Asianet Suvarna News Asianet Suvarna News

CBI ಗೆ ಒಂದೂ ಪ್ರಕರಣ ವಹಿಸದ ಬಿಜೆಪಿ; ಸಿದ್ದರಾಮಯ್ಯ ಕಿಡಿ

ಬಿಜೆಪಿ ತನ್ನ ಅಧಿಕಾರದಲ್ಲಿ ಒಂದೇ ಒಂದು ಪ್ರಕರಣವನ್ನು ಸಿಬಿಐಗೆ ವಹಿಸಿತ್ತಾ? ಆ ಯೋಗ್ಯತೆ ಅವರಿಗಿದ್ಯಾ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದರು.

BJP has not given any case to CBI for investigation says siddaramaiah rav
Author
First Published Oct 30, 2022, 7:28 AM IST

ಶಿವಮೊಗ್ಗ (ಅ.30) : ಬಿಜೆಪಿ ತನ್ನ ಅಧಿಕಾರದಲ್ಲಿ ಒಂದೇ ಒಂದು ಪ್ರಕರಣವನ್ನು ಸಿಬಿಐಗೆ ವಹಿಸಿತ್ತಾ? ಆ ಯೋಗ್ಯತೆ ಅವರಿಗಿದ್ಯಾ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದರು.

ಸಿದ್ದರಾಮಯ್ಯ ಖಳನಾಯಕ, ನರಹಂತಕ: ನಳಿನ್‌ಕುಮಾರ್‌ ಕಟೀಲ್‌ ಟೀಕೆ

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೇಶ್‌ ಮೇಸ್ತಾ ಸಾವು ಸಂಭವಿಸಿದಾಗ ಬಿಜೆಪಿಯವರು ಸದನದಲ್ಲಿ ಗಲಾಟೆ ಮಾಡಿದರು. ಉತ್ತರ ಕನ್ನಡದಲ್ಲೂ ಗಲಭೆ ಮಾಡಿಸಿದರು. ಆಗ ನಾನು ಈ ಪ್ರಕರಣವನ್ನು ಸಿಬಿಐಗೆ ವಹಿಸಿದ್ದೆ. ಆಗ ಪ್ರಧಾನಿಯಾಗಿದ್ದವರು ನರೇಂದ್ರ ಮೋದಿಯವರು ಮತ್ತು ಗೃಹ ಸಚಿವರಾಗಿದ್ದವರು ಅಮಿತ್‌ ಶಾ. ಇವರ ನಾಯಕತ್ವದ ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸಿಬಿಐ ಇದೀಗ ತನ್ನ ವರದಿಯಲ್ಲಿ ಪರೇಶ್‌ ಮೇಸ್ತಾ ಅವರದ್ದು ಆಕಸ್ಮಿಕ ಸಾವು ಎಂದು ತಿಳಿಸಿದೆ. ಇದನ್ನು ಒಪ್ಪಿಕೊಳ್ಳಲು ಸಾಧ್ಯವಾಗದ ಬಿಜೆಪಿ ಮುಖಂಡರು ಸಿದ್ದರಾಮಯ್ಯನವರು ಸಾಕ್ಷ್ಯನಾಶ ಮಾಡಿದ್ರು. ಹೀಗಾಗಿ ಈ ವರದಿ ಬಂದಿದೆ ಎನ್ನುತ್ತಿದ್ದಾರೆ. ಇವರ ಯೋಗ್ಯತೆಗೆ 2008 ರಿಂದ 2013ರ ವರಗೆ ಅಥವಾ ಈಗ ಅಧಿಕಾರಕ್ಕೆ ಬಂದ ಮೇಲೆ ಒಂದೇ ಒಂದು ಪ್ರಕರಣವನ್ನು ಸಿಬಿಐ ಗೆ ವಹಿಸಿದ್ದಾರಾ ಎಂದು ಪ್ರಶ್ನಿಸಿದರು.

ಇದೇ ಬಿಜೆಪಿಯವರು ಹಿಂದೆ ಸಿಬಿಐ ಎಂದರೆ ಕಾಂಗ್ರೆಸ್‌ ಬ್ಯೂರೋ ಆಫ್‌ ಇನ್‌ವೆಸ್ಟಿಗೇಶನ್‌ ಎನ್ನುತ್ತಿದ್ದರು. ಜೆಡಿಎಸ್‌ನವರು ಚೋರ್‌ ಬಚಾವೋ ಇನ್ಸಿ$್ಟಟ್ಯೂಟ್‌ ಎನ್ನುತ್ತಿದ್ದರು. ಈಗ ಸಿಬಿಐಗೆ ಏನಂತ ಕರೀಬೇಕು ನೀವೇ ಹೇಳಿ ನೋಡೋಣ? ಬಿಜೆಪಿಯರಿಗೆ ಅಪಪ್ರಚಾರ ಮತ್ತು ಸುಳ್ಳು ಹೇಳುವುದು ಬಿಟ್ಟರೆ ಇನ್ನೇನು ಕೆಲಸವಿಲ್ಲ ಎಂದು ಟೀಕಿಸಿದರು.

ಜೋಕರ್‌ ಮಾತಿಗೆ ಉತ್ತರ ಕೊಡಲು ಸಮಯವಿಲ್ಲ:

ನಳಿನ್‌ಕುಮಾರ್‌ ಕಟೀಲ್‌ ಒಬ್ಬ ಜೋಕರ್‌. ಅವರ ಮಾತಿಗೆಲ್ಲ ಉತ್ತರ ಕೊಡುತ್ತ ಸಮಯ ವ್ಯರ್ಥ ಮಾಡಲು ನಾನು ಸಿದ್ಧನಿಲ್ಲ. ಭಾರತ ಐಕ್ಯತಾ ಯಾತ್ರೆಯ ಉದ್ದೇಶ ದ್ವೇಷ ರಾಜಕಾರಣದಿಂದ ಒಡೆದು ಹೋಗಿರುವ ಮನಸುಗಳನ್ನು ಒಂದು ಗೂಡಿಸುವುದು, ಬೆಲೆಯೇರಿಕೆ, ನಿರುದ್ಯೋಗ, ರೈತರ ಸಮಸ್ಯೆಗಳು ಹಾಗೂ ಭ್ರಷ್ಟಾಚಾರ ಇವುಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದಾಗಿದೆ. ಆದರೆ, ಬಿಜೆಪಿಯವರು ರಾಹುಲ್‌ ಗಾಂಧಿ ಅವರ ಬಗ್ಗೆ ಅಪಪ್ರಚಾರ ಮಾಡಿ ನಮ್ಮ ಯಾತ್ರೆಯ ಬಗ್ಗೆ ತಪ್ಪು ಮಾಹಿತಿ ನೀಡಲು ಕುತಂತ್ರ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಶಿವಮೊಗ್ಗದಲ್ಲಿ ಗಲಾಟೆ ಮಾಡಿಸುವುದೇ ಈಶ್ವರಪ್ಪ

ಶಿವಮೊಗ್ಗದಲ್ಲಿ ಜನರನ್ನು ಎತ್ತಿಕಟ್ಟಿಗಲಾಟೆ ಮಾಡಿಸುವುದು ಈಶ್ವರಪ್ಪನವರು. ಹರ್ಷ ಕೊಲೆಯಾದಾಗ ಆತನ ಹೆಣ ಇಟ್ಟುಕೊಂಡು ಮೆರವಣಿಗೆ ಮಾಡಿದರು. ಆಗ 144 ಸೆಕ್ಷನ್‌ ಇತ್ತು. ಸರ್ಕಾರವೂ ಇವರದೇ ಇದೆ. ಆದರೂ, ಒಬ್ಬ ಮಂತ್ರಿಯಾಗಿ ಈ ರೀತಿ ಮೆರವಣಿಗೆ ಮಾಡಿದರು. ಇತಿಹಾಸದಲ್ಲಿ ಎಲ್ಲೂ ಹೀಗೆ ನಡೆದಿಲ್ಲ. ಈಶ್ವರಪ್ಪ ಅವರಂತವರಿಂದಲೇ ಸಮಾಜದಲ್ಲಿ ಅಶಾಂತಿ ನಿರ್ಮಾಣವಾಗುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಈ ರೀತಿ ಆಗುವುದಿಲ್ಲ ಎಂದು ಸಿದ್ದರಾಮಯ್ಯ ಹರಿಹಾಯ್ದರು.

ಶ್ರೀರಾಮುಲು ಪೆದ್ದ ಎನ್ನಲು ಅವರೇ ಕಾರಣ

ಶ್ರೀರಾಮುಲು ಅವರು ನಾವು ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ನ್ಯಾ. ನಾಗಮೋಹನ್‌ ದಾಸ್‌ ಅವರ ವರದಿ ಜಾರಿ ಮಾಡುತ್ತೇವೆ, ಇದನ್ನು ರಕ್ತದಲ್ಲಿ ಬರೆದುಕೊಡ್ತೀನಿ ಎಂದು ಹೇಳಿದ್ದರು. ಅಧಿಕಾರಕ್ಕೆ ಬಂದು 24 ಗಂಟೆಯೊಳಗೆ ವರದಿ ಜಾರಿ ಮಾಡಿದರಾ? ಶ್ರೀರಾಮುಲು ಸಚಿವರಾಗಿರಲಿಲ್ವಾ? ನಾನು ರಾಮುಲು ಅವರನ್ನು ಪೆದ್ದ ಎನ್ನಲು ಕಾರಣ ಅವರೇ ಎಂದು ಸಿದ್ದರಾಮಯ್ಯ ಹೇಳಿದರು.

ಆರೇಳು ಕ್ಷೇತ್ರದಿಂದ ಸ್ಪರ್ಧೆಗೆ ಒತ್ತಡವಿದೆ: ಸಿದ್ದರಾಮಯ್ಯ

ಒಮ್ಮೆ ತಮ್ಮನ್ನು ತಾವು ಪೆದ್ದ ಎಂದು ಕರೆದುಕೊಂಡಿದ್ದರು. ಕೆಲವು ದಿನಗಳ ಹಿಂದೆ ಅವರು ಮಾತನಾಡುವಾಗ ನಾನು ಉದ್ದವಿದ್ದೇನೆ, ಆದರೂ ಪೆದ್ದ. ಬಸವರಾಜ ಬೊಮ್ಮಾಯಿ ಕುಳ್ಳ ಇದ್ದರೂ ಬುದ್ಧಿವಂತ’ ಎಂದು ಹೇಳಿದ್ದರು. ಅವರ ಮಾತನ್ನೇ ನಾನು ನೆನಪು ಮಾಡಿದ್ದು ಅಷ್ಟೆ. ಸಮ್ಮಿಶ್ರ ಸರ್ಕಾರ ಇದ್ದಾಗ, ನಮ್ಮ ಪಕ್ಷದ ಪ್ರಿಯಾಂಕ್‌ ಖರ್ಗೆ ಅವರು ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿದ್ದರು. ಆಗ ನಾಗಮೋಹನ್‌ ದಾಸ್‌ ಅವರ ಸಮಿತಿ ರಚನೆ ಆಗಿದ್ದು. ಈ ಸಮಿತಿ ವರದಿ ನೀಡಿದ್ದು ಎಂದು ತಿಳಿಸಿದರು.

Follow Us:
Download App:
  • android
  • ios