ಕಾಂಗ್ರೆಸ್‌ ತಪ್ಪಿನಿಂದಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಎಚ್‌.ಡಿ.ರೇವಣ್ಣ

*   ಕೋಮುವಾದಿ ಪಕ್ಷ ದೂರ ಇಡಲು ಜಾತ್ಯ​ತೀ​ತ ಪಕ್ಷ ಒಗ್ಗೂಡುವುದು ಅಗ​ತ್ಯ 
*   ಚುನಾವಣೆ ಬಂದಾಗ ಮಾತ್ರ ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ ಬಗ್ಗೆ ಹೆಚ್ಚು ಪ್ರೀತಿ 
*   ಜೆಡಿಎಸ್‌ ಅಲ್ಪಸಂಖ್ಯಾತ ಅಭ್ಯರ್ಥಿ ಘೋಷಿಸಿದ್ದಕ್ಕೆ ಅಸಮಾಧಾನ ತೋರುತ್ತಿರುವ ಕಾಂಗ್ರೆಸ್ಸಿಗರು
 

BJP Got Power For Congress Mistaken in Karnataka says HD Revanna grg

ಸಿಂದಗಿ(ಅ.23): ಕಾಂಗ್ರೆಸ್‌ನ ತಪ್ಪಿನಿಂದಾಗಿ ರಾಜ್ಯದಲ್ಲಿ ಬಿಜೆಪಿ(BJP) ಸರ್ಕಾರ ಅಧಿಕಾರಕ್ಕೆ ಬಂದಿದೆ. ಈ ಬಗ್ಗೆ ಕಾಂಗ್ರೆಸ್‌ ಆತ್ಮಾವಲೋಕನ ಮಾಡಿಕೊಳ್ಳಬೇಕು. ಕೋಮುವಾದಿ ಪಕ್ಷವನ್ನು ದೂರ ಇಡಲು ಜಾತ್ಯ​ತೀ​ತ ಪಕ್ಷ ಒಗ್ಗೂಡುವುದು ಅಗ​ತ್ಯ ಎಂಬುದು ನಮ್ಮ ಆಶಯ ಎಂದು ಮಾಜಿ ಸಚಿವ ಎಚ್‌.ಡಿ.ರೇವಣ್ಣ(HD Revanna) ಹೇಳಿದ್ದಾರೆ. 

ತಾಲೂಕಿನಲ್ಲಿ ಜೆಡಿಎಸ್‌(JDS) ಅಭ್ಯರ್ಥಿ ನಾಜಿಯಾ ಅಂಗಡಿ ಪರ ಪ್ರಚಾರ(Campaign) ನಡೆಸಿದ ಅವರು, ಕಾಂಗ್ರೆಸ್‌(Congress) ಇಬ್ಬಗೆ ನೀತಿಯಿಂದ ದೇಶದಲ್ಲಿ ಕಾಂಗ್ರೆಸ್‌ ನೆಲಕಚ್ಚಿದೆ ಎಂದು ತಿಳಿಸಿದ್ದಾರೆ. 

ಚುನಾವಣೆ(Election) ಬಂದಾಗ ಮಾತ್ರ ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ(Minorities) ಬಗ್ಗೆ ಹೆಚ್ಚು ಪ್ರೀತಿ ಪ್ರಾರಂಭವಾಗುತ್ತದೆ. ಈ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರ ಮತಗಳು(Vote) ಹೆಚ್ಚಿವೆ. ಕಾಂಗ್ರೆಸ್‌ ಆ ಸಮುದಾಯದಿಂದಲೇ ಒಬ್ಬರನ್ನು ಅಭ್ಯರ್ಥಿಯನ್ನಾಗಿ ಘೋಷಿಸಬಹುದಿತ್ತು. ಆದರೆ, ಜೆಡಿಎಸ್‌ ಅಲ್ಪಸಂಖ್ಯಾತ ಅಭ್ಯರ್ಥಿ ಘೋಷಿಸಿದ್ದಕ್ಕೆ ಅಸಮಾಧಾನ ತೋರುತ್ತಿದ್ದಾರೆ. ರಾಜ್ಯದಲ್ಲಿ(Karnataka) ಈಗ ಇರುವುದು ಕಾಂಗ್ರೆಸ್‌ ಪಕ್ಷದಲ್ಲಿರುವುದು ಡುಪ್ಲಿಕೇಟ್‌ ಕಾಂಗ್ರೆಸ್ಸಿಗರು, ಅವರಿಂದಲೇ ಕಾಂಗ್ರೆಸ್‌ಗೆ ಈ ಸ್ಥಿತಿ ಬಂದಿದೆ ಎಂದರು.

ಎಲೆಕ್ಷನ್‌ ಬಂದಾಗ ಮಾತ್ರ ಬಿಎಸ್‌ವೈಗೆ ಮುಸ್ಲಿಮರು ನೆನಪಾಗ್ತಾರೆ: ಖಾದರ್‌

ಹಾನಗಲ್‌ ಕ್ಷೇತ್ರದಲ್ಲಿರುವ ಅಭ್ಯರ್ಥಿಗಳು: 

ಅಂತಿಮ ಕಣದಲ್ಲಿರುವ ಅಭ್ಯರ್ಥಿಗಳು: ನಿಯಾಜ್ ಶೇಖ್ (ಜೆಡಿಎಶ್), ಶಿವರಾಜ ಸಜ್ಜನರ (ಬಿಜೆಪಿ), ಶ್ರೀನಿವಾಸ ಮಾನೆ (ಕಾಂಗ್ರೆಸ್), ಉಡಚಪ್ಪ ಉದ್ದನಕಾಲ (ಕರ್ನಾಟಕ ರಾಷ್ಟ್ರ ಸಮಿತಿ), ಫಕ್ಕೀರಗೌಡ ಶಂಕರಗೌಡ ಗಾಜಿಗೌಡ್ರ (ರೈತ ಭಾರತ ಪಕ್ಷ), ತಳವಾರ ಶಿವಕುಮಾರ (ಲೋಕಶಕ್ತಿ ಪಕ್ಷ), ಉಮೇಶ ಕೃಷ್ಣಪ್ಪ ದೈವಜ್ಞ (ಪಕ್ಷೇತರ), ಸಿದ್ದಪ್ಪ ಕಲ್ಲಪ್ಪ ಪೂಜಾರ (ಪಕ್ಷೇತರ), ಎಸ್ಎಸ್.ದೊಡ್ಡ ಲಿಂಗಣ್ಣನವರ (ಪಕ್ಷೇತರ), ಸೋಮಶೇಖರ ಮಹದೇವಪ್ಪ ಕೋತಂಬರಿ (ಪಕ್ಷೇತರ), ಹೊನ್ನಪ್ಪ ಹನುಮಂತಪ್ಪ ಅಕ್ಕಿವಳ್ಳಿ (ಪಕ್ಷೇತರ) 

ಸಿಂದಗಿಯಲ್ಲಿ ಕ್ಷೇತ್ರದಲ್ಲಿರುವ ಅಭ್ಯರ್ಥಿಗಳು: 

ಇನ್ನು ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಆರು ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಅಶೋಕ ಮನಗೊಳಿ(ಕಾಂಗ್ರೆಸ್‌), ರಮೇಶ್ ಬೂಸನೂರ್(ಬಿಜೆಪಿ), ನಜಿಯಾ ಅಂಗಡಿ(ಜೆಡಿಎಸ್), ಡಾ. ಸುನಿಲ್‌ ಕುಮಾರ್‌ ಹೆಬ್ಬಿ(ಕರ್ನಾಟಕ ರಾಷ್ಟ್ರ ಸಮಿತಿ) ಹಾಗೂ ಜಿಲಾನಿ ಗುಡುಸಾಬ್‌ ಮುಲ್ಲಾ, ದೀಪಿಕಾ ಎಸ್‌. ಪಡಸಲಗಿ ಪಕ್ಷೇತರರಾಗಿ ಸ್ಪರ್ಧಿಸಿದ್ದಾರೆ. 

ಹಾನಗಲ್‌ ಹಾಗೂ ಸಿಂದಗಿ ವಿಧಾನಸಭಾ ಕ್ಷೇತ್ರಗಳಿಗೆ ಅ. 30ರಂದು ಮತದಾನ ನಡೆಯಲಿದ್ದು ನ.2ರಂದು ಫಲಿತಾಂಶ ಹೊರಬೀಳಲಿದೆ. 

Latest Videos
Follow Us:
Download App:
  • android
  • ios