ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಸ್ವಾಮಿ ವಿವೇಕಾನಂದರಿಗೆ ಅವಮಾನ; ಸಿಎಂ ಸಿದ್ದರಾಮಯ್ಯ ಆರೋಪ
ಕರ್ನಾಟಕ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಸ್ವಾಮಿ ವಿವೇಕಾನಂದರಿಗೆ ಬಿಜೆಪಿ ನಾಯಕರು ಅವಮಾನ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿಡಿಯೋ ಸಮೇತ ಆರೋಪ ಮಾಡಿದ್ದಾರೆ.
ಬೆಂಗಳೂರು (ಜು.04): ಬಿಜೆಪಿ ಮತ್ತು ಸಂಘ ಪರಿವಾರದವರು ತೋರುಗಾಣಿಕೆಗಾಗಿ ವಿವೇಕಾನಂದರನ್ನು ಎಷ್ಟೇ ಆರಾಧಿಸಿದರೂ, ಮುದ್ದಾಡಿದರೂ ಅವರ ಆಂತರ್ಯದೊಳಗೆ ವಿವೇಕಾನಂದರ ಬಗ್ಗೆ ಎಷ್ಟು ಅಸಹನೆ ಇದೆ ಎಂಬುದಕ್ಕೆ ಇಂದಿನ ರಾಜ್ಯ ಬಿಜೆಪಿ ಕಾರ್ಯಕಾರಣಿ ವಿಶೇಷ ಸಭೆಯಲ್ಲಿ ನಡೆದಿರುವ ಘಟನೆ ಸಾಕ್ಷಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.
ಕರ್ನಾಟಕ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ನಡೆದ ಸ್ವಾಮಿ ವಿವೇಕಾನಂದರಿಗೆ ದೊಡ್ಡ ಅವಮಾನ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ವಿಡಿಯೋ ಸಮೇತವಾಗಿ ಪೋಸ್ಟ ಹಂಚಿಕೊಂಡು ವೈರಲ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ ಹಂಚಿಕೊಂಡಿರುವ ಸಿದ್ದರಾಮಯ್ಯ ಅವರು, 'ಬಿಜೆಪಿ ಮತ್ತು ಸಂಘ ಪರಿವಾರದವರು ತೋರುಗಾಣಿಕೆಗಾಗಿ ವಿವೇಕಾನಂದರನ್ನು ಎಷ್ಟೇ ಆರಾಧಿಸಿದರೂ, ಮುದ್ದಾಡಿದರೂ ಅವರ ಆಂತರ್ಯದೊಳಗೆ ವಿವೇಕಾನಂದರ ಬಗ್ಗೆ ಎಷ್ಟು ಅಸಹನೆ ಇದೆ ಎಂಬುದಕ್ಕೆ ಇಂದಿನ ರಾಜ್ಯ ಬಿಜೆಪಿ ಕಾರ್ಯಕಾರಣಿ ವಿಶೇಷ ಸಭೆಯಲ್ಲಿ ನಡೆದಿರುವ ಘಟನೆ ಸಾಕ್ಷಿ.
ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನ್ ದಾಸ್ ಅಗರ್ವಾಲ್ ಅವರು ವೇದಿಕೆಯ ಮೇಲೆ ಕಾರ್ಯಕ್ರಮದಲ್ಲಿ ವಿವೇಕಾನಂದರ ಭಾವಚಿತ್ರ ಯಾಕಿದೆ? ಎಂದು ಪ್ರಶ್ನಿಸುವ ಮೂಲಕ ಮೂಲಕ ಬಹಿರಂಗವಾಗಿಯೇ ತಮ್ಮ ಅಸಮಧಾನ ಹೊರಹಾಕಿದ್ದಾರೆ. ವಿವೇಕಾನಂದರ ಪುಣ್ಯಸ್ಮರಣೆಯ ದಿನದಂದೇ ಅವರನ್ನು ಅವಮಾನಿಸುವ ಮೂಲಕ ಬಿಜೆಪಿ ಇಡೀ ಹಿಂದೂ ಸಮಾಜಕ್ಕೆ ಅವಮಾನಗೈದಿದೆ ಎಂದು ಬರೆದುಕೊಂಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಕಳೆದುಕೊಂಡಿದ್ದು 55 ಕೋಟಿ ರೂ. ಜಮೀನು, ಅವರಿಗೆ ಸಿಕ್ಕಿದ್ದು 15 ಕೋಟಿ ಆಸ್ತಿ
ಮುಂದುವರೆದು, ಸಂಘಪರಿವಾರದವರೂ ವಿವೇಕಾನಂದರನ್ನು ಎಷ್ಟೇ ಹೊತ್ತು ಮುದ್ದಾಡಿದರೂ ಅವರು ಇಂದಿಗೂ ಬಿಜೆಪಿಗೆ ಪೂರ್ಣವಾಗಿ ದಕ್ಕಿಲ್ಲ, ಮುಂದೆ ದಕ್ಕುವುದೂ ಇಲ್ಲ. ವಿವೇಕಾನಂದರು ದ್ವೇಷದ ಬದಲಾಗಿ ಸಹೋದರತ್ವವನ್ನು, ಮೌಢ್ಯದ ಬದಲಾಗಿ ವೈಜ್ಞಾನಿಕ ಚಿಂತನೆಯನ್ನು, ಕೋಮುಗಲಭೆಗಳಿಗೆ ಬದಲಾಗಿ ಸರ್ವಧರ್ಮ ಸಹಬಾಳ್ಬೆಯನ್ನು ಹಿಂದೂ ಧರ್ಮದ ನೆಲೆಗಟ್ಟಿನಲ್ಲಿ ಪ್ರಚುಪಡಿಸಿದವರು. ಜಾಗತಿಕ ಸರ್ವಧರ್ಮ ಸಮ್ಮೇಳನದಲ್ಲಿ ಜಗತ್ತಿನ ನೂರಾರು ದೇಶಗಳಿಂದ ಆಗಮಿಸಿದ್ದ ಹತ್ತು ಹಲವು ಧರ್ಮ, ಸಂಸ್ಕೃತಿ, ಭಾಷೆಯ ಜನರನ್ನು ಮೈ ಡಿಯರ್ ಬ್ರದರ್ಸ್ ಎಂಡ್ ಸಿಸ್ಟರ್ಸ್ (ನನ್ನ ಪ್ರೀತಿಯ ಸಹೋದರ – ಸಹೋದರಿಯರೇ ) ಎಂದು ಸಂಬೋಧಿಸಿದ್ದ ವಿವೇಕಾನಂದರು, ವಿಶ್ವಮಾನವ ಚಿಂತನೆಯೇ ಹಿಂದೂ ಧರ್ಮವೆಂದು ಹೇಳಿದವರು.
ಆದರೆ, ಬಿಜೆಪಿ ನಾಯಕರು ಬಾಯಿ ತೆರೆದರೆ ಹೊಡಿ, ಬಡಿ, ಕೊಲ್ಲು ಎಂದು ಹಿಂಸೆಗೆ ಪ್ರಚೋದನೆ ನೀಡುತ್ತಾರೆ. ಧರ್ಮ ರಕ್ಷಣೆಯ ಹೆಸರಲ್ಲಿ ದ್ವೇಷ ಬಿತ್ತುವ ಬಿಜೆಪಿಗೆ ವಿವೇಕಾನಂದರ ಈ ಚಿಂತನೆಗಳು ರುಚಿಸದು. ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯೂ ಹೊರತಾಗಿಲ್ಲ. ಇದೇ ಕಾರಣಕ್ಕೆ ಸಾವಿರಾರು ಜನರು ತುಂಬಿದ್ದ ಸಭೆಯಲ್ಲೇ ವಿವೇಕಾನಂದರ ಫೋಟೊ ಯಾಕಿದೆ? ಎಂದು ಕೇಳುವ ಧೈರ್ಯವನ್ನು ರಾಧಾಮೋಹನ್ ದಾಸ್ ಅವರು ಮಾಡಿದ್ದಾರೆ.
ಪಾರ್ವತಿ ಸಿದ್ದರಾಮಯ್ಯಗೆ 14 ಸೈಟು ಕೊಟ್ಟ ಮೂಡಾ ನಿಯಮಗಳ ಮಾಹಿತಿ ಬಿಚ್ಚಿಟ್ಟ ಸಿಎಂ ಆಪ್ತ ಎಂ. ಲಕ್ಷ್ಮಣ್!
ಓರ್ವ ಸಂತನಾಗಿ, ದಾರ್ಶನಿಕರಾಗಿ, ಮಹಾನ್ ಮಾನವತಾವಾದಿಯಾಗಿ ಸರ್ವರಿಂದಲೂ ಗೌರವಿಸಲ್ಪಡುವ, ಅನುಸರಿಸಲ್ಪಡುವ ವಿವೇಕಾನಂದರಿಗೆ ಅವಮಾನ ಮಾಡಿರುವ ಬಿಜೆಪಿ ಪಕ್ಷ ಅದೇ ವೇದಿಕೆಯಲ್ಲೇ ಬಹಿರಂಗ ಕ್ಷಮೆ ಕೇಳಬೇಕು ಎಂದು ಆಗ್ರಹಿಸುತ್ತೇನೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.