ಕಾಂಗ್ರೆಸ್‌ ಸರ್ಕಾರದ ಎಲ್ಲಾ ಕಾನೂನಾತ್ಮಕ ದೌರ್ಜನ್ಯ ತಡೆಗೆ ಶೀಘ್ರವೇ ರಾಜ್ಯ ಬಿಜೆಪಿ ಕಾನೂನು ಪ್ರಕೋಷ್ಠದಿಂದ ಸಹಾಯವಾಣಿ ಆರಂಭಿಸಲಾಗುವುದು ಎಂದು ಯುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. 

ಬೆಂಗಳೂರು (ಜೂ.04): ಕಾಂಗ್ರೆಸ್‌ ಸರ್ಕಾರದ ಎಲ್ಲಾ ಕಾನೂನಾತ್ಮಕ ದೌರ್ಜನ್ಯ ತಡೆಗೆ ಶೀಘ್ರವೇ ರಾಜ್ಯ ಬಿಜೆಪಿ ಕಾನೂನು ಪ್ರಕೋಷ್ಠದಿಂದ ಸಹಾಯವಾಣಿ ಆರಂಭಿಸಲಾಗುವುದು ಎಂದು ಯುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ಶನಿವಾರ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಕಾನೂನು ಪ್ರಕೋಷ್ಠವು ವಕೀಲರ ಸಭೆ ನಡೆಸಿದೆ. ಕಾಂಗ್ರೆಸ್‌ ಸರ್ಕಾರದ ಎಲ್ಲಾ ಕಾನೂನಾತ್ಮಕ ದೌರ್ಜನ್ಯ, ಅಧಿಕಾರ ದುರ್ಬಳಕೆ, ಸುಳ್ಳು ಕೇಸು, ಸುಳ್ಳು ಎಫ್‌ಐಆರ್‌ಗಳನ್ನು ಸಮರ್ಥವಾಗಿ ಎದುರಿಸಲು ಮುಂದಾಗಿದೆ. 

ಇದಕ್ಕಾಗಿ ಸಹಾಯವಾಣಿ ಆರಂಭಿಸಲು ತೀರ್ಮಾನಿಸಲಾಗಿದ್ದು, ಒಂದು ವಾರದೊಳಗೆ ಸಹಾಯವಾಣಿ ಸಂಖ್ಯೆಯನ್ನು ಪ್ರಕಟಿಸಲಿದ್ದೇವೆ ಎಂದು ಮಾಹಿತಿ ನೀಡಿದರು. ಸಹಾಯವಾಣಿ ಸಂಖ್ಯೆಯು ರಾಜ್ಯದ ಕಾರ್ಯಕರ್ತರ ಉಪಯೋಗಕ್ಕೆ ಇರುವ ಸಂಖ್ಯೆಯಾಗಿದ್ದು, 24 ಗಂಟೆ ಕಾರ್ಯ ನಿರ್ವಹಿಸಲಿದೆ. ಪಕ್ಷದ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲಿಸಿದಾಗ, ತಪ್ಪು ಆರೋಪ ಹೊರಿಸಿ ಪೊಲೀಸ್‌ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಂಡು ಅವರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಕೆಲಸ ಮಾಡಿದಾಗ ಈ ಸಂಖ್ಯೆಗೆ ಕರೆ ಮಾಡಿ ನೆರವು ಪಡೆಯಬಹುದು. ರಾಜ್ಯದ ಮೂಲೆ ಮೂಲೆಗಳಲ್ಲಿರುವ ನಮ್ಮ ವಕೀಲರ ತಂಡ ಕಾರ್ಯಕರ್ತರ ನೆರವಿಗೆ ಧಾವಿಸಲಿದೆ ಎಂದರು.

ಪ್ರವಾಹ ಅವಘಡ ತಡೆಗಟ್ಟಲು ಎಚ್ಚೆ​ತ್ತು​ಕೊ​ಳ್ಳಿ: ಆರಗ ಜ್ಞಾನೇಂದ್ರ

ಈ ಹಿಂದೆ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಗಣಪತಿ ಪೆಂಡಾಲ್‌ ಹಾಕಲು ಸಹ ಅನುಮತಿ ಪಡೆಯಬೇಕಾದಂತಹ ಸ್ಥಿತಿ ಇತ್ತು. ಹಬ್ಬ ಹರಿದಿನ ಆಚರಿಸುವಾಗ ಪ್ರಕರಣ ದಾಖಲಿಸುವುದು, ಪಟಾಕಿ ಹೊಡೆಯಬಾರದು, 10 ಜನ ನಿಲ್ಲಬಾರದು ಎಂದು ಷರತ್ತು ವಿಧಿಸುತ್ತಿದ್ದರು. ಕುಂಟು ನೆಪವೊಡ್ಡಿ ಹಬ್ಬ ಹರಿದಿನಗಳನ್ನು ಆಚರಿಸದಂತೆ ಕಟ್ಟಿಹಾಕುವ ಪ್ರಯತ್ನ ನಡೆದಿತ್ತು. ಈ ರೀತಿಯ ಸ್ಥಿತಿ ಬಂದರೆ ಕೋರ್ಚ್‌ನಲ್ಲಿ ಅದರ ವಿರುದ್ಧ ಹೋರಾಟ ಮಾಡುವಂತಹ, ಪಿಐಎಲ್‌, ರಿಟ್‌ ಕೇಸು ಹಾಕಲು ಬೆಂಗಳೂರು, ಧಾರವಾಡ, ಕಲಬುರಗಿಯಲ್ಲಿ ವಕೀಲರ ತಂಡವನ್ನು ಸಿದ್ದಗೊಳಿಸುತ್ತೇವೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ಕಾನೂನು ಪ್ರಕೋಷ್ಠದ ಸಂಚಾಲಕ ಯೋಗೇಂದ್ರ ಹೂಡಾಘಟ್ಟಉಪಸ್ಥಿತರಿದ್ದರು.

ಹೃದಯ ರೋಗಿಗಳ ಸಂಖ್ಯೆ ಹೆಚ್ಚಳ ಆತಂಕಕಾರಿ ಬೆಳವಣಿಗೆ: ಡಾ.ಸಿ.ಎನ್‌.ಮಂಜುನಾಥ್‌

ಕಾಂಗ್ರೆಸ್‌ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಧಮ್ಕಿ ಹಾಕುವುದು, ಸುಳ್ಳು ಆಪಾದನೆ ಹೊರಿಸಿ ನಮ್ಮ ಕಾರ್ಯಕರ್ತರನ್ನು ಗುರಿ ಮಾಡಿ ಪೊಲೀಸ್‌ ಠಾಣೆಗಳಲ್ಲಿ ಪ್ರಕರಣ ದಾಖಲಿಸುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ರಾಯಚೂರಿನಲ್ಲಿಯೂ ಸಹ ಒಬ್ಬ ಕಾರ್ಯಕರ್ತರ ಮೇಲೆ ಕೇಸು ಹಾಕಿ ಬಂಧಿಸಿದ ಪ್ರಕರಣ ರಾಜ್ಯದ ಗಮನಕ್ಕೆ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತದ ಮೊದಲ ಅವಧಿಯಲ್ಲಿ ಇದೇ ರೀತಿ ದ್ವೇಷದ ರಾಜಕಾರಣದ ಸಂದರ್ಭದಲ್ಲಿ ರಾಜ್ಯದ ಹಲವು ಕಡೆ ಕಾರ್ಯಕರ್ತರ ಮೇಲೆ ರೌಡಿ ಎಂದು ಪ್ರಕರಣ ದಾಖಲಿಸಿ ಪೊಲೀಸ್‌ ಠಾಣೆಗೆ ಅಲೆಯುವಂತೆ ಮಾಡುತ್ತಿದ್ದರು ಎಂದರು.