Asianet Suvarna News Asianet Suvarna News

ಪಕ್ಷದ ಸಂಘಟನೆಗಾಗಿ ಶ್ರದ್ಧೆಯಿಂದ ದುಡಿದಿದ್ದೇನೆ: ನಿರ್ಗಮಿತ ಬಿಜೆಪಿ ಅಧ್ಯಕ್ಷ ನಳಿನ್ ಕಟೀಲ್

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಶಾಸಕ ಬಿ. ವೈ.ವಿಜಯೇಂದ್ರ ಬುಧವಾರ ಅಧಿಕಾರವಹಿಸಿಕೊಳ್ಳಲಿದ್ದಾರೆ. ನಿರ್ಗಮಿತ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತೃ ಸಮಾನ ಪಕ್ಷದ ಸಂಘಟನೆಗಾಗಿ ಶ್ರದ್ಧೆಯಿಂದ ದುಡಿದಿದ್ದೇನೆ. ಎಂದು ನಿರ್ಗಮಿತ ಪತ್ರದಲ್ಲಿ ಹೇಳಿದ್ದು, ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನಳಿನ್ ಪತ್ರವೊಂದನ್ನು ಹಂಚಿಕೊಂಡಿದ್ದಾರೆ. 

Bjp Ex President Nalin Kumar Kateel Letter To Party Workers gvd
Author
First Published Nov 15, 2023, 10:41 AM IST

ಬೆಂಗಳೂರು (ನ.15): ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಶಾಸಕ ಬಿ. ವೈ.ವಿಜಯೇಂದ್ರ ಬುಧವಾರ ಅಧಿಕಾರವಹಿಸಿಕೊಳ್ಳಲಿದ್ದಾರೆ. ನಿರ್ಗಮಿತ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತೃಸಮಾನ ಪಕ್ಷದ ಸಂಘಟನೆಗಾಗಿ ಶ್ರದ್ಧೆಯಿಂದ ದುಡಿದಿದ್ದೇನೆ. ಎಂದು ನಿರ್ಗಮಿತ ಪತ್ರದಲ್ಲಿ ಹೇಳಿದ್ದು, ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನಳಿನ್ ಪತ್ರವೊಂದನ್ನು ಹಂಚಿಕೊಂಡಿದ್ದಾರೆ.  ಮಾತೃ ಸಮಾನವಾಗಿರುವ ನಮ್ಮ ಪಕ್ಷ ಮತ್ತು ಹಿರಿಯರು ಸಾಮಾನ್ಯ ಕಾರ್ಯಕರ್ತನಾದ ನನಗೆ ಪಕ್ಷದ ರಾಜ್ಯದ ಅತ್ಯುನ್ನತ ಜವಾಬ್ದಾರಿ ವಹಿಸಿದ ಈ 4 ವರ್ಷ 3 ತಿಂಗಳ ಅವಧಿಯಲ್ಲಿ ಈ ಹೊಣೆಗಾರಿಕೆಯನ್ನು ನಿಮ್ಮೆಲ್ಲರ ಸಹಕಾರದಿಂದ ಪರಿಪೂರ್ಣತೆಯಿಂದ ನಿರ್ವಹಿಸಿದ್ದೇನೆ. 

ಈ ಅವಧಿಯಲ್ಲಿ ಪೂರ್ಣ ಪ್ರಮಾಣದಲ್ಲಿ ಮಾರ್ಗದರ್ಶನ ಮಾಡಿರುವ ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜಿಯವರಿಗೆ, ಜವಾಬ್ದಾರಿ ಸ್ವೀಕರಿಸುವ ಸಂದರ್ಭದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಮತ್ತು ಈಗ ರಾಷ್ಟ್ರೀಯ ಗೃಹಸಚಿವರಾಗಿರುವ ಶ್ರೀ ಅಮಿತ್ ಶಾ ಅವರಿಗೆ, ಪಕ್ಷದ ಪ್ರಸ್ತುತ ರಾಷ್ಟ್ರಾಧ್ಯಕ್ಷರಾದ ಶ್ರೀ ಜೆ. ಪಿ. ನಡ್ಡಾ ಅವರಿಗೆ, ಹೆಜ್ಜೆಹೆಜ್ಜೆಗೂ ಮಾರ್ಗದರ್ಶನ ನೀಡುತ್ತಾ ಬಂದಿರುವ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಶ್ರೀ ಬಿ. ಎಲ್. ಸಂತೋಷ್ ಜಯವರಿಗೆ, ನಮ್ಮ ಪಕ್ಷದ ಶಕ್ತಿ ಯಡಿಯೂರಪ್ಪನವರಿಗೆ, ಪಕ್ಷದ ಎಲ್ಲಾ ರಾಷ್ಟ್ರೀಯ ಮತ್ತು ರಾಜ್ಯ ಮುಖಂಡರುಗಳಿಗೆ, ಪಕ್ಷದ ರಾಜ್ಯ ಪದಾಧಿಕಾರಿಗಳಿಗೆ, ಮೋರ್ಚಾಗಳ ಮುಖಂಡರುಗಳಿಗೆ ಹಾಗೂ ವಿಶೇಷವಾಗಿ ನಮ್ಮ ಪಕ್ಷದ ಎಲ್ಲಾ ದೇವದುರ್ಲಭ ಕಾರ್ಯಕರ್ತ ಬಂಧುಗಳಿಗೆ ಧನ್ಯವಾದಗಳು. 

ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ವಿಜಯೇಂದ್ರ ಜೊತೆ ಪ್ರವಾಸ: ನಳಿನ್‌ ಕಟೀಲ್‌

ಈ ಅವಧಿಯಲ್ಲಿ ಕಾಯಾ, ವಾಚಾ, ಮನಸಾ ಪಕ್ಷದ ಸೇವೆ ಮಾಡುವ ಸಂದರ್ಭದಲ್ಲಿ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ನನ್ನ ಕೈ ಹಿಡಿದು ಮುನ್ನಡೆಸಿದ ಎಲ್ಲಾ ಪ್ರೀತಿಪಾತ್ರರಿಗೆ ಧನ್ಯವಾದಗಳು. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿಯ ಕೃಪೆ, ದೈವದೇವರುಗಳ ಅನುಗ್ರಹದಿಂದ ಪಕ್ಷದ ಬೆಳವಣಿಗೆಗೆ ನನ್ನ ಸೇವೆ ನಿರಂತರವಾಗಿರಲಿದೆ. ಇನ್ನು ಮುಂದೆಯೂ ಸರ್ವರ ಸಹಕಾರ, ಪ್ರೀತಿ, ವಿಶ್ವಾಸ ಬಯಸುವ ನಿಮ್ಮ ನಳಿನ್ ಕುಮಾರ್ ಕಟೀಲ್ ಎಂದು  ಬರೆದಕೊಂಡಿದ್ದಾರೆ. ಇನ್ನು ನಳಿನ್ ಆಗಸ್ಟ್ 20, 2019ರಂದು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದರು. 2023ರ ವಿಧಾನಸಭಾ ಚುನಾವಣೆ ಸೇರಿದಂತೆ ಹಲವು ಚುನಾವಣೆಗಳನ್ನು ಕಟೀಲ್ ಸಮರ್ಥವಾಗಿ ನಿಭಾಯಿಸಿದ್ದರು.
 

Follow Us:
Download App:
  • android
  • ios