ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ನೀತಿ ಸಂಹಿತೆ ದುರುಪಯೋಗ ಪಡಿಸಿಕೊಂಡಿದೆ. ಸೋನಿಯಾ ಗಾಂಧಿ ಅವರ ಸಾರ್ವಭೌಮತೆ ಪದ ಉಲ್ಲೇಖಿಸಿ ಕಾಂಗ್ರೆಸ್‌ ಟ್ವೀಟ್‌ ಮಾಡಿದೆ. ಇದಕ್ಕೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದ್ದು ದೂರು ನೀಡಿದೆ.

ಬೆಂಗಳೂರು (ಮೇ 8, 2023): ಕಾಂಗ್ರೆಸ್ ಸಂಸದೀಯ ಪಕ್ಷ ಮುಖ್ಯಸ್ಥೆ ಸೋನಿಯಾ ಗಾಂಧಿ ಇತ್ತೀಚೆಗೆ ಕೈ ಪಕ್ಷದ ಪರವಾಗಿ ಪ್ರಚಾರದ ವೇಳೆ ಸಾರ್ವಭೌಮತೆಯ ಪದ ಉಲ್ಲೇಖಿಸಿದ್ದರು. ಈ ಸಂಬಂಧ ಕಾಂಗ್ರೆಸ್‌ ಮೇ 6 ರಂದು ಟ್ವೀಟ್‌ ಮಾಡಿತ್ತು. ಈ ಬಗ್ಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಹಲವು ನೆಟ್ಟಿಗರು ಸಹ ಕಾಂಗ್ರೆಸ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿತ್ತು. ಭಾರತ್ ಜೋಡೋ ಯಾತ್ರೆ ಮಾಡಿದ್ದ ಕಾಂಗ್ರೆಸ್‌ ಈಗ ಮತ್ತೆ ದೇಶ ವಿಭಜಿಸಲು ಹೊರಟಿದೆ ಎಂದೂ ಹಲವರು ತರಾಟೆಗೆ ತೆಗೆದುಒಂಡಿದ್ದರು. ಈ ಸಂಬಂಧ ಬಿಜೆಪಿ ನಿಯೋಗ ಕಾಂಗ್ರೆಸ್‌ನ ಹೇಳಿಕೆ ವಿರೋಧಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ನವದೆಹಲಿ ಭಾರತೀಯ ಚುನಾವಣಾ ಆಯೋಗದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ನಿಯೋಗ ದೂರು ನೀಡಿದೆ. ಕೇಂದ್ರ ಸಚಿವ ಭೂಪೇಂದ್ರ ಯಾದವ್ ನೇತೃತ್ವದ ನಿಯೋಗ ಕಾಂಗ್ರೆಸ್‌ ಹೇಳಿಕೆ ವಿರುದ್ಧ ದೂರು ನೀಡಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ನೀತಿ ಸಂಹಿತೆ ದುರುಪಯೋಗ ಪಡಿಸಿಕೊಂಡಿದೆ. ಸೋನಿಯಾ ಗಾಂಧಿ ಅವರ ಸಾರ್ವಭೌಮತೆ ಪದ ಉಲ್ಲೇಖಿಸಿ ಕಾಂಗ್ರೆಸ್‌ ಟ್ವೀಟ್‌ ಮಾಡಿದೆ. ಇದಕ್ಕೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದ್ದು ದೂರು ನೀಡಿದೆ.

ಇದನ್ನು ಓದಿ: ಕರ್ನಾಟಕಕ್ಕೆ ಸಾರ್ವಭೌಮತ್ವ ಎಂದ ಸೋನಿಯಾ: ಕಾಂಗ್ರೆಸ್ ಮತ್ತೆ ದೇಶ ವಿಭಜಿಸಲು ಹೊರಟಿದೆ ಎಂದು ಬಿಜೆಪಿ ಟೀಕೆ

ದೇಶದ ಅಖಂಡತೆಗೆ ಬಳಸುವ ಪದವನ್ನು ಕಾಂಗ್ರೆಸ್ ಉದ್ದೇಶ ಪೂರ್ವವಾಗಿ ಟ್ವೀಟ್ ಮಾಡಿದೆ. ಇದು ಭಾರತದ ಅಖಂಡತೆ ಧಕ್ಕೆ ಬರಲಿದೆ ಎಂದು ಕೇಂದ್ರ ಸಚಿವ ಭೂಪೇಂದ್ರ ಯಾದವ್‌ ತಿಳಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್‌ನ 40% ಕಮಿಷನ್‌ ಆರೋಪದ ವಿರುದ್ಧವೂ ದೂರು ಸಲ್ಲಿಸಿದ್ದರೂ ಚುನಾವಣಾ ಆಯೋಗ ಈ ತನಕ ಯಾವುದೇ ಉತ್ತರ ನೀಡಿಲ್ಲ ಎಂದು ಸಹ ಭೂಪೇಂದ್ರ ಯಾದವ್ ಹೇಳಿಕೆ ನೀಡಿದ್ದಾರೆ. 

ಇನ್ನು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಹ ಈ ಬಗ್ಗೆ ಮಾತನಾಡಿದ್ದು, ಕಾಂಗ್ರೆಸ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ನೆಲದಲ್ಲಿ ನಿಂತು ತುಕ್ಡೇ ತುಕ್ಡೇ ಗ್ಯಾಂಗ್‌ನವರ ಭಾಷೆಯನ್ನು ಬಳಸಿ ಕರ್ನಾಟಕದ ಸಾರ್ವಭೌಮತ್ವದ ಬಗ್ಗೆ ಹೇಳಿಕೆ ನೀಡಿದ ಸೋನಿಯಾ ಗಾಂಧಿ ಅವರು ನಾಡಿನ ಜನರ ಭಾವನೆಗೆ ಧಕ್ಕೆ ತಂದಿದ್ದಾರೆ. ಕರ್ನಾಟಕದವರ ಬಗ್ಗೆ, ಅವರ ದೇಶಭಕ್ತಿಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಅವರ ಉದ್ದೇಶವೇನು ಎಂದು ಕೇಂದ್ರ ಸಚಿವರು ಹಾಗೂ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಆಗಿರುವ ಶೋಭಾ ಕರಂದ್ಲಾಜೆ ಪ್ರಶ್ನೆ ಮಾಡಿದ್ದಾರೆ. ಬಿಜೆಪಿ ಕರ್ನಾಟಕ ಈ ಬಗ್ಗೆ ಟ್ವೀಟ್‌ ಮಾಡಿದೆ. 

ಇದನ್ನೂ ಓದಿ: 2024ರಲ್ಲೂ ಮೋದಿ ವಿರುದ್ಧ ಕಾಂಗ್ರೆಸ್‌ ಮೈತ್ರಿ ರಚನೆ: ಖರ್ಗೆ; ಸೋನಿಯಾ ರಾಜಕೀಯ ವಿದಾಯ..?

Scroll to load tweet…

ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಭಾಷಣದ ಬಗ್ಗೆ ಟ್ವೀಟ್‌ ಮಾಡಿದ ಕಾಂಗ್ರೆಸ್‌, ಸಿಪಿಪಿ ನಾಯಕಿ ಸೋನಿಯಾ ಗಾಂಧಿ ಅವರು 6.5 ಕೋಟಿ ಕನ್ನಡಿಗರಿಗೆ ಗಟ್ಟಿ ಸಂದೇಶ ರವಾನಿಸಿದ್ದಾರೆ. ಕರ್ನಾಟಕದ ಪ್ರತಿಷ್ಠೆ, ಸಾರ್ವಭೌಮತೆ ಅಥವಾ ಸಮಗ್ರತೆಗೆ ಧಕ್ಕೆ ತರಲು ಕಾಂಗ್ರೆಸ್ ಯಾರಿಗೂ ಅವಕಾಶ ನೀಡುವುದಿಲ್ಲ ಎಂದಿದ್ದಾರೆ ಎಂದು ಕಾಂಗ್ರೆಸ್‌ ಮೇ 6 ರಂದು ರಾತ್ರಿ ಟ್ವೀಟ್‌ ಮಾಡಿತ್ತು. ಕಾಂಗ್ರೆಸ್‌ನ ಈ ಟ್ವೀಟ್‌ಗೆ ಸಾಕಷ್ಟು ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದೆ. 

Scroll to load tweet…

ಇದನ್ನೂ ಓದಿ: ಗ್ಯಾರಂಟಿ ಈಡೇರಿಸಿದ್ದೇವೆ: ಮೋದಿ ವಿರುದ್ಧ ಸೋನಿಯಾ ಗಾಂಧಿ ಕಿಡಿ