Asianet Suvarna News Asianet Suvarna News

Karnataka Politics:ಮಹತ್ವದ ಬೆಳವಣಿಗೆ, ಕರ್ನಾಟಕದತ್ತ ಬಿಜೆಪಿ ಹೈಕಮಾಂಡ್

*ಕರ್ನಾಟಕ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ
* ಕರ್ನಾಟಕ ಪ್ರವಾಸ ಕೈಗೊಂಡ ಬಿಜೆಪಿ ಹೈಕಮಾಂಡ್
* ಜನವರಿಯಲ್ಲಿ ಅಮಿತ್ ಶಾ, ಜೆಪಿ ನಡ್ಡಾ ಬೆಂಗಳೂರಿಗೆ

BJP High command JP Nadda Amit Shah Karnataka Tour In january rbj
Author
Bengaluru, First Published Dec 27, 2021, 8:26 PM IST

ಬೆಂಗಳೂರು, (ಡಿ.27):  ಕರ್ನಾಟಕ ಬಿಜೆಪಿಯಲ್ಲಿ(Karnataka BJP) ಒಳಗಿಂದೊಳಗೆ ಮಹತ್ವದ ಬೆಳವಣಿಗಗಳು ನಡೆಯುತ್ತಿವೆ.  ಸಿಎಂ ಬಸವರಾಜ ಬೊಮ್ಮಾಯಿ ನಾಯಕತ್ವ ಬದಲಾವಣೆ ಸುದ್ದಿ ಜೋರಾಗಿದೆ. ಇದರ ಮಧ್ಯೆ ಬಿಜೆಪಿ ಹೈಕಮಾಂಡ್ (BJP High Command) ಕರ್ನಾಟಕ ಪ್ರವಾಸ(Karnataka Tour) ಕೈಗೊಂಡಿದ್ದು ತೀವ್ರ ಕುತೂಹಲ ಮೂಡಿಸಿದೆ.

ಹೌದು...ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ (JP Nadda) ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ಕರ್ನಾಟಕ ಪ್ರವಾಸ ಕೈಗೊಂಡಿರುವುದು ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ.

BJP Core Committee: ಹುಬ್ಬಳ್ಳಿಯಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ, ಬೊಮ್ಮಾಯಿ, ಕಟೀಲ್ ಭವಿಷ್ಯ ನಿರ್ಧಾರ...?

ಅಮಿತ್ ಶಾ ಅವರು ಜನವರಿ 8 ಮತ್ತು 9ರಂದು ಎರಡು ದಿನಗಳ ಬೆಂಗಳೂರಿನಲ್ಲೇ ಠಿಕಾಣಿ ಹೂಡಲಿದ್ದಾರೆ. ಇನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಸಹ ಜನವರಿ 9ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ನಡ್ಡಾಗಿಂತ ಒಂದು ದಿನ ಮೊದಲೇ ಬೆಂಗಳೂರಿಗೆ ಆಗಮಿಸಲಿರುವ ಅಮಿತ್ ಶಾ, ಪಕ್ಷದ ಪದಾಧಿಕಾರಿಗಳು, ಶಾಸಕರು, ಸಚಿವರ ಜೊತೆ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ನಂತರ ಜನವರಿ 9ರಂದು ಜೆ.ಪಿ.ನಡ್ಡಾ ನೇತೃತ್ವದಲ್ಲಿ ಸಭೆ ನಡೆಯಲಿದ್ದು, 2023ರ ವಿಧಾನಸಭೆ ಚುನಾವಣೆ ಸಿದ್ದತೆಯ ಕುರಿತು ಚರ್ಚೆ ನಡೆಸಲಿದ್ದಾರೆ. ಅಲ್ಲದೇ ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಅಮಿತ್ ಶಾ ಈ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಎನ್ನಲಾಗಿದೆ.

ಬಳಿಕ ಅಂತಿಮವಾಗಿ ಕಾರ್ಯಕಾರಿಣಿಯಲ್ಲಿ ಭಾಗವಹಿಸುವ ಮೂಲಕ ರಾಜ್ಯದಲ್ಲಿ ಸದ್ಯ ಚರ್ಚೆಯಾಗುತ್ತಿರುವ ನಾಯಕತ್ವ ಬದಲಾವಣೆ ವಿಷಯಕ್ಕೆ ಸಬಂಧಿಸಿದಂತೆ ಸ್ಪಷ್ಟ ಸಂದೇಶ ನೀಡುವ ಸಾಧ್ಯತೆಗಳಿವೆ. ಅಲ್ಲದೇ ಮುಂದಿನ ಚುನಾವಣೆಗೆ ಯಾರ ನಾಯಕತ್ವದಲ್ಲಿ ನಡೆಯಲಿದೆ ಎನ್ನುವುದನ್ನು ಘೋಷಣೆಯಾಗಲಿದೆ.

ಮುಂದಿನ ಚುನಾವಣೆಗೆ ಪೂರ್ವ ತಯಾರಿ
ಯೆಸ್....2023ರ ವಿಧಾನಸಭಾ ಚುನಾವಣೆಗೆ ಪಕ್ಷದ ನಾಯಕರನ್ನು ಬಡಿದೆಬ್ಬಿಸಲು ದೆಹಲಿ ನಾಯಕರು ಕರ್ನಾಟಕ ಪ್ರವಾಸ ಕೈಗೊಂಡಿದಂತಿದೆ. ಬೆಲೆ ಏರಿಕೆ ಸೇರಿದಂತೆ ಕೆಲ ಅಂಶಗಳಿಂದ ಕರ್ನಾಟಕದಲ್ಲಿ ಬಿಜೆಪಿ ಕೊಂಚ ಕಳೆ ಕಳೆದುಕೊಂಡಂತೆ ಹೈಕಮಾಂಡ್ ನಾಯಕರಿಗೆ ತಿಳಿದಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಕಳೆ ಹೆಚ್ಚಿಸಲು ಹೈಕಮಾಂಡ್ ಮುಂದಾಗಿದೆ.  ಮುಂಬರುವ ಚುನಾವಣೆಗೆ ಹೇಗೆಲ್ಲಾ ತಯಾರಿ ಮಾಡಿಕೊಳ್ಳಬೇಕು ಎನ್ನುವ ತಂತ್ರಗಾರಿಗೆ ಚರ್ಚೆ ಆಗಲಿದೆ. ಅಲ್ಲದೇ ಈಗಿನಿಂದಲೇ ಪಕ್ಷ ಸಂಘಟನೆಗೆ ಏನೆಲ್ಲಾ ರೂಪರೇಷಗಳನ್ನ ಮಾಡಿಕೊಳ್ಳಬೇಕು ಎನ್ನುವುದನ್ನು ನಾಯಕರುಗಳಿಗೆ ಮನದಟ್ಟು ಮಾಡಿಕೊಡಲಿದ್ದಾರೆ. 

ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆಯೂ ಚರ್ಚೆ?
ಸಿಎಂ ಬದಲಾವಣೆ ಮಾತ್ರವಲ್ಲದೇ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಬದಲಾವಣೆ ಬಗ್ಗೆಯೂ ಚರ್ಚೆಯಾಗಲಿದೆ ಎನ್ನಲಾಗಿದೆ. ನಳೀನ್ ಕುಮಾರ್ ಕಟೀಲ್ ಅವರನ್ನು ಮುಂದುವರೆಸಬೇಕೋ‌ ಬೇಡವೋ ಎಂಬ ಬಗ್ಗೆ ಕೂಡ ಜೆಪಿ ನಡ್ಡ ಮತ್ತು ಅರುಣ್ ಸಿಂಗ್ ‌ಮಾಹಿತಿ ಸಂಗ್ರಹಿಸಲಿದ್ದಾರೆ. ನಳೀನ್ ಕುಮಾರ್ ಕಟೀಲ್ ಅವರನ್ನೇ ಮುಂದಿಟ್ಟುಕೊಂಡು 2023ರ ರಾಜ್ಯ ವಿಧಾನಸಭಾ ಚುನಾವಣೆಯನ್ನು ಎದುರಿಸಲು ಸಾಧ್ಯವೇ, ಬದಲಾವಣೆ ಅಗತ್ಯ ಇದೆಯೇ? ಎನ್ನುವ ಬಗ್ಗೆ ಚರ್ಚಿಸಲಿದ್ದಾರೆ ಎನ್ನುವ ಮಾಹಿತಿ ಇದೆ.

ಬೊಮ್ಮಾಯಿ ನೇತೃತ್ವದಲ್ಲೇ ಎಲೆಕ್ಷನ್‌ ಎಂದಿದ್ದ ಶಾ
ಹೌದು..ಅಮಿತ್ ಶಾ ಅವರು ದಾಣಗೆರೆಗೆ ಆಗಮಿಸಿದ್ದ ವೇಳೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ವಿಧಾನಸಭಾ ಚುನಾವಣೆ ಎದುರಿಸಲಾಗುವುದು ಎಂದು ಹೇಳಿದ್ದರು. ಅಮಿತ್‌ ಶಾ ನೀಡಿದ ಹೇಳಿಕೆಗೆ  ಭಾರೀ ಚರ್ಚೆಗೆ ಗ್ರಾಸವಾಗಿತ್ತು, ಯಾಕೆಂದರೆ ಚುನಾವಣೆ ಹಾಗೂ ಪ್ರಮುಖ ನಿರ್ಧಾರಗಳ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರ ನೇತೃತ್ವದಲ್ಲಿ ತೆಗೆದುಕೊಳ್ಳಬಹುದು ಅಂದುಕೊಂಡಿದ್ದ ರಾಜ್ಯ ಬಿಜೆಪಿಯಲ್ಲಿ ಇದು ತಲ್ಲಣ ಸೃಷ್ಟಿಸಿತ್ತು. ಆದ್ರೆ, ಇದೀಗ ಏಕಾಏಕಿ ಬೊಮ್ಮಾಯಿ ಬದಲಾವಣೆ ಮಾತುಗಳು ಕೇಳಿಬರುತ್ತಿವೆ.

ಬಿಜೆಪಿ ರಾಜ್ಯ ಕಾರ್ಯಕಾರಣಿ
ಹೈಕಮಾಂಡ್ ರಾಜ್ಯಕ್ಕೆ ಬರುವ ಮುನ್ನ ಪೂರ್ವ ತಯಾರಿಗಾಗಿ ಡಿಸೆಂಬರ್ 28 ಮತ್ತು 29ರಂದು ಹುಬ್ಬಳ್ಳಿಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆ ನಡೆಯಲಿದೆ. ವಿಧಾನ ಪರಿಷತ್ ಚುನಾವಣೆ ಫಲಿತಾಂಶ, ಮುಂದೆ ಬರಲಿರುವ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಬಗ್ಗೆಯೂ ಕಾರ್ಯಕಾರಣಿ ಸಭೆಯಲ್ಲಿ ಚರ್ಚೆಗಳು ನಡೆಯಲಿವೆ.

ಒಟ್ಟಿನಲ್ಲಿ ರಾಜ್ಯ ಬಿಜೆಪಿಯಲ್ಲಿ ಮತ್ತೆ ನಾಯಕತ್ವ ಬದಲಾವಣೆ ಕೂಗಿನ ಮದ್ಯೆ ದಿಲ್ಲಿ ನಾಯಕರು ಕರ್ನಾಟಕಕ್ಕೆ ಆಗಮಿಸುತ್ತಿರುವುದು ಸಂಚಲನ ಮೂಡಿಸಿದ್ದು, ಏನೆಲ್ಲಾ ಬದಲಾವಣೆಗಳು ಆಗುತ್ತವೆ ಎನ್ನುವುದನ್ನು ಕಾದುನೋಡಬೇಕಿದೆ.

Follow Us:
Download App:
  • android
  • ios