ಕೇಂದ್ರ ಗೃಹ ಸಚಿವ ಅಮಿತ್‌ ಶಾ ಗೂಂಡಾ ಎಂಬ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡು, ಯತೀಂದ್ರ ಹೇಳಿದ್ದರಲ್ಲಿ ತಪ್ಪೇನಿದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ 

ನವದೆಹಲಿ(ಏ.02):  ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಗೂಂಡಾ, ರೌಡಿ ಎಂದು ಕೀಳು ಪದಗಳಿಂದ ಟೀಕಿಸಿದ್ದ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ವಿರುದ್ಧ ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.

ಶಾ ಕುರಿತ ಪುತ್ರನ ಹೇಳಿಕೆಗೆ ಸಿದ್ದರಾಮಯ್ಯ ಸಮರ್ಥನೆ

ಮೈಸೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಗೂಂಡಾ ಎಂಬ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಯತೀಂದ್ರ ಹೇಳಿದ್ದರಲ್ಲಿ ತಪ್ಪೇನಿದೆ ಎಂದು ತಿಳಿಸಿದ್ದಾರೆ.

ಬಿಜೆಪಿ 400 ಸೀಟು ಗೆದ್ದು ಸಂವಿಧಾನ ಬದಲಾಯಿಸುವ ಗುರಿ ಇಟ್ಟುಕೊಂಡಿದೆ: ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ

ಸೋಮವಾರ ಸುದ್ದಿಗಾರರ ಜತೆಗೆ ಮಾತನಾಡಿ, ಯತೀಂದ್ರ ಹೇಳಿದ್ದರಲ್ಲಿ ತಪ್ಪೇನಿದೆ? ಸಿಬಿಐ ಹೇಳಿರುವುದನ್ನಷ್ಟೆ ಯತೀಂದ್ರ ಹೇಳಿದ್ದಾನೆ. ಅದು ಅವನು ಬಳಸಿದ ಪದ ಅಲ್ಲ. ಸಿಬಿಐ ವರದಿಯಲ್ಲಿರುವ ಪದ. ಅದನ್ನೇ ಅವನು ಭಾಷಣದ ವೇಳೆ ಉಲ್ಲೇಖಿಸಿದ್ದಾನೆ. ಬಿಜೆಪಿಗೆ ಸಂಸ್ಕಾರವೇ ಗೊತ್ತಿಲ್ಲ. ಅಂಥವರು ಇಧೀಗ ಯತೀಂದ್ರಗೆ ಸಂಸ್ಕಾರ ಹೇಳಿಕೊಡಲು ಬಂದಿದ್ದಾರೆ ಎಂದು ಕಿಡಿಕಾರಿದರು.

ಹನೂರಿನಲ್ಲಿ ಇತ್ತೀಚೆಗೆ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯೊಂದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರೊಬ್ಬ ಗೂಂಡಾ, ರೌಡಿ, ಅವರ ವಿರುದ್ಧ ಕೊಲೆ ಪ್ರಕರಣಗಳಿವೆ ಎಂದು ಹೇಳಿದ್ದರು. ಈ ಹೇಳಿಕೆಗೆ ಬಿಜೆಪಿಯಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ತಮ್ಮ ಹೇಳಿಕೆ ಕುರಿತು ಯತೀಂದ್ರ ಕೂಡ ಸ್ಪಷ್ಟನೆ ನೀಡಿದ್ದು, ಸಿಬಿಐ ನ್ಯಾಯಾಲಯಕ್ಕೆ ನೀಡಿದ ವರದಿಯಲ್ಲಿ ಏನು ಹೇಳಿದೆಯೋ ಅದನ್ನಷ್ಟೆ ನಾನು ಉಲ್ಲೇಖಿಸಿದ್ದೇನೆ ಎಂದು ಹೇಳಿಕೊಂಡಿದ್ದರು.