ನಾನು ಯಾರಿಗೂ ಅನ್ಯಾಯ ಮಾಡಿಲ್ಲ. ನಮಗೆ ಆಗಿರುವ ನೋವು ಏನು ಅಂತ ತೋರಿಸಲು ಕಾಂಗ್ರೆಸ್ ಸೇರ್ಪಡೆ ಆಗಿದ್ದೇನೆ. ಒಂದು ರೀತಿಯಲ್ಲಿ ಬಿಜೆಪಿಯವರೇ ನಾನು ಕಾಂಗ್ರೆಸ್ ಸೇರ್ಪಡೆ ಆಗುವಂತೆ ಮಾಡಿದರು: ಮಾಜಿ ಶಾಸಕ ರಾಮಪ್ಪ ಲಮಾಣಿ 

ಬೆಂಗಳೂರು(ಅ.13): ಬಿಜೆಪಿಯಲ್ಲಿ ನಮಗಾಗಿರುವ ನೋವಿನಿಂದ ಆ ಪಕ್ಷವನ್ನು ತೊರೆದು ಯಾವುದೇ ಷರತ್ತು ಇಲ್ಲದೇ ಕಾಂಗ್ರೆಸ್‌ ಪಕ್ಷ ಸೇರುತ್ತಿದ್ದೇವೆ ಎಂದು ಮಾಜಿ ಶಾಸಕ ರಾಮಪ್ಪ ಲಮಾಣಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾರಿಗೂ ಅನ್ಯಾಯ ಮಾಡಿಲ್ಲ. ನಮಗೆ ಆಗಿರುವ ನೋವು ಏನು ಅಂತ ತೋರಿಸಲು ಕಾಂಗ್ರೆಸ್ ಸೇರ್ಪಡೆ ಆಗಿದ್ದೇನೆ. ಒಂದು ರೀತಿಯಲ್ಲಿ ಬಿಜೆಪಿಯವರೇ ನಾನು ಕಾಂಗ್ರೆಸ್ ಸೇರ್ಪಡೆ ಆಗುವಂತೆ ಮಾಡಿದರು. ಜಗದೀಶ್ ಶೆಟ್ಟರ್ ಹಾಗೂ ಡಿ.ಕೆ. ಶಿವಕುಮಾರ್ ಅವರು ಉತ್ತರ ಕರ್ನಾಟಕ ಭಾಗದ ಅನೇಕ ನಾಯಕರಿಗೆ ಗಾಳ ಹಾಕಿದ್ದು, ಮುಂದಿನ ದಿನಗಳಲ್ಲಿ ಅನೇಕರು ಕಾಂಗ್ರೆಸ್ ಸೇರಲಿದ್ದಾರೆ. ಈ ಪಕ್ಷದ ನಾಯಕರು ಯಾರನ್ನು ಅಭ್ಯರ್ಥಿಯನ್ನಾಗಿ ಮಾಡುತ್ತಾರೋ ಅವರನ್ನು ಗೆಲ್ಲಿಸಲು ನಾವು ಪ್ರಾಮಾಣಿಕವಾಗಿ ಶ್ರಮಿಸುತ್ತೇವೆ ಎಂದರು.

ಬಿಜೆಪಿ ತೊರೆಯುವವರೆಲ್ಲರೂ ವೇಸ್ಟ್‌ ಬಾಡಿಗಳು: ಶಾಸಕ ಬಸನಗೌಡ ಯತ್ನಾಳ

ಕಾಂಗ್ರೆಸ್‌ ಬಲಪಡಿಸಲು ನಾನು ಕೆಲಸ ಮಾಡುತ್ತೇನೆ. ರಾಜ್ಯದಲ್ಲಿ ಮುಂದಿನ ಹತ್ತು ವರ್ಷ ಕಾಂಗ್ರೆಸ್‌ ಆಡಳಿತ ನಡೆಸಬೇಕು. ಅದಕ್ಕೆ ನಾವು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇವೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ಅನೇಕ ಶಾಸಕರು ಕೇವಲ 1500 ಕ್ಕಿಂತ ಕಡಿಮೆ ಮತಗಳ ಅಂತರದಿಂದ ಗೆದ್ದಿದ್ದಾರೆ. ಇಲ್ಲದಿದ್ದರೆ, ಬಿಜೆಪಿ 40 ಸ್ಥಾನಗಳಿಗೆ ನಿಲ್ಲುತ್ತಿತ್ತು. ಮುಂದಿನ ದಿನಗಳಲ್ಲಿ ಬಿಜೆಪಿ ಇನ್ನಷ್ಟು ಧೂಳಿಪಟವಾಗಲಿದೆ ಎಂದು ಹೇಳಿದರು.