Asianet Suvarna News Asianet Suvarna News

ನಾಳೆ ಸದನದ ಒಳಗೆ, ಹೊರಗೆ ಬಿಜೆಪಿ ‘ಗ್ಯಾರಂಟಿ ಹೋರಾಟ’: ಅಶ್ವತ್ಥನಾರಾಯಣ

ಗ್ಯಾರಂಟಿಗಳನ್ನು ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಪಕ್ಷ ತನ್ನ ಆಶ್ವಾಸನೆ ಈಡೇರಿಸದೆ ಮಾತಿಗೆ ತಪ್ಪಿದೆ. ಇದರ ವಿರುದ್ಧ ‘ಮೋಸ ನಿಲ್ಲಿಸಿ, ಗ್ಯಾರಂಟಿ ಜಾರಿಗೊಳಿಸಿ’ ಹೋರಾಟಕ್ಕೆ ಬಿಜೆಪಿ ಮುಂದಾಗಿದೆ ಎಂದು ಮಾಜಿ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

BJP guarantee fight inside Cabinet and outside on july 4th Says Dr CN Ashwath Narayan gvd
Author
First Published Jul 3, 2023, 3:40 AM IST

ಬೆಂಗಳೂರು (ಜು.03): ಗ್ಯಾರಂಟಿಗಳನ್ನು ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಪಕ್ಷ ತನ್ನ ಆಶ್ವಾಸನೆ ಈಡೇರಿಸದೆ ಮಾತಿಗೆ ತಪ್ಪಿದೆ. ಇದರ ವಿರುದ್ಧ ‘ಮೋಸ ನಿಲ್ಲಿಸಿ, ಗ್ಯಾರಂಟಿ ಜಾರಿಗೊಳಿಸಿ’ ಹೋರಾಟಕ್ಕೆ ಬಿಜೆಪಿ ಮುಂದಾಗಿದೆ ಎಂದು ಮಾಜಿ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷವು ಅಧಿಕಾರಕ್ಕೆ ಬಂದ ಬಳಿಕ ಗ್ಯಾರಂಟಿ ಅನುಷ್ಠಾನದ ವಿಚಾರದಲ್ಲಿ ಭಂಡತನ ತೋರುತ್ತಿದೆ. 

ಕಂಡಿಷನ್‌ ಇಲ್ಲದೆ ಗ್ಯಾರಂಟಿಗಳನ್ನು ಜಾರಿ ಮಾಡಲು ಆಗ್ರಹಿಸಿ ಜು.4ರಂದು (ಮಂಗಳವಾರ) ಸದನದ ಒಳಗೆ ಮತ್ತು ಹೊರಗೆ ಹೋರಾಟ ನಡೆಸಲಿದ್ದೇವೆ ಎಂದು ಹೇಳಿದರು. ಕಾಂಗ್ರೆಸ್‌ ಪಕ್ಷವು ಅಧಿಕಾರಕ್ಕೆ ಬಂದ ತಕ್ಷಣ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡುವುದಾಗಿ ತಿಳಿಸಿತ್ತು. ಆದರೆ ಅದನ್ನು ಜಾರಿಗೊಳಿಸುವಲ್ಲಿ ವಿಫಲವಾಗಿದೆ. ಸದನದ ಹೊರಗೆ ಪಕ್ಷದ ಹಿರಿಯರಾದ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಸದನದ ಒಳಗೆ ಶಾಸಕರ ಹೋರಾಟ ನಡೆಯಲಿದೆ ಎಂದರು.

ಶಿಕ್ಷಕರು ದೇಶ ಕಟ್ಟುವ ಸತ್ಪ್ರಜೆಗಳನ್ನು ಸಮಾಜಕ್ಕೆ ನೀಡಿ: ಸಚಿವ ಕೆ.ಎನ್‌.ರಾಜಣ್ಣ

ನನ್ನ ಇತಿಹಾಸ ಅರಿಯಿರಿ: ‘ಬೆಂಗಳೂರು ನಗರ ಜಿಲ್ಲೆಯ ಉಸ್ತುವಾರಿ ಸಚಿವನಾಗಲು ನನಗೂ ಬೆಂಗಳೂರಿಗೂ ಏನು ಸಂಬಂಧ? ಎಂದು ಕೇಳುವವರು ಮೊದಲು ನನ್ನ ಇತಿಹಾಸ ತಿಳಿದುಕೊಳ್ಳಬೇಕು. ನನ್ನ 6ನೇ ವಯಸ್ಸಿನಿಂದ ಬೆಂಗಳೂರಿನಲ್ಲಿ ಬೆಳೆದಿದ್ದೇನೆ. ರಾಜಕಾರಣಕ್ಕಾಗಿ ಯಾರೂ ಮಾತನಾಡಬಾರದು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಮಾಜಿ ಸಚಿವ ಡಾ. ಸಿ.ಎನ್‌.ಅಶ್ವತ್ಥನಾರಾಯಣ ಹೇಳಿಕೆಗೆ ತಿರುಗೇಟು ನೀಡಿದರು. ಸದಾಶಿವನಗರದಲ್ಲಿ ಆಯೋಜಿಸಲಾಗಿದ್ದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸಮ್ಮುಖದಲ್ಲಿಯೇ ವೇದಿಕೆಯಲ್ಲಿದ್ದ ಡಾ ಅಶ್ವತ್ಥನಾರಾಯಣ ಅವರ ಟೀಕೆಗೆ ಉತ್ತರ ನೀಡಿದ ಡಿ.ಕೆ. ಶಿವಕುಮಾರ್‌, ‘ಅಶ್ವತ್ಥನಾರಾಯಣ ಅವರು ಇತಿಹಾಸ ತಿಳಿದುಕೊಳ್ಳಬೇಕು.

ನಾನು ರಾಜಾಜಿನಗರದ ಎನ್‌ಪಿಎಸ್‌ ಶಾಲೆಯಿಂದ ನನ್ನ ಶಿಕ್ಷಣ ಆರಂಭಿಸಿದೆ. ಬೆಂಗಳೂರಿಗೂ ನನಗೂ ಬಹಳ ನಂಟಿದೆ. ನೀವು ರಾಜಕೀಯವಾಗಿ ಮಾತನಾಡಿದ್ದೀರಿ. ಆದರೂ ನಿಮಗೆ ನನ್ನ ಇತಿಹಾಸ ಗೊತ್ತಿಲ್ಲ’ ಎಂದು ಹೇಳಿದರು. ‘ಕೆಂಪೇಗೌಡರು ಬೆಂಗಳೂರಿನಲ್ಲಿ ಏಕೆ ಹುಟ್ಟಿದರು? ಕೆಂಗಲ್‌ ಹನುಮಂತಯ್ಯ, ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಏಕೆ ಹುಟ್ಟಿದರು ಅಂತೆಲ್ಲ ಚರ್ಚೆ ಮಾಡುವುದಕ್ಕೆ ಆಗುವುದಿಲ್ಲ. ಅವರೆಲ್ಲ ಈ ಪುಣ್ಯಭೂಮಿಯಲ್ಲಿ ಹುಟ್ಟಿದ್ದಾರೆ, ಅವರವರ ಧರ್ಮಕಾರ್ಯ ನಡೆಸಿದ್ದಾರೆ. ಅದನ್ನು ಅರಿಯಬೇಕು’ ಎಂದರು.

ಕೇಂದ್ರ ಅಕ್ಕಿ ಕೊಡದಿದ್ದಕ್ಕೆ ವಿಧಿ ಇಲ್ಲದೇ ಹಣ ಕೊಡ್ತಿದೀವಿ: ಬಿಜೆಪಿಗರಿಗೆ ಸಚಿವ ವೆಂಕಟೇಶ್‌ ಟಾಂಗ್‌

‘ನಾಡಪ್ರಭು ಕೆಂಪೇಗೌಡರು ಒಂದು ಜಾತಿಗೆ ಸೀಮಿತವಾಗಿಲ್ಲ. ಕೆಲ ದಿನಗಳ ಹಿಂದೆ ನಡೆದ ಕಂಪೇಗೌಡ ಜಯಂತಿಗೆ ಸಂಬಂಧಿಸಿದ ಸಭೆಯಲ್ಲಿ ಶೇ. 75ರಷ್ಟುಒಕ್ಕಲಿಗರೇ ಹಾಜರಿದ್ದರು. ಉಳಿದ ಸಮುದಾಯದವರು ಕಡಿಮೆಯಿದ್ದರೆ. ಕೆಂಪೇಗೌಡ ಅವರು ಜಾತಿ, ಧರ್ಮ ಮೀರಿದವರು. ಎಲ್ಲ ಸಮುದಾಯದವರು ಅಭಿವೃದ್ಧಿ ಹೊಂದಲಿ ಎಂದು ಜಾತಿಗೆ ಪ್ರತ್ಯೇಕ ಪೇಟೆಗಳನ್ನು ನಿರ್ಮಿಸಿದರು. ಅದು ಅವರ ದೂರದರ್ಶಿತ್ವ’ ಎಂದರು ತಿಳಿಸಿದರು.

Follow Us:
Download App:
  • android
  • ios