ಸಿದ್ದರಾಮಯ್ಯನ ಬ್ರಹ್ಮಾಂಡ ಭ್ರಷ್ಟಾಚಾರ ಬಿಚ್ಚಿಟ್ಟ ಬಿಜೆಪಿ! ಮುಡಾದಲ್ಲಿ ಭಾರಿ ಅವ್ಯವಹಾರ!
ರಾಜ್ಯ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಎಸಗಿದ್ದಾರೆ ಎಂದು ಬಿಜೆಪಿ ಆರೋಪ ಮಾಡಿದೆ.
ಮೈಸೂರು (ಮೇ 08): ರಾಜ್ಯದ ಸಾಂಸ್ಕೃತಿ ರಾಜಧಾನಿ ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ- (ಮುಡಾ)ದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾರಿ ಬ್ರಹ್ಮಾಂಡ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಬಿಜೆಪಿ ವಕ್ತಾರ ಎಂ.ಜಿ. ಮಹೇಶ್ ಸಾಕ್ಷಿ ಸಮೇತ ಆರೋಪವನ್ನು ಮಾಡಿದ್ದಾರೆ.
ರಾಜ್ಯದಲ್ಲಿ ಮತದಾನಕ್ಕೆ ಇನ್ನು ಎರಡೇ ದಿನಗಳು ಬಾಕಿಯಿವೆ. ಇಂತಹ ಸಂದರ್ಭದಲ್ಲಿ ರಾಜ್ಯಾದ್ಯಂತ ಹಣವನ್ನು ಹಂಚಲು ಎಲ್ಲಿ ಸಂಗ್ರಹ ಮಾಡಲಾಗಿದೆ ಎಂಬ ಮಾಹಿತಿಯನ್ನು ಆಧರಿಸಿ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ದಾಳಿ ಮಾಡುತ್ತಿದ್ದಾರೆ. ಆದರೆ, ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ನಾಯಕರು ತಮ್ಮ ವಿರುದ್ಧ ಇರುವ ಅಭ್ಯರ್ಥಿಗಳು ಮಾಡಿರುವ ತಪ್ಪುಗಳನ್ನು ಹುಡುಕಿ ಜನರ ಮುಂದಿಡುವ ಪ್ರಯತ್ನ ಮಾಡುತ್ತಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (Mysuru Urban Development Authority- MUDA) ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪತ್ನಿ ಪಾರ್ವತಿ ಅವರ ಹೆಸರಿನಲ್ಲಿ ನಿಯಮ ಬಾಹಿರವಾಗಿ 14 ನಿವೇಶನಗಳನ್ನು ಪಡೆದಿದ್ಧಾರೆ ಎಂದು ಆರೋಪ ಮಾಡಿದ್ದಾರೆ.
ಒಂದು ಲಿಂಕ್ ಕ್ಲಿಕ್ ಮಾಡಿ: ಮತದಾರರ ಪಟ್ಟಿಯಲ್ಲಿ ಹೆಸರು ಹುಡುಕಿ, ಮತಗಟ್ಟೆಗೆ ಹೋಗಿ..!
ದೇವನೂರು ಬಡಾವಣೆಯ ನಿವೇಶನಕ್ಕೆ ಬದಲಿಯಾಗಿ ವಿಜಯನಗದಲ್ಲಿ ನಿವೇಶನ: ಮೈಸೂರಿನ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ರಾಜ್ಯ ಬಿಜೆಪಿ ವಕ್ತಾರ ಎಂ ಜಿ ಮಹೇಶ್, ಸಿದ್ಧರಾಮಯ್ಯನವರ ಪತ್ನಿಗೆ ಸೇರಿದ ಜಮೀನನ್ನು ಮುಡಾ 50:50 ರ ಅನುಪಾತದಲ್ಲಿ ಪಡೆದುಕೊಂಡಿದೆ. ಪಾರ್ವತಿಯವರಿಗೆ ಸೇರಿದ್ದ ದೇವನೂರು ಬಡಾವಣೆಯಲ್ಲಿದ್ಧ ಜಮೀನನ್ನು 50:50 ರ ಅನುಪಾತದಲ್ಲಿ ಮುಡಾ ವಶಕ್ಕೆ ಪಡೆದುಕೊಂಡಿದೆ. ಇದಕ್ಕೆ ಪ್ರತಿಯಾಗಿ ಬದಲಿ ನಿವೇಶನಗಳನ್ನು ವಿಜಯನಗರ ಬಡಾವಣೆಯಲ್ಲಿ ನೀಡಲಾಗಿದೆ.
ಕಾನೂನು ನಿಯಮಾವಳಿ ಉಲ್ಲಂಘನೆ: ಕಾನೂನಿನ ನಿಯಮದ ಪ್ರಕಾರ ದೇವನೂರು ಬಡಾವಣೆಯಲ್ಲಿ ಸಿದ್ದರಾಮಯ್ಯ ಅವರ ಪತ್ನಿಯ ಹೆಸರಿನಲ್ಲಿದ್ದ 14 ನಿವೇಶನಗಳಿಗೆ ಬದಲಿಯಾಗಿ ಇದೇ ಬಡಾವಣೆಯ ಬೇರೊಂದು ಸ್ಥಳದಲ್ಲಿ ಬದಲಿ ನಿವೇಶನಗಳನ್ನು ನೀಡಬೇಕಿತ್ತು. ಆದರೆ ದೇವನೂರು ಬಡಾವಣೆ ಬದಲು ವಿಜಯನಗರ ಬಡಾವಣೆಯಲ್ಲಿ ಪಾರ್ವತಿಯವರು ಬದಲಿ ನಿವೇಶನಗಳನ್ನು ಪಡೆದಿದ್ದಾರೆ. ಮುಡಾದಲ್ಲಿ ಡಿ.ಧ್ರುವಕುಮಾರ್ ಮುಡಾದ ಅಧ್ಯಕ್ಷರಾಗಿದ್ಧ ಅವಧಿಯಲ್ಲಿ ಪ್ರಭಾವ ಬೀರಿ ಈ ರೀತಿ ಮಾಡಲಾಗಿದೆ. ಎಲ್ಲವನ್ನೂ ಅಧಿಕಾರಿಗಳ ಮಟ್ಟದಲ್ಲಿ ಒತ್ತಡ ಹಾಕಿ ಮಾಡಿಸಿಕೊಳ್ಳಲಾಗಿದೆ ಎಂದು ಆರೋಪಿಸಿದ್ದಾರೆ.
ಬಿಜೆಪಿ ಅಧಿಕಾರಕ್ಕೆ ಬಂದನಂತರ ತನಿಖೆ: ರಾಜ್ಯದಲ್ಲಿ ಸಿದ್ದರಾಮಯ್ಯ ತಮ್ಮ ಅಧಿಕಾರ ಬಳಸಿಕೊಂಡು ಮಾಡಿರುವ ಭ್ರಷ್ಟಾಚಾರಕ್ಕೆ ಮುಡಾದಲ್ಲಿ ಮಾಡಿರುವ ನಿವೇಶನ ಹಂಚಿಕೆ ಅವ್ಯವಹಾರವೇ ಸಾಕ್ಷಿಯಾಗಿದೆ. ಚುನಾವಣೆ ಮುಗಿದು ನಮ್ಮ ಸರ್ಕಾರ ಬಂದ ಬಳಿಕ ಈ ಬಗ್ಗೆ ಸಮಗ್ರವಾದ ತನಿಖೆ ನಡೆಸಲಾಗುವುದು ಎಂದು ರಾಜ್ಯ ಬಿಜೆಪಿ ವಕ್ತಾರ ಎಂ.ಜಿ. ಮಹೇಶ್ ಮೈಸೂರಿನಲ್ಲಿ ತಿಳಿಸಿದ್ದಾರೆ.
ಡಿಕೆಶಿ- ಸಿದ್ದರಾಮಯ್ಯ ಮನದಾಳದ ಮಾತು: ಸ್ಪೋಟಕ ಮಾಹಿತಿ ಬಿಚ್ಚಿಟ್ಟ ದಿಗ್ಗಜರು!
ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಾಸ್ತವ್ಯ ಬದಲು: ವರುಣ ಕ್ಷೇತ್ರ ಗೆಲ್ಲಲು ವಾಸ್ತವ್ಯ ಬದಲಾಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ. ಮೋದಿ ಹಾಗೂ ಅಮಿತ್ ಶಾ ಪ್ರಚಾರ ಮುಗಿಸಿ ತೆರಳಿದ ಬಳಿಕ ಅಲರ್ಟ್ ಆಗಿದ್ದಾರೆ. ಖಾಸಗಿ ಹೋಟೆಲ್‌ನಲ್ಲಿ ಕುಲಿತು ವರುಣ ಕ್ಷೇತ್ರದ ಗೆಲುವಿಗೆ ತಂತ್ರಗಾರಿಕೆ. ಕಳೆದ ಮೂರು ದಿನಗಳಿಂದ ಮೈಸೂರಿನಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ರಾಮಕೃಷ್ಣ ನಗರದಲ್ಲಿರುವ ಮನೆಯಲ್ಲಿ ವಾಸ್ತವ್ಯ ಹೂಡಿಲ್ಲ. ವರುಣ ಕ್ಷೇತ್ರದ ಬೂತ್ ಮಟ್ಟದ ಕಾರ್ಯಕರ್ತರನ್ನ ಹೋಟೆಲ್ ಕರೆಸಿಕೊಂಡು ಪ್ರತ್ಯೇಕವಾಗಿ ಮಾತುಕತೆ ಮಾಡಿದ್ದಾರೆ. ವರುಣ ಕ್ಷೇತ್ರದ ಪ್ರಮುಖ ಮುಖಂಡರ ಜೊತೆ ಪ್ರತ್ಯೇಕವಾಗಿ ಸಮಾಲೋಚನೆ ಮಾಡಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಆದ ತಪ್ಪುಗಳು ಮರಕಳಿಸದಂತೆ ಎಚ್ಚರಿಕೆ ವಹಿಸಿದ್ದಾರೆ.