ನಾವು ರೌಡಿಗಳಿಗೆ ಅವಕಾಶ ನೀಡಲ್ಲ: ಸಿಎಂ ಬೊಮ್ಮಾಯಿ

ಬಿಜೆಪಿ ನಾಯಕರು ರೌಡಿಗಳ ಸಹವಾಸದಲ್ಲಿರುವ ಬಗ್ಗೆ ನಾನು ಹೆಚ್ಚಾಗಿ ಮಾತನಾಡಲು ಹೋಗುವುದಿಲ್ಲ. ನಾವು ರೌಡಿಗಳನ್ನು ಪ್ರೋತ್ಸಾಹಿಸುವುದಿಲ್ಲ. ಅವರಿಗೆ ಯಾವುದೇ ಅವಕಾಶಗಳನ್ನು ಕೊಡುವುದಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 

BJP Government Not Allow Rowdies Says CM Basavaraj Bommai grg

ಬೆಂಗಳೂರು(ಡಿ.02):  ಯಾವುದೇ ರೌಡಿಗಳನ್ನು ನಾವು ಬಿಜೆಪಿಗೆ ಸೇರಿಸಿಕೊಂಡಿಲ್ಲ. ರೌಡಿಗಳಿಗೆ ಪ್ರೋತ್ಸಾಹ ಹಾಗೂ ಯಾವುದೇ ರೀತಿಯ ಅವಕಾಶಗಳನ್ನೂ ನಮ್ಮ ಸರ್ಕಾರ ನೀಡಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಕೆಂಗಲ್‌ ಹನುಮಂತಯ್ಯ ಅವರ ಪುಣ್ಯಸ್ಮರಣೆ ಪ್ರಯುಕ್ತ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

‘ಬಿಜೆಪಿ ನಾಯಕರು ರೌಡಿಗಳ ಸಹವಾಸದಲ್ಲಿರುವ ಬಗ್ಗೆ ನಾನು ಹೆಚ್ಚಾಗಿ ಮಾತನಾಡಲು ಹೋಗುವುದಿಲ್ಲ. ನಾವು ರೌಡಿಗಳನ್ನು ಪ್ರೋತ್ಸಾಹಿಸುವುದಿಲ್ಲ. ಅವರಿಗೆ ಯಾವುದೇ ಅವಕಾಶಗಳನ್ನು ಕೊಡುವುದಿಲ್ಲ. ಇದು ಬಹಳ ಸ್ಪಷ್ಟ, ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ’ ಎಂದು ಸ್ಪಷ್ಟಪಡಿಸಿದರು. ಈ ವೇಳೆ ಸಚಿವ ಡಾ.ಕೆ. ಸುಧಾಕರ್‌, ಪರಿಷತ್‌ ಸದಸ್ಯ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವರು ಹಾಜರಿದ್ದರು.

ಕಾಂಗ್ರೆಸ್ಸೇ ರೌಡಿಗಳ ಪಕ್ಷ, ಅದರ ಅಧ್ಯಕ್ಷರ ಹಿನ್ನೆಲೆ ನೋಡಿ: ಅಶ್ವತ್ಥನಾರಾಯಣ್‌ ತಿರುಗೇಟು

ರೌಡಿಶೀಟರ್‌ಗಳನ್ನು ಬಿಜೆಪಿಗೆ ಸೇರಿಸಿಕೊಳ್ಳುವ ಪ್ರಶ್ನೆಯೇ ಇಲ್ಲ: ಸಚಿವ ಬಿ. ಶ್ರೀರಾಮುಲು ಸ್ಪಷ್ಟನೆ

ಬಳ್ಳಾರಿ: ರೌಡಿಶೀಟರ್‌ಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಸಾಧ್ಯವೇ ಇಲ್ಲ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ರೌಡಿಶೀಟರ್‌ಗಳನ್ನು ಪಕ್ಷ ಸೇರ್ಪಡೆ ಸಂಬಂಧ ಪಕ್ಷದ ಅಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಅವರು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದಾರೆ. ನಾವು ಯಾವುದೇ ಕಾರಣಕ್ಕೂ ರೌಡಿಶೀಟರ್‌ಗಳಿಗೆ ಪಕ್ಷದಲ್ಲಿ ಅವಕಾಶ ಮಾಡಿಕೊಡುವುದಿಲ್ಲ. ಕಾಂಗ್ರೆಸ್‌ನವರು ವಿನಾಕಾರಣ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್‌ನ ಹಿನ್ನೆಲೆ ನೋಡಿದರೆ ಅವರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗೂಂಡಾಗಳು ಇರುವುದು ಗೊತ್ತಾಗುತ್ತದೆ ಎಂದು ಟೀಕಿಸಿದರು.

ರಾಹುಲ್‌ ಗಾಂಧಿ ಬಳ್ಳಾರಿ ಜಿಲ್ಲೆಯಲ್ಲಿ ಮಾಡಿದ ಪಾದಯಾತ್ರೆ ಹಾಗೂ ಈ ಹಿಂದೆ ಸಿದ್ದರಾಮಯ್ಯ ಅವರು ಬಳ್ಳಾರಿಗೆ ಮಾಡಿದ ಪಾದಯಾತ್ರೆ ಅವರು ತಮ್ಮ ಅಧಿಕಾರದ ಸ್ವಾರ್ಥಕ್ಕಾಗಿ ಮಾಡಿದ್ದು. ಆ ಪಾದಯಾತ್ರೆಯ ಹಿಂದೆ ಯಾವುದೇ ಸದುದ್ದೇಶ ಇರಲಿಲ್ಲ. ಸಿದ್ದರಾಮಯ್ಯ ಹಿಂದೆ ಬಳ್ಳಾರಿಗೆ ಪಾದಯಾತ್ರೆ ಮಾಡಿದರು. ಆದರೆ, ಅಧಿಕಾರಕ್ಕೆ ಬಂದ ಬಳಿಕ ಬಳ್ಳಾರಿಗೆ ಏನೂ ಮಾಡಲಿಲ್ಲ. ಕಾಂಗ್ರೆಸಿಗರು ಪುಂಗಿ ಮತ್ತು ಡೋಂಗಿಗಳು ಎಂದು ಎಲ್ಲರಿಗೂ ಗೊತ್ತಾಗಿದೆ. ಅವರಿಗೆ ಯಾವುದೇ ಜನಪರ ಉದ್ದೇಶಗಳಿಲ್ಲ. ಇದ್ದಿದ್ದರೆ ಇವರ ಕಾಲದಲ್ಲಿಯೇ ಎಸ್ಸಿ ಹಾಗೂ ಎಸ್ಟಿಸಮುದಾಯಕ್ಕೆ ಏಕೆ ಮೀಸಲಾತಿ ಹೆಚ್ಚಳ ಮಾಡಲಿಲ್ಲ ? ಎಂದು ಪ್ರಶ್ನಿಸಿದರಲ್ಲದೆ, ಬಿಜೆಪಿ ಹೇಳಿದಂತೆ ನಡೆದುಕೊಂಡಿದೆ. ಕೊಟ್ಟ ಮಾತಿನಂತೆ ಪರಿಶಿಷ್ಟರಿಗೆ ಮೀಸಲಾತಿ ಹೆಚ್ಚಳ ಮಾಡಿ ತೋರಿಸಿದ್ದೇವೆ. ಈ ಬಾರಿ ಚುನಾವಣೆಯಲ್ಲಿ ಪರಿಶಿಷ್ಟಹಾಗೂ ಪಂಗಡದ ಮತದಾರರು ಬಿಜೆಪಿ ಪರ ನಿಲ್ಲಲಿದ್ದಾರೆ ಎಂದರು.

Assembly election: ದೇಶದಲ್ಲಿ ಕಾಂಗ್ರೆಸ್‌ ರೌಡಿಸಂ ಜನಕವಾಗಿದೆ ರವಿಕುಮಾರ್ ವಾಗ್ದಾಳಿ

ಗುಜರಾತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸೂಕ್ತ ಉತ್ತರ ನೀಡಲಿದ್ದಾರೆ. ದೇಶದಲ್ಲಿ ಈಗಾಗಲೇ ಅನೇಕ ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡಿರುವ ಕಾಂಗ್ರೆಸ್‌ ಗುಜರಾತ್‌ನಲ್ಲೂ ಸೋಲುಣ್ಣಲಿದೆ. ದೇಶದ ಮೂರು ರಾಜ್ಯಗಳಲ್ಲಿ ಮಾತ್ರ ಕಾಂಗ್ರೆಸ್‌ ಇದ್ದು ಅಲ್ಲಿ ಸಹ ಮುಂದಿನ ದಿನಗಳಲ್ಲಿ ನೆಲಕಚ್ಚಲಿದೆ ಎಂದು ತಿಳಿಸಿದರು.

ಬರುವ ಚುನಾವಣೆಯಲ್ಲಿ ನಾನು ಎಲ್ಲಿಂದ ಸ್ಪರ್ಧೆ ಮಾಡಬೇಕು ಎಂಬುದನ್ನು ಪಕ್ಷವೇ ನಿರ್ಧರಿಸುತ್ತದೆ. ಯಾರೋ ಸವಾಲು ಹಾಕಿದರು ಎಂದ ಮಾತ್ರಕ್ಕೆ ನಾನು ಸಿದ್ದರಾಮಯ್ಯ ಅವರ ವಿರುದ್ಧ ಸ್ಪರ್ಧೆ ಮಾಡುವುದಿಲ್ಲ. ಪಕ್ಷ ಒಂದು ವೇಳೆ ಅವರ ವಿರುದ್ಧ ಸ್ಪರ್ಧಿಸುವಂತೆ ಸೂಚಿಸಿದರೆ ಖಂಡಿತ ಪಕ್ಷದ ಸೂಚನೆಯಂತೆ ನಡೆದುಕೊಳ್ಳುತ್ತೇನೆ ಎಂದು ತಿಳಿಸಿದರು.
 

Latest Videos
Follow Us:
Download App:
  • android
  • ios