* ಕಾರ್ಕಳದ ಕಾಂಗ್ರೆಸ್ ಕಾರ್ಯಕರ್ತ ರಾಧಾಕೃಷ್ಣ ನಾಯಕ್ ಮೇಲೆ ಹಲ್ಲೆ ಪ್ರಕರಣ* ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ವಿರುದ್ಧ ಬಿಜೆಪಿ ಕಿಡಿ* ಸರಣಿ ಟ್ವೀಟ್ ಮೂಲಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ

ಬೆಂಗಳೂರು, (ಜುಲೈ.09): ಕಾರ್ಕಳದ ಕಾಂಗ್ರೆಸ್ ಕಾರ್ಯಕರ್ತ ರಾಧಾಕೃಷ್ಣ ನಾಯಕ್ ಮೇಲೆ ಪೊಲೀಸರ ಹಲ್ಲೆ ಕ್ರಮವನ್ನು ಖಂಡಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಿಡಿಕಾರಿದೆ.

ಸಿದ್ದರಾಮಯ್ಯ ಅವರ ಪಾಕಿಸ್ತಾನ ಪ್ರೇಮ ಈ ಹಿಂದೆಯೇ ಪ್ರಕಟವಾಗಿತ್ತು. ಪಾಕಿಸ್ತಾನವನ್ನು ಪ್ರೇಮಿಸುವ ಸಮಾಜಘಾತುಕ ಸಂಘಟನೆಗಳ ಕೇಸ್‌ ಹಿಂಪಡೆದಿದ್ದರು. ಈಗ ಶತ್ರುರಾಷ್ಟ್ರ ಪಾಕಿಸ್ತಾನದ ಪರವಾಗಿ ಬರೆದ ವ್ಯಕ್ತಿಯ ಪರ ಸಿದ್ದರಾಮಯ್ಯ ಆದಿಯಾಗಿ ಕಾಂಗ್ರೆಸ್‌ನ ಎಲ್ಲಾ ನಾಯಕರು ತೋರ್ಪಡಿಸುತ್ತಿರುವ ಕಾಳಜಿ ದೇಶದ ಹಿತಾಸಕ್ತಿಗೆ ಮಾರಕವಾಗಿದೆ ಎಂದು ಟ್ವಿಟ್ಟರ್‌ನಲ್ಲಿ ವಾಗ್ದಾಳಿ ನಡೆಸಿದೆ.

ದೇಶದ್ರೋಹ ಎಂದರೇನು? ಸಿದ್ದುಗೆ ಬಿಜೆಪಿ ಶಾಸಕ ಗುದ್ದು..!

Scroll to load tweet…

ಈ ಹಿಂದೆ ಗೋ ಕಳ್ಳರ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸಿದ್ದ ಸಿದ್ದರಾಮಯ್ಯ, ಈಗ ಪಾಕಿಸ್ತಾನ ಪ್ರೇಮಿಯ ಪರ ನಿಂತಿದ್ದಾರೆ. ಕಾಂಗ್ರೆಸ್‌ ನಾಯಕರ ಒಲವು, ನಿಲುವುಗಳೆಲ್ಲ ದೇಶದ ವಿರುದ್ಧವಾಗಿರುವವರ ಪರವಾಗಿರುತ್ತದೆ. ಸೈನಿಕರ ಸಾವು ಬಯಸುವ ವ್ಯಕ್ತಿಯನ್ನು ಅಮಾಯಕ ಎಂದು ಬಿಂಬಿಸುವ ಏಕೈಕ ಪಕ್ಷವೊಂದಿದ್ದರೆ, ಅದು ಕಾಂಗ್ರೆಸ್‌ ಮಾತ್ರ ಎಂದು ಬಿಜೆಪಿ ಟ್ವೀಟ್ ಮಾಡಿದೆ.

Scroll to load tweet…