ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್‌ಗೆ ಮುಖಭಂಗ, ಮಾಜಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ!
ಡಿಜೆ ಹಳ್ಳಿ ಕೆಜಿ ಹಳ್ಳಿ ಪ್ರಕರಣದಿಂದ ಇದೀಗ ಕಾಂಗ್ರೆಸ್‌ಗೆ ಮಖಭಂಗಕ್ಕೆ ಗುರಿಯಾಗಿದೆ. ಅಂದಿನ ಸರ್ಕಾರದ ಮ್ಯಾಜಿಸ್ಟ್ರೇಟ್ ವರದಿಯನ್ನು ಇಂದಿನ ಸರ್ಕಾರ ಒಪ್ಪಿಕೊಂಡಿದೆ. ಈ ಕುರಿತು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರು: ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣ ಮತ್ತೆ ಸದ್ದು ಮಾಡುತ್ತಿದೆ. ಇದೀಗ ಡಿಜೆ ಹಳ್ಳಿ ಡಿಜೆ ಹಳ್ಳಿ ಗಲಭೆ ಸಂದರ್ಭದಲ್ಲಿ ಹಿಂದಿನ ನೇಮಿಸಿದ್ದ ಮ್ಯಾಜಿಸ್ಟ್ರೇಟ್ ಪೊಲೀಸರು ತೆಗೆದುಕೊಂಡ ಕ್ರಮ ಸರಿಯಾಗಿದೆ ಎಂದು ವರದಿ ನೀಡಿತ್ತು. ಈ ವರದಿಯನ್ನು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಯಥವಾತ್ತಾಗಿ ಒಪ್ಪಿಕೊಂಡಿದೆ. ಪೊಲೀಸರ ಕ್ರಮ ಸರಿಯಾಗಿದೆ ಎಂದು ಸರ್ಕಾರ ಹೇಳಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ನಮ್ಮ ಸರ್ಕಾರ ತೆಗೆದುಕೊಂಡಿರುವ ಕ್ರಮ ಸರಿಯಾಗಿದೆ ಎಂದಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಜೆ ಹಳ್ಳಿ ಹಳ್ಳಿ ಗಲಭೆ ವಿಚಾರದಲ್ಲಿ ನೇಮಿಸಿದ್ದ ಅಧಿಕಾರಿಯ ರಿಪೋರ್ಟ್ ಬಂದಿದೆ. ರಾಜ್ ಸರ್ಕಾರ ಯತಾವತ್ತಾಗಿ ಒಪ್ಪಿಕೊಂಡಿದ್ದಾರೆ.ಇದು ಸರಿಯಾದ ಕ್ರಮ. ಹಿಂಸೆ, ಪೊಲೀಸರ ಮೇಲೆ ದಾಳಿ, ಕಾನೂನು ಸುವ್ಯವಸ್ಥೆ ಕಾಪಾಡಲು ತೆಗೆದುಕೊಂಡ ಕ್ರಮವಾಗಿದೆ. ಅಂದಿನ ಘಟನೆ ಎಲ್ಲವೂ ಕೂಡ ಮಾಧ್ಯಮದಲ್ಲಿ ಸ್ಪಷ್ಟವಾಗಿ ಬಂದಿತ್ತು. ಕಾಂಗ್ರೆಸ್ ಪಕ್ಷದ ಶಾಸಕರ ಮನೆ ಮೇಲೆ ದಾಳಿಯಾದರೂ ಕೂಡ. ಅವರ ರಕ್ಷಣೆಗೆ ಬರಲಿಲ್ಲ ಗೋಲೀಬಾರ್ ಪ್ರಶ್ನಿಸುವ ಕೆಲಸ ಮಾಡಿದರು.
ಡಿಜೆ ಹಳ್ಳಿ ಗಲಭೆಯಲ್ಲಿ ಅಮಾಯಕರಿದ್ದಾರೆ, ಸರ್ಕಾರದ ವಿರುದ್ಧವೇ ಗುಡುಗಿದ ತನ್ವೀರ್ ಸೇಠ್!
ಈಗ ಸತ್ಯ ಹೊರ ಬಂದಿದೆ. ಸರ್ಕಾರ ಅದನ್ನ ಒಪ್ಪಿಕೊಂಡಿದೆ ಎಂದರು. ಪೊಲೀಸ್ ಠಾಣೆ ಮೇಲೆ ದಾಳಿ ಮಾಡುವುದು ಅಕ್ಷಮ್ಯ ಅಪರಾಧ. ಆದ್ದರಿಂದ ಈ ರೀತಿಯ ಘಟನೆ ಮರುಕಳಿಸಬಾರದು. ಸರ್ಕಾರ ಸರಿಯಾದ ಕ್ರಮ ತೆಗೆದುಕೊಳ್ಳಬೇಕು. ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿಯಾಗಿರುವುದಕ್ಕೆ ಪರಿಹಾರಕ್ಕೆ ಕಮಿಷನ್ ನೇಮಕ ಮಾಡಿದ್ದೆವು. ಅದರ ಶಿಫಾರಸು ಕೂಡ ಸರ್ಕಾರ ಮಾಡಿ. ಸಾರ್ವಜನಿಕ ಆಸ್ತಿ ಕಟ್ಟಿಕೊಡುವ ಕೆಲಸ ಮಾಡಬೇಕು ಎಂದರು.
ಒಂದು ಸಮುದಾಯವನ್ನು ಟಾರ್ಗೆಟ್ ಮಾಡಿದ್ದರು ಎಂದು ಕಾಂಗ್ರೆಸ್ ನವರು ಮಾಡಿರುವ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಎಲ್ಲಾ ವಿಚಾರಗಳು ಮಾಧ್ಯಮದಲ್ಲಿ ಲೈವ್ ಆಗಿ ನೋಡಿದ್ದಾರೆ. ಯಾವುದೇ ಸಮುದಾಯ ಟಾರ್ಗೆಟ್ ಮಾಡುವ ಕೆಲಸ ಮಾಡಿಲ್ಲ. ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿ ರೆಕಾರ್ಡ್ಸ್ ಸುಟ್ಟು ಹಾಕುವ ಕೆಲಸ ಮಾಡಿದ್ದರು. ಅವರದ್ದೇ ಪಕ್ಷದ ಶಾಸಕನ ರಕ್ಷಣೆಗೆ ಬರಲಿಲ್ಲ. ಎಂದರು.
ಯಾಮಾರಿಸುವ ಕೆಲಸ
ಮುಸ್ಲಿಂ ಸಮುದಾಯಕ್ಕೆ ಹತ್ತು ಸಾವಿರ ಕೋಟಿ ಮೀಸಲಿಡುವುದಾಗಿ ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮೊದಲನೆಯದಾಗಿ ಎಸ್ಸಿ, ಎಸ್ಟಿ ಸಮುದಾಯಕ್ಕೆ ನೀಡಿದ ಹಣದಲ್ಲಿ 11 ಸಾವಿರ ಕೋಟಿ ಗ್ಯಾರಂಟಿಗೆ ಕೊಟ್ಟಿದ್ದಾರೆ.
ಇದರಿದ ಎಸ್ಸಿ, ಎಸ್ಟಿ ಸಮುದಾಯಕ್ಕೆ ವಂಚನೆಯಾಗಿದೆ.
ದಲಿತರ ಬಗ್ಗೆ ಬಹಳಷ್ಟು ಮಾತನಾಡುತ್ತಾರೆ. ದಲಿತ ವಿರೋಧಿ ನಿರ್ಣಯ ಕೈಗೊಂಡಿದ್ದಾರೆ. ಮೈನಾರಿಟಿ, ಹಿಂದುಳಿದ ವರ್ಗಗಳಿಗೆ ನೀಡಿದ ಹಣವನ್ನ ಅವರು ಪೂರ್ಣ ಪ್ರಮಾಣದಲ್ಲಿ ಖರ್ಚು ಮಾಡುವುದಿಲ್ಲ. ನಮ‌್ಮ ಕಾಲದಲ್ಲಿ ಕೊಟ್ಟ ಹಣವನ್ನೂ ವಾಪಸ್ ಪಡೆದಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆ ದೃಷ್ಟಿಯಿಂದ ಹೇಳಿಕೆ ಕೊಟ್ಟಿದ್ದಾರೆ. ಬಜೆಟ್‌ನಲ್ಲಿ ಕೊಟ್ಟಿರುವುದನ್ನು ಬಿಡುಗಡೆ ಮಾಡಲು. ದಲಿತರಿಗೆ ಮೀಸಲಿಟ್ಟ ಹಣ ವಾಪಸ್ ಕೊಡಲಿ. ಇವರ ನಿರ್ಣಯದಿಂದ ರಾಜ್ಯದಲ್ಲಿ ಆರ್ಥಿಕತೆ ಕುಸಿಯುತ್ತಿದೆ.
ಡಿಜೆ ಹಳ್ಳಿ- ಕೆಜಿ ಹಳ್ಳಿ ಗಲಭೆ ಪ್ರಕರಣ, ಬೆಂಕಿ ಹಚ್ಚಿದವರ ರಕ್ಷಣೆಗೆ ಸರ್ಕಾರದಿಂದ ವೇದಿಕೆ ಸಿದ್ಧ!
ಈಗಾಗಲೇ 7th ಪೇ ಕಮೀಷನ್ ವರದಿ ತಡವಾಗಲಿ ಅಂತ ಬಯಸುತ್ತಿದ್ದಾರೆ. ಇದರಿಂದ ಸರ್ಕಾರಿ ನೌಕರರ ವೇತನ ಹೆಚ್ಚಾದರೆ ಕೊಡಲು ಸಾಧ್ಯವಿಲ್ಲ ಅಂತ ಈ ರೀತಿ ಮಾಡಿದ್ದಾರೆ. ಹತ್ತು ಸಾವಿರ ಕೋಟಿ, ಇಪ್ಪತ್ತು ಸಾವಿರ ಕೋಟಿ ಕೊಡುತ್ತೇನೆ ಅನ್ನುವುದು ಕೇವಲ ರಾಜಕೀಯ ಹೇಳಿಕೆ. ಮತ್ತು ಓಲೈಕೆ ರಾಜಕಾರಣ. ಮತ್ತೊಮ್ಮೆ ಅಲ್ಪ ಸಂಖ್ಯಾತರನ್ನು ಯಾಮಾರಿಸೋ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು. ಇದೇ ವೇಳೆ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ವಿರೋಧ ಮಾಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅದು ಅವರ ಪಕ್ಷದ ಆಂತರಿಕ ವಿಚಾರ. ಅದರ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.
ಶಾಮನೂರು ಅವರಿಗೆ ಉತ್ತರಿಸಲಿ
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಲಿಂಗಾಯತ ಅಧಿಕಾರಿಗಳಿಗೆ ರಕ್ಷಣೆ ಇಲ್ಲ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ನೀಡಿರುವ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಅವರು, ಅವರಿಗೆ ಉತ್ತರ ನೀಡಲಿ ಎಂದು ಹೇಳಿದರು.