ಸಚಿವ ಜಮೀರ್ ರಾಜ್ಯಪಾಲರಿಗೆ ಧಮಕಿ ಹಾಕುವ ಕೆಲಸ ಮಾಡಿದ್ದಾರೆ. ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಮಾಡುವ ಕಾಂಗ್ರೆಸ್ಸಿಗರಿಗೆ ನಾಚಿಕೆ ಆಗುವುದಿಲ್ಲವೇ ಎಂದು ಪ್ರಶ್ನಿಸಿದ ಶಾಸಕ ಹಾಗೂ ರಾಜ್ಯ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಸಿಮೆಂಟ್‌ ಮಂಜು 

ಬೆಂಗಳೂರು(ಆ.21): ರಾಜ್ಯಪಾಲರಿಗೆ ಧಮಕಿ ಹಾಕಿದ ಆರೋಪದಡಿ ಸಚಿವ ಜಮೀರ್‌ ಅಹಮದ್‌, ವಿಧಾನ ಪರಿಷತ್‌ ಸದಸ್ಯ ಐವಾನ್‌ ಡಿಸೋಜಾ, ಕಾಂಗ್ರೆಸ್‌ ಮುಖಂಡ ರಕ್ಷಿತ್‌ ಶಿವರಾಂ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿ ರಾಜ್ಯ ಬಿಜೆಪಿ ನಾಯಕರು ಉಪ್ಪಾರಪೇಟೆ ಪೊಲೀಸ್‌ ಠಾಣೆಗೆ ಮಂಗಳವಾರ ದೂರು ನೀಡಿದ್ದಾರೆ.

ದೂರು ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಹಾಗೂ ರಾಜ್ಯ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಸಿಮೆಂಟ್‌ ಮಂಜು ಮಾತನಾಡಿ, ಸಚಿವ ಜಮೀರ್ ರಾಜ್ಯಪಾಲರಿಗೆ ಧಮಕಿ ಹಾಕುವ ಕೆಲಸ ಮಾಡಿದ್ದಾರೆ. ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಮಾಡುವ ಕಾಂಗ್ರೆಸ್ಸಿಗರಿಗೆ ನಾಚಿಕೆ ಆಗುವುದಿಲ್ಲವೇ ಎಂದು ಪ್ರಶ್ನಿಸಿದರು.

ಬಿಜೆಪಿ ಅಧ್ಯಕ್ಷರಂತೆ ರಾಜ್ಯಪಾಲರ ಕೆಲಸ: ಬಿ.ಕೆ. ಹರಿಪ್ರಸಾದ್‌

ರಾಜ್ಯಪಾಲರದು ಸಾಂವಿಧಾನಿಕ ಹುದ್ದೆ. ಮೂರು ಮಂದಿ ನೀಡಿದ ದೂರಿನ ಮೇರೆಗೆ ಕಾನೂನು ತಜ್ಞರ ಸಲಹೆ ಪಡೆದು ತನಿಖೆಗೆ ಅವಕಾಶ ನೀಡಿದ್ದಾರೆ. ಆದರೆ, ಈ ಕಾಂಗ್ರೆಸ್ಸಿಗರು ರಾಜ್ಯಪಾಲರ ಭಿತ್ತಿಪತ್ರಕ್ಕೆ ಚಪ್ಪಲಿಯಲ್ಲಿ ಹೊಡೆದಿದ್ದಾರೆ. ಇವರು ಸಂವಿಧಾನಕ್ಕೆ ಗೌರವ ಕೊಡುವರೇ ಎಂದು ಕೇಳಿದರು.

ಬಿಜೆಪಿ ತಂದಿದ್ದ ಭೂಕಾಯ್ದೆ ವಾಪಸ್: ಸಿಎಂ ಸಿದ್ದರಾಮಯ್ಯ

ಮೂವರ ವಿರುದ್ಧ ದೂರು:

ಕಾನೂನು ಸುವ್ಯವಸ್ಥೆ ಹದಗೆಟ್ಟರೆ ರಾಜ್ಯಪಾಲರೇ ಕಾರಣ ಎಂದು ಸಚಿವ ಜಮೀರ್ ಅಹಮದ್‌ ಹೇಳಿದ್ದಾರೆ. ಹೀಗಾಗಿ ಅವರ ವಿರುದ್ಧ ದೂರು ನೀಡಿ ಬಂಧಿಸುವಂತೆ ಕೋರಲಾಗಿದೆ. ಜತೆಗೆ ವಿಧಾನ ಪರಿಷತ್‌ ಸದಸ್ಯ ಐವಾನ್‌ ಡಿಸೋಜಾ, ಕಾಂಗ್ರೆಸ್‌ ಮುಖಂಡ ರಕ್ಷಿತ್‌ ಶಿವರಾಂ ವಿರುದ್ಧವೂ ದೂರು ನೀಡಿರುವುದಾಗಿ ತಿಳಿಸಿದರು.

ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌ ಮಾತನಾಡಿ, ಕಾಂಗ್ರೆಸ್‌ ಪಕ್ಷದ ನಾಯಕ ಹೇಳಿಕೆಗಳನ್ನು ಗಮನಿಸಿದರೆ, ಅರಾಜಕತೆ ಸೃಷ್ಟಿಸುವ ಹುನ್ನಾರ ಇದ್ದಂತಿದೆ. ಕೇಂದ್ರದ ಮಾಜಿ ಸಚಿವ ಸಲ್ಮಾನ್‌ ಖುರ್ಷಿದ್‌ ಹೇಳಿಕೆ ಮಾದರಿಯಲ್ಲಿ ರಾಜ್ಯ ಕಾಂಗ್ರೆಸ್‌ ನಾಯಕರು ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಬಿಜೆಪಿ ಎಸ್‌.ಟಿ.ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು, ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕ ವಸಂತಕುಮಾರ್‌ ಮತ್ತಿತರರಿದ್ದರು.