ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಶ್ರಮಿಸಿ: ರೂಪಾಲಿ ನಾಯ್ಕ
ದೇಶದ ಉಜ್ವಲ ಭವಿಷ್ಯಕ್ಕಾಗಿ ಬಿಜೆಪಿ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸುವಂತಾಗಬೇಕು. ಅದಕ್ಕಾಗಿ ಕಾರ್ಯಕರ್ತರು ಹಗಲಿರುಳು ದುಡಿಯಬೇಕು: ಮಾಜಿ ಶಾಸಕಿ ರೂಪಾಲಿ ನಾಯ್ಕ
ಕಾರವಾರ(ಜು.17): ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯಾಗುವಂತೆ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ ಹೇಳಿದರು. ನಗರದ ಮುರಳೀಧರ ಮಠದಲ್ಲಿ ಮಹಿಳಾ ಮೋರ್ಚಾದ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಲೋಕಸಭಾ ಚುನಾವಣೆಗಾಗಿ ನಾವು ಕೇಂದ್ರ ಸರ್ಕಾರದ ಸಾಧನೆಯ ಕರಪತ್ರವನ್ನು ಮನೆ ಮನೆಗೆ ನೀಡುವ ಮೂಲಕ ಪ್ರತಿಯೊಂದು ಬೂತ್ ಹಾಗೆಯೇ ಪ್ರತಿಯೊಂದು ವಾರ್ಡ್‌ನ ಮತದಾರರನ್ನು ಸಂಪರ್ಕಿಸಿ, ಪ್ರಧಾನಿ ನರೇಂದ್ರ ಮೋದಿ ಮಾಡಿದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನರಲ್ಲಿ ಮನದಟ್ಟು ಆಗುವ ಹಾಗೆ ಹೇಳಬೇಕು ಎಂದರು.
ಕಾಂಗ್ರೆಸ್ ಸರ್ಕಾರಕ್ಕೆ ಆಯುಷ್ಯ ಇಲ್ಲ, ಜನವರಿಗೆ ಸರ್ಕಾರ ಬೀಳುವುದು ಖಚಿತ: ಸಂಸದ ಮುನಿಸ್ವಾಮಿ
ದೇಶದ ಉಜ್ವಲ ಭವಿಷ್ಯಕ್ಕಾಗಿ ಬಿಜೆಪಿ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸುವಂತಾಗಬೇಕು. ಅದಕ್ಕಾಗಿ ಕಾರ್ಯಕರ್ತರು ಹಗಲಿರುಳು ದುಡಿಯಬೇಕು ಎಂದು ಹೇಳಿದರು.
ಕಾರವಾರ ಅಂಕೋಲಾ ಕ್ಷೇತ್ರದ ವಿಧಾನಸಭಾ ಚುನಾವಣೆಯಲ್ಲಿ ನಾನು ಮಾಡಿದ ನನ್ನ ಕ್ಷೇತ್ರದ ಅಭಿವೃದ್ಧಿ ಕೆಲಸಗಳ ಬಗ್ಗೆ ಹೇಳುವ ಮೂಲಕ ಅವರಿಗೆ ಮನೆ ಮನೆಗೆ ಹೋಗಿ ಕರಪತ್ರವನ್ನು ನೀಡಿ ನನ್ನ ಕ್ಷೇತ್ರದಲ್ಲಿ 75 ಸಾವಿರಕ್ಕೂ ಅಧಿಕ ಮತಗಳನ್ನು ಪಡೆಯುವ ಮೂಲಕ ಪಕ್ಷದ ಕಾರ್ಯವನ್ನು ಚೆನ್ನಾಗಿ ಮಾಡಿದ್ದೀರಿ. ನಾನು ಕೆಲವೇ ಮತದ ಅಂತರದಿಂದ ಸೋತರೂ ಕಾರ್ಯಕರ್ತರು ಮಾಡಿದ ಸೇವೆಗೆ ಚಿರಋುಣಿ ಆಗಿದ್ದೇನೆ ಎಂದರು.
ಮುಂದಿನ ದಿನಗಳಲ್ಲಿ ಬರುವ ತಾಪಂ, ಜಿಪಂ ಹಾಗೂ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಾವು ಪಕ್ಷದ ಸಲುವಾಗಿ ನಿರಂತರ ಕಾರ್ಯವನ್ನು ಮಾಡಬೇಕು. ಜನರ ಮಧ್ಯೆ ಇದ್ದು ಜನರ ಕಷ್ಟಸುಖದಲ್ಲಿ ಭಾಗಿಯಾಗಿರಬೇಕು ಎಂದು ತಿಳಿಸಿದರು. ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರು, ಪದಾದಿಕಾರಿಗಳು, ನಗರಸಭೆ ಸದಸ್ಯರು, ಗ್ರಾಪಂ ಸದಸ್ಯರು ಪಾಲ್ಗೊಂಡಿದ್ದರು.