* ಹಾನಗಲ್, ಸಿಂದಗಿ ಉಪಚುನಾವಣೆ ಫಲಿತಾಂಶ ಪ್ರಕಟ* ಬಿಜೆಪಿ ಹಾಗೂ ಕಾಂಗ್ರೆಸ್ ತಲಾ ಒಂದು ಕ್ಷೇತ್ರದಲ್ಲಿ ಗೆಲುವು* ಕಾಂಗ್ರೆಸ್‌ಗೆ ಟ್ವಿಟ್ಟರ್ ಮೂಲಕ ಪ್ರಶ್ನೆಗಳ ಸುರಿಮಳೆ ಸುರಿಸಿದ ಬಿಜೆಪಿ 

ಬೆಂಗಳೂರು, (ನ.02): ಸಿಂದಗಿ ಮತ್ತು ಹಾನಗಲ್ ಉಪಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ತಲಾ ಒಂದು ಕ್ಷೇತ್ರದಲ್ಲಿ ಗೆಲುವು ಸಾಧಿಸಿವೆ. ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ಜಯಗಳಿಸಿದ್ರೆ, ಹಾನಗಲ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಶ್ರೀನಿವಾಸ್ ಮಾನೆ ಗೆಲುವಿನ ನಗೆ ಬೀರಿದ್ದಾರೆ.

ಇನ್ನು ಈ ಬೈ ಎಲೆಕ್ಷನ್‌ಗೆ ಸಂಬಂಧಿಸಿದಂತೆ ಬಿಜೆಪಿ ಸರಣಿ ಟ್ವೀಟ್‌ ಮಾಡಿದ್ದು, ಕಾಂಗ್ರೆಸ್‌ನಲ್ಲಿ ಮಹಾ ಸ್ಫೋಟಕ್ಕೆ ಕಾರಣವಾಗಲಿದೆ ಎಂದಿದೆ.

ಹಾನಗಲ್ ಸೋಲು, ಸಿಎಂಗೆ ಮುಖಭಂಗ: ಬಿಜೆಪಿ ಆಂತರಿಕ ವಲಯದಲ್ಲಿ ಗಂಭೀರ ಚರ್ಚೆ

ಕೆಲವರು ರಾಜಕೀಯದಲ್ಲಿ ಅಜೆಂಡಾ ಇಟ್ಟುಕೊಂಡಿರುತ್ತಾರೆ, ಮೂರ್ನಾಲ್ಕು ಆಕಾಂಕ್ಷಿಗಳು ಇರುತ್ತಾರೆ ಎಂಬ ಡಿಕೆ ಶಿವಕುಮಾರ್ ಅವರ ಹೇಳಿಕೆಗೂ ಮತ್ತೆ ಮುಖ್ಯಮಂತ್ರಿ ಆಗಬೇಕೆಂಬ ಸಿದ್ದರಾಮಯ್ಯ ಅವರ ಬಯಕೆಗೂ ಸಂಬಂಧವಿದೆ. ಉಪಚುನಾವಣೆ ಫಲಿತಾಂಶ ಪಕ್ಷದಲ್ಲಿ ಮಹಾ ಸ್ಫೋಟಕ್ಕೆ ಕಾರಣವಾಗಲಿದೆ.

Scroll to load tweet…

ಸಿದ್ದರಾಮಯ್ಯ ಅವರ ಬಣ ನೀಡುತ್ತಿರುವ ಒಳ ಏಟಿನಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತತ್ತರಿಸಿ ಹೋಗಿದ್ದಾರೆ. ಉಪಚುನಾವಣೆ ಫಲಿತಾಂಶದ ದಿನವೇ ಡಿಕೆಶಿ ಅವರು ವಿಷಾದದ ಮಾತುಗಳನ್ನಾಡಿದ್ದಾರೆ. ಗೆಲುವನ್ನು ಸಂಭ್ರಮಿಸುವುದಕ್ಕೂ ಕೆಪಿಸಿಸಿ ಅಧ್ಯಕ್ಷರಿಗೆ ಅವರಿಗೆ ಸಾಧ್ಯವಾಗುತ್ತಿಲ್ಲವೇ' ಎಂದು ಬಿಜೆಪಿ ಪ್ರಶ್ನಿಸಿದೆ.

Scroll to load tweet…

ಒಂದು ಹುದ್ದೆಗೆ ಮೂರ್ನಾಲ್ಕು ಆಕಾಂಕ್ಷಿಗಳು, ಕುರ್ಚಿ ಕಾಲಿ ಮಾಡಿಸಲು ಪ್ರಯತ್ನ ಮಾಡುತ್ತಾರೆ, ಮ್ಯೂಸಿಕಲ್ ಚೇರ್‌ನಲ್ಲಿ ಸಿಲುಕಿಕೊಂಡಿದ್ದೇವೆ ಎಂದು ಡಿಕೆಶಿ ಅವರು ವಿಷಾದ ವ್ಯಕ್ತಪಡಿಸುತ್ತಿರುವುದೇಕೆ? ಹಾನಗಲ್ ಫಲಿತಾಂಶದ ಕ್ರೆಡಿಟ್‌ಗಾಗಿ ಕಾಂಗ್ರೆಸ್‌ನಲ್ಲಿ ಒಳಜಗಳ ತೀವ್ರಗೊಂಡಿದೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಸಿದ್ದರಾಮಯ್ಯ ತಾನು ಸಿಎಂ ಆಕಾಂಕ್ಷಿ ಎಂದು ಮತ್ತೆ ವಾದ ಮಂಡಿಸಿದ್ದಾರೆ. ಅವಕಾಶ ಸಿಕ್ಕಾಗಲೆಲ್ಲ ಡಿಕೆಶಿ ಅವರನ್ನು ಬಗ್ಗುಬಡಿಯುವ ಪ್ರಯತ್ನ ನಡೆಯುತ್ತಿದೆ. ಮತ್ತೆ ಮತ್ತೆ ಹೇಳುತ್ತಿದ್ದೇವೆ, ಡಿಕೆಶಿ ಕಾಸು, ಸಿದ್ದರಾಮಯ್ಯ ಬಾಸು' ಎಂದು ಬಿಜೆಪಿ ಟ್ವೀಟ್‌ನಲ್ಲಿ ಉಲ್ಲೇಖಿಸಿದೆ.

Scroll to load tweet…

'ಕೆಲವರು ರಾಜಕೀಯದಲ್ಲಿ ಅಜೆಂಡಾ ಇಟ್ಟುಕೊಂಡಿರುತ್ತಾರೆ, ಮೂರ್ನಾಲ್ಕು ಆಕಾಂಕ್ಷಿಗಳು ಇರುತ್ತಾರೆ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೂ ಮತ್ತೆ ಮುಖ್ಯಮಂತ್ರಿ ಆಗಬೇಕೆಂಬ ಸಿದ್ದರಾಮಯ್ಯ ಅವರ ಬಯಕೆಗೂ ಸಂಬಂಧವಿದೆ. ಉಪಚುನಾವಣೆ ಫಲಿತಾಂಶವು ಕಾಂಗ್ರೆಸ್ ಪಕ್ಷದಲ್ಲಿ ಮಹಾ ಸ್ಫೋಟಕ್ಕೆ ಕಾರಣವಾಗಲಿದೆ.

ಡಿಕೆಶಿ ಅವರೇ ಯಾರ ಖುರ್ಚಿ ಖಾಲಿ ಮಾಡಲಾಗುತ್ತಿದೆ? ಯಾವ ಖುರ್ಚಿಗೆ ಎಷ್ಟು ಆಕಾಂಕ್ಷಿಗಳು? ಮ್ಯೂಸಿಕಲ್ ಚೇರ್‌ನಲ್ಲಿ ಯಾರ್‍ಯಾರು ಸಿಕ್ಕಿಕೊಂಡಿದ್ದಾರೆ? ದೀಪಾವಳಿಯ ಹೊಸ್ತಿಲಲ್ಲೂ ಇಷ್ಟೊಂದು ವಿಷಾದವೇಕೆ' ಎಂದು ಡಿಕೆಶಿ ಅವರ ಹೇಳಿಕೆಯ ವಿಡಿಯೊವನ್ನು #ಅವಕಾಶವಾದಿಕಾಂಗ್ರೆಸ್ ಹ್ಯಾಷ್‌ಟ್ಯಾಗ್‌ನೊಂದಿಗೆ ಪ್ರಶ್ನಿಸಿದೆ.

'ಉಪಚುನಾವಣೆಗೆ ಮುನ್ನ ಈ ಉಪಚುನಾವಣೆ ಮುಂದಿನ ಚುನಾವಣೆಗೆ ದಿಕ್ಸೂಚಿಯಲ್ಲ ಎನ್ನುತ್ತಿದ್ದ ಕಾಂಗ್ರೆಸ್ ನಾಯಕರು ಈಗ ಈ ಫಲಿತಾಂಶ ಕೇಂದ್ರ ಸರ್ಕಾರದ ವಿರುದ್ಧದ ಜನಾದೇಶ ಎನ್ನುತ್ತಿದ್ದಾರೆ. ಸಿಂದಗಿಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ದಾಖಲಿಸಿದೆ ಹಾಗಾದರೆ ಸಿಂದಗಿ ಫಲಿತಾಂಶದ ಬಗ್ಗೆ ನಿಮ್ಮ ವ್ಯಾಖ್ಯಾನ ಏನು' ಎಂದು ಕಾಂಗ್ರೆಸ್‌ ನಾಯಕರಿಗೆ ಬಿಜೆಪಿ ಪ‍್ರಶ್ನಿಸಿದೆ.

Scroll to load tweet…

ಉಪಚುನಾವಣೆ ಫಲಿತಾಂಶದ ದಿನವೇ ಡಿಕೆಶಿ ಅವರು ವಿಷಾದದ ಮಾತುಗಳನ್ನಾಡಿದ್ದಾರೆ. ಗೆಲುವನ್ನು ಸಂಭ್ರಮಿಸುವುದಕ್ಕೂ ಕೆಪಿಸಿಸಿ ಅಧ್ಯಕ್ಷರಿಗೆ ಅವರಿಗೆ ಸಾಧ್ಯವಾಗುತ್ತಿಲ್ಲವೇ? ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್‌ಗೆ ಪ್ರಶ್ನೆಗಳ ಸುರಿಮಳೆ ಸುರಿಸಿದೆ.