ಸಚಿವ ಆರ್.ಅಶೋಕ್‌ಗೆ ಪದ್ಮನಾಭನಗರ ಜತೆಗೆ ಕನಕಪುರ ಕ್ಷೇತ್ರದಲ್ಲಿ ಸ್ಪರ್ಧಿಸಲು ಟಿಕೆಟ್ ಘೋಷಣೆ ಮಾಡಲಾಗಿದೆ. ಸಚಿವ ಸೋಮಣ್ಣ ಅವರಿಗೆ ಚಾಮರಾಜನಗರ ಕ್ಷೇತ್ರದ ಜತೆಗೆ ವರುಣಾ ಕ್ಷೇತ್ರದಿಂದ ಅವಕಾಶ ಕಲ್ಪಿಸಲಾಗಿದೆ. ಕನಕಪುರ ಮತ್ತು ವರುಣ ಎರಡೂ ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸ ಇದೆ ಎಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.
ಬೆಂಗಳೂರು(ಏ.12): ಕನಕಪುರ ಮತ್ತು ವರುಣ ಕ್ಷೇತ್ರದಲ್ಲಿ ಗೆಲ್ಲುವ ವಿಶ್ವಾಸ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಂಗಳವಾರ ದೆಹಲಿಯಿಂದ ಹಿಂತಿರುಗಿದ ಬಳಿಕ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಚಿವ ಆರ್.ಅಶೋಕ್‌ಗೆ ಪದ್ಮನಾಭನಗರ ಜತೆಗೆ ಕನಕಪುರ ಕ್ಷೇತ್ರದಲ್ಲಿ ಸ್ಪರ್ಧಿಸಲು ಟಿಕೆಟ್ ಘೋಷಣೆ ಮಾಡಲಾಗಿದೆ. ಸಚಿವ ಸೋಮಣ್ಣ ಅವರಿಗೆ ಚಾಮರಾಜನಗರ ಕ್ಷೇತ್ರದ ಜತೆಗೆ ವರುಣಾ ಕ್ಷೇತ್ರದಿಂದ ಅವಕಾಶ ಕಲ್ಪಿಸಲಾಗಿದೆ. ಕನಕಪುರ ಮತ್ತು ವರುಣ ಎರಡೂ ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸ ಇದೆ ಎಂದರು.
ಮುಂದಿನ ನಾಯಕತ್ವ ಬೆಳೆಸಲು ಹೊಸಬರಿಗೆ ಮಣೆ: ಅರುಣ್ ಸಿಂಗ್ ಸಮರ್ಥನೆ
ದೇಶದಲ್ಲಿ ಕನಸು ಕಾಣಲು ತೆರಿಗೆ ಇಲ್ಲ. ಕಾಂಗ್ರೆಸ್‌ನವರು ಕನಸು ಕಾಣಲಿ. ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ. ಎರಡನೇ ಪಟ್ಟಿಯಲ್ಲಿ ಎಲ್ಲರಿಗೂ ಸಿಗುತ್ತದೆ. ಯಾವುದೇ ಭಿನ್ನಮತ ಇಲ್ಲ. ಎಲ್ಲವನ್ನೂ ಅಳೆದು ತೂಗಿ ಆಯ್ಕೆ ಮಾಡಲಾಗಿದೆ. ಕಳೆದ ಬಾರಿ ಶ್ರೀರಾಮುಲುಗೆ ಎರಡು ಕ್ಷೇತ್ರ ಕೊಡಲಾಗಿತ್ತು. ಅದೇ ತಂತ್ರಗಾರಿಕೆಯಲ್ಲಿ ಈ ಬಾರಿಯೂ ಅಶೋಕ್ ಮತ್ತು ಸೋಮಣ್ಣ ಅವರಿಗೆ ನೀಡಲಾಗಿದೆ. ಈ ಬಾರಿ ನಾವು ಯುವ ಸಮೂಹಕ್ಕೆ ಒತ್ತು ನೀಡಲಾಗಿದೆ ಎಂದು ತಿಳಿಸಿದರು.
ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.
