Asianet Suvarna News Asianet Suvarna News

ಬೊಮ್ಮಾಯಿ ಶಕುನಿ ಎಂದ ಸುರ್ಜೆವಾಲಾ ವಿರುದ್ಧ ಬಿಜೆಪಿ ದೂರು

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧುನಿಕ ಶಕುನಿ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲಾ ವಿರುದ್ಧ ರಾಜ್ಯ ಬಿಜೆಪಿ ಕಾನೂನು ಪ್ರಕೋಷ್ಟದಿಂದ ಮಂಗಳವಾರ ಮುಖ್ಯ ಚುನಾವಣಾ ಆಯುಕ್ತರಿಗೆ ಎರಡು ಪ್ರತ್ಯೇಕ ದೂರು ನೀಡಲಾಗಿದೆ.

BJP complains against Surjewala controversy statement shakuni at benglauru rav
Author
First Published Mar 29, 2023, 2:15 AM IST

ಬೆಂಗಳೂರು (ಮಾ.29) : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಧುನಿಕ ಶಕುನಿ ಎಂದಿರುವ ಮತ್ತು ತಿರುಮಲ ತಿರುಪತಿ ದೇವಾಲಯಕ್ಕೆ ಆರ್‌ಬಿಐ ದಂಡ ವಿಧಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರ ಬಿಜೆಪಿ ಸರ್ಕಾರ ತಿರುಪತಿ ದೇವಾಲಯದ ಮೇಲೆ ದಾಳಿ ಮಾಡಿಸಿದೆ ಎಂದು ಹೇಳಿಕೆ ನೀಡಿರುವ ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲಾ ವಿರುದ್ಧ ರಾಜ್ಯ ಬಿಜೆಪಿ ಕಾನೂನು ಪ್ರಕೋಷ್ಟದಿಂದ ಮಂಗಳವಾರ ಮುಖ್ಯ ಚುನಾವಣಾ ಆಯುಕ್ತರಿಗೆ ಎರಡು ಪ್ರತ್ಯೇಕ ದೂರು ನೀಡಲಾಗಿದೆ.

ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲಾ(Randeep singh surjewala) ಅವರು ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(CM Basavaraj bommai) ಅವರು ಆಧುನಿಕ ಶಕುನಿ. ಮೀಸಲಾತಿ(reservation issue) ಮೂಲಕ ಜನರನ್ನು ಒಡೆದು ಸಂಘರ್ಷ ಸೃಷ್ಟಿಸಿದ್ದಾರೆ’ ಎಂದು ಹೇಳಿಕೆ ನೀಡಿದ್ದಾರೆ. ಈ ಮೂಲಕ ಮುಖ್ಯಮಂತ್ರಿಗಳ ಗೌರವಕ್ಕೆ ಚ್ಯುತಿ ಬರುವಂತಹ ಇಂತಹ ಹೇಳಿಕೆ ಸಮಾಜದಲ್ಲಿ ಅವರ ಘನತೆಗೆ ಧಕ್ಕೆ ಉಂಟು ಮಾಡುತ್ತದೆ. ಇಂತಹ ಅವಹೇಳನಕಾರಿ ಹೇಳಿಕೆ ಕೊಟ್ಟು ಪಕ್ಷದ ಕಾರ್ಯಕರ್ತರು ಪ್ರಚೋದನೆಗೆ ಒಳಗಾಗಿ ಕೆರಳುವ ಸಂಭವವಿರುತ್ತದೆ. ಪ್ರಚೋದಿಸುವ ಉದ್ದೇಶದಿಂದಲೇ ಇಂತಹ ಹೇಳಿಕೆ ನೀಡಿರುವ ಸುರ್ಜೆವಾಲಾ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಕೋರಲಾಗಿದೆ.

ಮೀಸಲಾತಿ ವಿಚಾರ; ಸಿಎಂ ಬೊಮ್ಮಾಯಿ ಆಧುನಿಕ ಶಕುನಿ: ಸುರ್ಜೇವಾಲಾ ಕಿಡಿ

ಮತ್ತೊಂದು ಘಟನೆಯಲ್ಲಿ ಸುರ್ಜೆಲಾ ಅವರು ತಿರುಮಲ ತಿರುಪತಿ ದೇವಸ್ಥಾನಕ್ಕೆ ಆರ್‌ಬಿಐ ವಿಧಿಸಿರುವ ದಂಡ ಕುರಿತು ಪ್ರತಿಕ್ರಿಯಿಸುವಾಗ ‘ಪ್ರಧಾನಿ ಮೋದಿ ಅವರ ಬಿಜೆಪಿ ಸರ್ಕಾರ ತಿರುಪತಿ ಮೇಲೆ ದಾಳಿ ಮಾಡಿಸಿ 3.10 ಕೋಟಿ ರು.ದಂಡ ವಿಧಿಸಿದೆ’ ಎಂದು ಸುಳ್ಳು ಆರೋಪ ಮಾಡಿದ್ದಾರೆ. ಈ ಮೂಲಕ ಜನರ ಧಾರ್ಮಿಕ ಭಾವನೆಗಳು ಕೆರಳುವಂತೆ ಮಾಡಿ ಸರ್ಕಾರ ಮತ್ತು ಪಕ್ಷದ ವಿರುದ್ಧ ಜನತೆಯನ್ನು ಎತ್ತಿಕಟ್ಟುವ ಹುನ್ನಾರ ಮಾಡಿದ್ದಾರೆ. ಇಂತಹ ಸುಳ್ಳು ಹೇಳಿಕೆಗಳು ಮುಂದಿನ ಚುನಾವಣೆಯಲ್ಲಿ ಮತದಾರರ ಮೇಲೆ ಪ್ರಭಾವ ಬೀರುವ ಸಂಭವವಿದೆ. ಹೀಗಾಗಿ ಸುರ್ಜೆವಾಲಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ.

ಜೆಡಿಎಸ್ ಅಧಿಕಾರಕ್ಕೆ ಬಂದ್ರೆ ಅರ್ಧ ಬೆಲೆ ಗ್ಯಾಸ್, ಆಟೋ ಚಾಲಕರಿಗೆ .2000: ಎಚ್‌ಡಿಕೆ ಭರವಸೆ...
 

Follow Us:
Download App:
  • android
  • ios