ಇಂದು ಬಿಜೆಪಿ ಸಭೆ: ಭಾರೀ ಕುತೂಹಲ, ಯತ್ನಾಳ್‌ ಟೀಂ ಭಿನ್ನಮತ ಕುರಿತು ಪ್ರಸ್ತಾಪ?

ನಮ್ಮ ಮುಂದಿನ ಹೋರಾಟ ಕುರಿತು ನಾವು ಪ್ಲಾನ್ ಮಾಡಿದ್ದೇವೆ. ಅದರಂತೆ ನಾನು ಸದ್ಯಕ್ಕೆ ಸೈಲೆಂಟ್ ಆಗುತ್ತೇನೆ. ಮುಂದೆ ನಾವು ಒಬ್ಬೊಬ್ಬರಾಗಿ ವೈಲೆಂಟ್ ಆಗುತ್ತಾ ಹೋಗುತ್ತೇವೆ ಎಂದ ಯತ್ನಾಳ್‌

BJP Core Committee Meeting Will be held in Bengaluru on December 7th grg

ಬೆಂಗಳೂರು(ಡಿ.07): ಆಂತರಿಕ ಭಿನ್ನಮತದ ಕರಿನೆರಳಿನ ನಡುವೆಯೇ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್‌ವಾಲ್ ಅವರ ನೇತೃತ್ವದಲ್ಲಿ ಪಕ್ಷ ಸಂಘಟನೆ ಬಲಪಡಿಸುವ ಸಂಬಂಧ ಶನಿವಾರ ಕೋರ್ ಕಮಿಟಿ ಸಭೆ ನಡೆಯಲಿದೆ. ಪಕ್ಷದ ಸದಸ್ಯತ್ವ ಅಭಿಯಾನ, ಸಂಘಟನಾ ಪರ್ವ ಅಭಿಯಾನ ಸೇರಿ ವಿವಿಧ ಕಾರ್ಯಕ್ರಮ ಗಳ ಪರಿಶೀಲನೆ ಜತೆಗೆ ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳಬೇಕಾದ ಕಾರ್ಯಕ್ರಮಗಳ ಕುರಿತಂತೆ ಚರ್ಚೆ ನಡೆಯಲಿದೆ.

ಜೊತೆಗೆ ನಮ್ಮ ನಾಯಕರ ವಿರುದ್ದ ಗುಪ್ತ ಪತ್ರಗಳನ್ನು ಕೇಂದ್ರ ನಾಯಕರಿಗೆ ಬರೆಯುತ್ತೇವೆ. ವಿಜಯೇಂದ್ರ ಸೇರಿ ಎಲ್ಲರ ಬಗ್ಗೆಯೂ ಬರೀತಿವಿ. ನಮ್ಮ ಟಾರ್ಗೆಟ್ ವಿಜಯೇಂದ್ರ ಅಲ್ಲವೇ ಅಲ್ಲ, ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಬೇಕು ಎನ್ನುವುದೇ ನಮ್ಮ ಟಾರ್ಗೆಟ್, ನಾವು ಅಧಿಕಾರಕ್ಕೆ ಬಂದಾಗ ಪ್ರಾಮಾಣಿಕರನ್ನು ಸಿಎಂ ಮಾಡುವ ಗುರಿಯಿದೆ. ಭ್ರಷ್ಟರು ಸಿಎಂ ಆಗಬಾರದು ಎನ್ನುವುದು ನಮ್ಮ ಉದ್ದೇಶ ಎಂದರು. 

ದೆಹಲಿಯಿಂದ ಶುಕ್ರವಾರ ಹುಬ್ಬಳ್ಳಿಗೆ ಆಗಮಿಸಿದ ಯತ್ನಾಳ್‌, ಸುದ್ದಿಗಾರರ ಜೊತೆ ಮಾತನಾಡಿದರು. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಒಪ್ಪಲ್ಲ ಎನ್ನುವ ರಮೇಶ್ ಜಾರಕಿಹೊಳಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, 'ಇನ್ನು ಮುಂದೆ ನಾನು ಸೈಲೆಂಟ್ ಆಗಿ ಇರುತ್ತೇನೆ. ರಮೇಶ್ ಜಾರಕಿಹೊಳಿಯವರು ವೈಲೆಂಟ್ ಆಗುತ್ತಾರೆ' ಎಂದರು. ನಮ್ಮ ಮುಂದಿನ ಹೋರಾಟ ಕುರಿತು ನಾವು ಪ್ಲಾನ್ ಮಾಡಿದ್ದೇವೆ. ಅದರಂತೆ ನಾನು ಸದ್ಯಕ್ಕೆ ಸೈಲೆಂಟ್ ಆಗುತ್ತೇನೆ. ಮುಂದೆ ನಾವು ಒಬ್ಬೊಬ್ಬರಾಗಿ ವೈಲೆಂಟ್ ಆಗುತ್ತಾ ಹೋಗುತ್ತೇವೆ ಎಂದರು. 

ನನ್ನ ಮೇಲೆ ಪ್ರೀತಿ ಇದೆ: 

ನನ್ನ ಮೇಲೆ ಹೈಕಮಾಂಡ್ ಗೆ ಯಾವಾಗಲೂ ಪ್ರೀತಿ ಇದ್ದೇ ಇದೆ. ಯತ್ನಾಳ್ ನನ್ನು ಮುಗಿಸುತ್ತೇವೆ ಎನ್ನುವವರಿಂದ ಏನೂ ಆಗಲ್ಲ. ಯಾರಿಂದಲೂ ನನಗೆ ಏನೂ ಮಾಡಲು ಆಗುವುದಿಲ್ಲ. ಯಾರಾರು ಉತ್ತರ ಕೊಡುತ್ತಾರೋ ನೋಡೋಣ. ಅವರೆಲ್ಲರಿಗೂ ಉತ್ತರ ಕೊಡಲು ನಾನು ಸಿದ್ದ. ನನಗೆ ಅಂಜಿಕೆಯಿಲ್ಲ, ಅಳುಕಿಲ್ಲ ಎಂದು ಹೇಳಿದರು. 

ಶಿಸ್ತು ಕ್ರಮ ಇಲ್ಲ: 

ದೆಹಲಿಯಿಂದ ಹಸನ್ಮುಖಿಯಾಗಿ ಬರುತ್ತಿದ್ದೇನೆ ಎಂಬುದನ್ನು ಅರ್ಥ ಮಾಡಿಕೊಳ್ಳಿ. ನನ್ನನ್ನು ಯಾರೂ ತರಾಟೆಗೆ ತೆಗೆದುಕೊಂಡಿಲ್ಲ. ದೆಹಲಿ ನಾಯಕರುನನಗೆ ಶಹಬಾಸ್ ಗಿರಿ ಕೊಟ್ಟಿದ್ದಾರೆ. ಹೈಕಮಾಂಡ್ ಕೊಟ್ಟ ನೋಟಿಸ್ ಗೆ ನಾನು ಉತ್ತರ ಕೊಟ್ಟಿದ್ದೇನೆ. ನನ್ನ ವಿರುದ್ಧ ಶಿಸ್ತು ಕ್ರಮದ ಪ್ರಶ್ನೆಯೇ ಇಲ್ಲ. ಮುಂದೆ ಒಳ್ಳೆಯ ಭವಿಷ್ಯವಿದೆ, ಪಕ್ಷದ ಪರ ಒಳ್ಳೆಯ ಕೆಲಸ ಮಾಡಿ ಎಂದು ಹೇಳಿದ್ದಾರೆ ಎಂದರು. 

ಪರ್ಮನೆಂಟ್ ಸೈಲೆಂಟ್: 

ಶಿಸ್ತು ಸಮಿತಿ ಅಧ್ಯಕ್ಷ ಮತ್ತು ರಾಜನಾಥ್ ಸಿಂಗ್‌ರನ್ನು ಭೇಟಿಯಾಗಿದ್ದು ಬಿಟ್ಟರೆ ಬೇರೆ ಯಾರನ್ನೂ ಭೇಟಿಯಾಗಿಲ್ಲ. ವಕ್ಸ್ ಕಾನೂನಿನ ಬಗ್ಗೆ ನಾವು ಹೆಚ್ಚು ಗಮನ ಕೊಟ್ಟಿದ್ದೇವೆ. ನನಗೆ ಪರ್ಮನೆಂಟ್ ಆಗಿ ಸೈಲೆಂಟ್ ಆಗಿರೋಕೆ ಹೇಳಿದ್ದಾರೆ. ಹೀಗಾಗಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮುಂದುವರಿಸುತ್ತೇವೆ ಎಂದು ಹೇಳಿದರು.

ಒಂದೇ ವಿಮಾನದಲ್ಲಿ ಬಂದ ಮುಖಂಡರು 

ದೆಹಲಿಯಿಂದ ಶಾಸಕ ಯತ್ನಾಳ್, ಲಕ್ಷ್ಮಣ ಸವದಿ, ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಈರಣ್ಣ ಕಡಾಡಿ ಎಲ್ಲರೂ ಒಂದೇ ವಿಮಾನದಲ್ಲಿ ಬಂದಿಳಿದರು. ಈ ವೇಳೆ ಮಾತನಾಡಿದ ಸವದಿ, ಯತ್ನಾಳ್ ಮತ್ತು ನನ್ನ ನಡುವೆ ರಾಜಕೀಯದ ಕುರಿತು ಯಾವುದೇ ಮಾತುಕತೆ ನಡೆದಿಲ್ಲ. ಅವರು ನಮ್ಮ ಪಕ್ಕದ ಜಿಲ್ಲೆಯವರು, ಹಾಗಾಗಿ ಕುಶಲೋಪರಿ ಮಾತನಾಡಿದ್ದೇವೆ. ನಮ್ಮ ಹಳೆಮನೆ, ಹೊಸಮನೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದರು.

ಯತ್ನಾಳ್‌ ಒಪ್ಪಿದ್ರೆ ಎಲ್ಲ ಸಮಸ್ಯೆಗಳು ಪರಿಹಾರ ನಮ್ಮ ಕುಟುಂಬದ ವಿರುದ್ಧ ಪದೇ ಪದೇ ಹೇಳಿಕೆ ನೀಡುತ್ತಿ ರುವ ಶಾಸಕ ಯತ್ನಾಳ್‌ರನ್ನು ಕರೆಸಿ ಮಾತನಾಡುವೆ. ಎಲ್ಲರಿಗೂ ಸ್ವಭಾವದಲ್ಲಿ ಒಂದಲ್ಲ ಒಂದು ವೀಕ್‌ನೆಸ್‌ ಇದ್ದೇ ಇರು ತ್ತದೆ. ಎಲ್ಲರೂ ಒಟ್ಟಾಗಿ ಪಕ್ಷ ಬಲಪಡಿಸುವತ್ತ ಗಮನ ಕೊಡಬೇಕು. ಈ ಕುರಿತು ನಾನು ಸಲಹೆ ನೀಡುತ್ತೇನೆ. ಯತ್ನಾಳ್ ಒಪ್ಪಿಕೊಂಡರೆ ಸಮಸ್ಯೆ ಬಗೆಹರಿಯುತ್ತದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. 

Latest Videos
Follow Us:
Download App:
  • android
  • ios