Asianet Suvarna News Asianet Suvarna News

ಪಕ್ಷ ಮಾಡುತ್ತಿರುವ ದೊಡ್ಡ ಅವಮಾನ: ಸ್ವಪಕ್ಷದ ವಿರುದ್ಧ ಬಿಜೆಪಿ ಶಾಸಕಿ ಅಸಮಾಧಾನ

* ಅಸಮಾಧಾನ ಹೊರಹಾಕಿದ ಬಿಜೆಪಿ ಮಹಿಳಾ ಶಾಸಕಿ
* ಸಾಮಾಜಿಕ ಜಾಲತಾಣಗಳಲ್ಲಿ ಅಸಮಾಧಾನ ವ್ಯಕ್ತಪಡಿಸಿದ ಪೂರ್ಣಿಮಾ
* ಮಹಿಳಾ ಶಾಸಕಿಯವರಿಗೂ ಪಕ್ಷ ಮಾಡುತ್ತಿರುವ ದೊಡ್ಡ ಅವಮಾನ ಎಂದು ಅಸಮಾಧಾನ

BJP hiriyur MLA Poornima Krishnappa disappoints On Party Over Missed Minister Post rbj
Author
Bengaluru, First Published Aug 4, 2021, 4:19 PM IST
  • Facebook
  • Twitter
  • Whatsapp

ಬೆಂಗಳೂರು, (ಆ.04): ಈ ಬಾರಿಯ ಬೊಮ್ಮಾಯಿ ಕ್ಯಾಬಿನೆಟ್‌ನಲ್ಲಿ ಶಶಿಕಲಾ ಜೊಲ್ಲೆ ಅವರಿಗೆ ಕೊಕ್ ಕೊಟ್ಟು ಹಿರಿಯೂರು ಕ್ಷೇತ್ರದ ಬಿಜೆಪಿ ಶಾಸಕಿ ಪೂರ್ಣಿಮಾ ಕೃಷ್ಣಪ್ಪ ಅವರಿಗೆ ಸಚಿವ ಸ್ಥಾನ ನೀಡಲಾಗುತ್ತೆ ಎನ್ನುವ ಚರ್ಚೆಗಳಾಗಿದ್ದರು. ಆದ್ರೆ, ಕೊನೆಯಲ್ಲಿ ಹೈಕಮಾಂಡ್ ಜೊಲ್ಲೆ ಅವರಿಗೆ ಮಣೆ ಹಾಕಿದ್ದು, ಪೂರ್ಣಿಮಾ ಅವರಿಗೆ ನಿರಾಸೆಯಾಗಿದೆ.

ಭುಗಿಲೆದ್ದ ಅಸಮಾಧಾನ: ಸಿಎಂವಿರುದ್ಧ ಸಂಘ ಪರಿವಾರಕ್ಕೆ ದೂರು ನೀಡಲು ನಿರ್ಧರಿಸಿದ ಶಾಸಕ

ಇನ್ನು ಚಿವ ಸ್ಥಾನ ಕೈತಪ್ಪಿದ್ದಕ್ಕೆ ಈ ಬಗ್ಗೆ ಪೂರ್ಣಿಮಾ ಅವರು ಸಾಮಾಜಿಕ ಜಾಲತಾಣಗಳಲ್ಲಿ ಅಸಮಾಧಾನ ಹೊರಹಾಕಿದ್ದಾರೆ. ಅದು ಈ ಕೆಳಗಿನಂತಿದೆ.

ಎಲ್ಲರಿಗೂ ನಮಸ್ಕಾರ,
ಕಳೆದ ವಿಧಾನಪರಿಷತ್ ಚುನಾವಣೆಯಲ್ಲಿ ನಮ್ಮ ಮನೆಯವರು  ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಇದ್ದಾಗಲೂ ನಾನು ಪಕ್ಷನಿಷ್ಠೆ ಪಕ್ಷದ ಸಿದ್ಧಾಂತದ ಅಡಿಯಲ್ಲಿ ಕೆಲಸ ಮಾಡಿ ಶಿರಾ ಬೈ ಎಲೆಕ್ಷನ್ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳನ್ನು ಪಕ್ಷಕ್ಕೆ ತರುವಲ್ಲಿ ಯಶಸ್ವಿಯಾಗಿದೆ ಹಾಗೂ ಎಂಎಲ್ಸಿ ಎಲ್ಲೂ ಕೂಡ ನನ್ನ ಯಜಮಾನರ ಪರವಾಗಿ ಪ್ರಚಾರ ಮಾಡಿರಲಿಲ್ಲ, ಕಳೆದ ಬಸವಕಲ್ಯಾಣ ಉಪಚುನಾವಣೆಯಲ್ಲಿ ಮುಖ್ಯಮಂತ್ರಿಗಳ ಆದೇಶದಂತೆ ಕ್ಷೇತ್ರದಲ್ಲಿ ಓಡಾಡಿ ಗೊಲ್ಲ ಸಮುದಾಯದ ಹೆಚ್ಚು ಮತಗಳನ್ನು ಕೂಡ ಕ್ಷೇತ್ರದಲ್ಲಿ ಪಕ್ಷಕ್ಕೆ  ತಂದಿದ್ದೆ. 

ಮುಖ್ಯವಾಗಿ ಕಳೆದ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ಮಾಜಿ ಪ್ರಧಾನಿಗಳನ್ನು ಸೋಲಿಸಲು ನಮ್ಮ ಸಮುದಾಯದ ಮತಗಳು ಹೆಚ್ಚು ನಿರ್ಣಯ ವಾಗಿದ್ದವು ಪಕ್ಷವು ಅದನ್ನೆಲ್ಲ ಮರೆತಿದೆ. ಹಲವು ಜಿಲ್ಲೆಯ ಲೋಕಸಭಾ ಚುನಾವಣೆಗಳಲ್ಲಿ ನಮ್ಮ ಸಮುದಾಯದ ಹಾಗೂ ಇತರೆ ಹಿಂದುಳಿದ ಸಮಾಜಗಳನ್ನು ಸಂಘಟನೆ ಮಾಡಿ ಪಕ್ಷಕ್ಕೆ ಹೆಚ್ಚು ಮತಗಳನ್ನು ನೀಡುವಲ್ಲಿ ಯಶಸ್ವಿಯಾಗಿದೆ. ಎಲ್ಲವನ್ನು ಮರೆತು ಪಕ್ಷ ಈಗ ಜಾಣ ಕುರುಡರಂತೆ ವರ್ತಿಸುತ್ತಿರುವುದು ನೋವುಂಟು ಮಾಡಿದೆ.

ರಾಜ್ಯದಲ್ಲಿ ಗೊಲ್ಲ ಸಮುದಾಯದಿಂದ ಏಕೈಕ ವಿಧಾನಸಭಾ ಜನಪ್ರತಿನಿಧಿಯಾಗಿ ವಿಧಾನಸಭೆ ಪ್ರವೇಶಿಸಿದ್ದ ನಾನು ಎಂದು ಪಕ್ಷ ಬಾಹಿರ ಚಟುವಟಿಕೆಯಲ್ಲಿ ಇರಲಿಲ್ಲ, ಯಾವುದೇ ಹಗರಣ ನನ್ನ ಸುತ್ತಿ ಕೊಂಡಿರಲಿಲ್ಲ ಇಂದು ಪಕ್ಷ ತೆಗೆದುಕೊಂಡಿರುವ ನಿರ್ಧಾರ ಮನಸ್ಸಿಗೆ ತುಂಬಾ ಘಾಸಿಯಾಗಿದೆ. ಹಗರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಸಚಿವರಿಗೆ ಮತ್ತೆ ಸಚಿವ ಸ್ಥಾನ ನೀಡಿ ಒಂದೇ ಮನೇಲಿ ಎರಡು ಮೂರು ಅಧಿಕಾರ ನೀಡಿದೆ. ಯಾವುದೇ ಹಗರಣ ಇಲ್ಲದೆ ಇರುವ ಇನ್ನೊಬ್ಬ ಮಹಿಳೆಗೂ ಸಚಿವ ಸ್ಥಾನ ನೀಡಿದರೆ ಸಂತೋಷದಿಂದ ಸ್ವಾಗತಿಸುತ್ತಿದೆ. ಸ್ವಂತ ಬಲದಿಂದ ಗೆದ್ದಿರುವ ನನಗೂ ಹಾಗೂ ಇನ್ನೊಬ್ಬ ಮಹಿಳಾ ಶಾಸಕಿಯವರಿಗೂ ಇದು ಪಕ್ಷ ಮಾಡುತ್ತಿರುವ ದೊಡ್ಡ ಅವಮಾನ. ಚಿತ್ರದುರ್ಗ ಜಿಲ್ಲೆಯಲ್ಲಿ ಗೂಳಿಹಟ್ಟಿ ಶೇಖರ್ ಅವರು, ಚಂದ್ರಪ್ಪರಂತಹ ಹಿರಿಯ ನಾಯಕರು ಮತ್ತು ಆರು ಬಾರಿ ಗೆದ್ದಂತಹ ತಿಪ್ಪಾರೆಡ್ಡಿ  ಅವರಿಗಾದರೂ ಸಚಿವ ಸ್ಥಾನ ನೀಡಬಹುದಿತ್ತು.

 ಇದು ಪಕ್ಷವು ನಮ್ಮ ಜಿಲ್ಲೆಗೆ ಮಾಡುತ್ತಿರುವ ಅವಮಾನ. ವಿಧಾನಸಭೆ, ಲೋಕಸಭೆ ಚುನಾವಣೆಗಳಲ್ಲಿ ರಾಜ್ಯದ ಗೊಲ್ಲ ಸಮುದಾಯವು 80ರಷ್ಟು ಭಾಗವು ಬಿಜೆಪಿಗೆ ಮತ ನೀಡಿರುವುದು ಪಕ್ಷ ಮರೆಯಬಾರದಿತ್ತು.ರಾಜ್ಯದಲ್ಲಿ 40 ಲಕ್ಷಕ್ಕೂ ಹೆಚ್ಚು ಗೊಲ್ಲ ಸಮುದಾಯದ ಮತಗಳಿದ್ದು,ಒಂದು ಸ್ಥಾನ ನೀಡದೇ ಇರುವುದು ತುಂಬಾ ನೋವುಂಟು ಮಾಡಿದೆ.
ರಾಜ್ಯ ಸಂಪುಟಕ್ಕೆ ನೂತನವಾಗಿ ಸೇರ್ಪಡೆಯಾಗಿರುವ ಎಲ್ಲಾ ಸಚಿವರಿಗೂ ಹೃದಯಪೂರ್ವಕ ಅಭಿನಂದನೆಗಳು.

Follow Us:
Download App:
  • android
  • ios