಂತೆ 400 ಸಂಸತ್‌ ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಆ ಗೆಲ್ಲುವ ಕ್ಷೇತ್ರಗಳಲ್ಲಿ ಕರ್ನಾಟಕದ 28 ಕ್ಷೇತ್ರಗಳು ಸೇರಿದಂತೆ ಭಾಗಲಕೋಟೆ ಕ್ಷೇತ್ರವೂ ಒಂದಾಗಿರುತ್ತದೆ ಎಂದರು.

2 ಲಕ್ಷ ಮತಗಳಿಂದ ಗೆಲವು:

ಬಾಗಲಕೋಟೆಯಲ್ಲಿ 7 ವಿಧಾನಸಭಾ ಕ್ಷೇತ್ರಗಳು ಮತ್ತು ನರಗುಂದ ಸೇರಿದಂತೆ ಆಯಾ ವಿಧಾಸಭಾ ಕ್ಷೇತ್ರ ಗ್ರಾಮೀಣ,ನಗರ ಬಿಜೆಪಿ ಕಾರ್ಯಕರ್ತರ ಸಂಕಲ್ಪ ಮತ್ತೊಮ್ಮೆ ನರೇಂದ್ರ ಮೋದಿಯವರು ಪ್ರಧಾನಿಯಾನ್ನಾಗಿ ಮಾಡುವುದಾಗಿದೆ. ಆ ನಿಟ್ಟಿನಲ್ಲಿ ಲೋಕಸಭಾ ಚುನಾವಣೆಯಲ್ಲಿ ಬಾಗಲಕೋಟೆ ಬಿಜೆಪಿ ಅಭ್ಯರ್ಥಿ ಕನಿಷ್ಠ 2 ಲಕ್ಷ ಮತಗಳ ಅಂತರಿಂದ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.

ಗೆಲವಿಗೆ ಶ್ರಮಿಸೋಣ:

ಬೆಳಗಾವಿ ವಿಭಾಗದ ಪ್ರಭಾರಿಯಾದ ಚಂದ್ರಶೇಖರ ಕವಟಗಿ ಮಾತನಾಡಿ, ಲೋಕಸಭಾ ಚುನಾವಣೆಯ ರೂಪುರೇಷಗಳ ಬಗ್ಗೆ ವಿಸ್ತಾರವಾಗಿ ತಿಳಿಸಿದರು. ಸಭೆಯ ಅಧ್ಯಕ್ಷತೆ ವಹಿಸಿಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ಎರಡನೇ ಬಾರಿಗೆ ಬಿಜೆಪಿ ಜಿಲ್ಲಾಧ್ಯಕ್ಷನಾಗಿ ಸೇವೆ ಸಲ್ಲಿಸುವ ಅವಕಾಶ ನೀಡಿದ ಎಲ್ಲ ಹಾಲಿ ಹಾಗೂ ಮಾಜಿ ಶಾಸಕರುಗಳಿಗೆ, ಮುಖಂಡರುಗಳಿಗೆ ಧನ್ಯವಾದಗಳನ್ನು ಸಲ್ಲಿಸಿದ ಅವರು, ಬಾಗಲಕೋಟೆ ಭಾರತೀಯ ಜನತಾ ಪಕ್ಷದ ಭದ್ರಕೋಟೆಯಾಗಿದೆ. ಎಲ್ಲ ಮತಕ್ಷೇತ್ರದ ಹಾಲಿ ಹಾಗೂ ಮಾಜಿ ಶಾಸಕರು ಹಾಗೂ ಅಸಂಖ್ಯಾತ ಕಾರ್ಯರ್ತರು ಒಂದೇ ಆಸೆ ಅದು ನರೇಂದ್ರ ಮೋದಿಯವರು ಪ್ರಧಾನಿಯಾಗಬೇಕು. ಕೇಂದ್ರದಲ್ಲಿ ಭಾರತೀಯ ಜನತಾ ಪಕ್ಷದ ಆಡಳಿತದ ಮೂಲಕ ದೇಶದ ಅಭಿವೃದ್ಧಿ ಸಾಧ್ಯ ಎಂಬ ಬಲವಾದ ನಂಬಿಕೆಯನ್ನಿಟ್ಟುಕೊಂಡಿದ್ದಾರೆ. ಆ ನಿಟ್ಟಿನಲ್ಲಿ ಈ ಸಲ ಲೋಕಸಭೆಯಲ್ಲಿ ಬಿಜೆಪಿ ಅಭ್ಯರ್ಥಿಯ ಗೆಲುವು ಶತಸಿದ್ದ, ನರೇಂದ್ರಮೋದಿ ಹಾಗೂ ಭಾರತೀಯ ಜನತಾ ಪಕ್ಷದ ಗೆಲುವಿಗೆ ಎಲ್ಲರೂ ಶ್ರಮಿಸೋಣ ಎಂದರು.

ವಿಧಾನ ಪರಿಷತ್ ಮಾಜಿ ಸದಸ್ಯ ಹನಮಂತ ನಿರಾಣಿ, ಪಿ.ಎಚ್‌.ಪೂಜಾರ, ಮಾಜಿ ಸದಸ್ಯ ನಾರಾಯಣ ಸಾ ಭಾಂಡಗೆ, ರಾಜಶೇಖರ ಶೀಲವಂತ, ಬೆಳಗಾವಿ ವಿಭಾಗದ ಪ್ರಧಾನ ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ, ಸಹಪ್ರಭಾರಿ ಬಸವರಾಜ ಯಂಕಂಚಿ ವೇದಿಕೆ ಮೇಲೆ ಇದ್ದರು.

ಸಭೆಯಲ್ಲಿ ಬಿಜೆಪಿಯ ಜಿಲ್ಲಾ ಪದಾಧಿಕಾರಿಗಳು, ನಗರ ಹಾಗೂ ಗ್ರಾಮೀಣ ಮಂಡಲದ ಪದಾಧಿಕಾರಿಗಳು ಕಾರ್ಯಕರ್ತರ ಭಾಗವಹಿಸಿದ್ದರು. ಇದೇ ಸಂದರ್ಭದಲಿ ಲೋಕಸಭಾ ಚುನಾವಣಾ ಕಾರ್ಯಾಲಯವನ್ನು ಪ್ರಾರಂಭಿಸಲಾಯಿತು.

ಕಾಂಗ್ರೆಸ್ ಸರ್ಕಾರ ಜನತೆ ಕ್ಷಮೆ ಕೇಳಲಿ: ಮಾಜಿ ಡಿಸಿಎಂ ಕಾರಜೋಳ

ಅಭಿನಂದನ ನಿರ್ಣಯ

ಶ್ರೀರಾಮ ಮಂದಿರ ನಿರ್ಮಾಣ ಪೂರ್ಣಗೊಳಿಸಿದ್ದಕ್ಕೆ ಹಾಗೂ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ಘೋಷಿಸಿದ್ದಕ್ಕೆ ಅಭಿನಂದನಾ ನಿರ್ಣಯವನ್ನು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಕಾಂತ ಉಪಾಧ್ಯಾಯ ಮಂಡಿಸಿದರು. ಆ ನಿರ್ಣಯದ ಅನುಮೋದನೆಯನ್ನು ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭುವನೇಶ ಪೂಜಾರ ಅನುಮೋದಿಸಿದರು.

2 ಖಂಡನಾ ನಿರ್ಣಯ

ಕರ್ನಾಟಕದಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರದ ವಿರುದ್ಧ ಖಂಡನಾ ನಿರ್ಣಯ ಮಂಡಿಸಲಾಯಿತು.ರೈತ ವಿರೋಧಿ, ದಲಿತ ವಿರೋಧಿ ನೀತಿ ಕುರಿತು ಖಂಡನಾ ನಿರ್ಣಯವನ್ನು ಬೆಳಗಾವಿ ಪ್ರಭಾರಿ ಬಸವರಾಜ ಯಂಕಂಚಿ ಮಂಡಿಸಿದರು. ಇದನ್ನು ಜಿಲ್ಲಾ ಉಪಾಧ್ಯಕ್ಷ ಅಶೋಕ ಲಿಂಬಾವಳಿ ಅನುಮೋದಿಸಿದರು.

Latest Videos
Follow Us:
Download App:
  • android
  • ios